6 ರಾತ್ರಿಕಾಲದಲ್ಲಿ ಚೀಲವನ್ನು ಹೆಗಲಿಗೇರಿಸಿ ಹೊರಗೆ ನಡಿ. ನೀನು ನೆಲವನ್ನು ನೋಡಲಾಗದಂತೆ ನಿನ್ನ ಮುಖವನ್ನು ಮುಚ್ಚಿಕೋ. ಇದೆಲ್ಲಾ ಮಾಡುವಾಗ ಜನರು ನಿನ್ನನ್ನು ನೋಡುತ್ತಿರಬೇಕು. ಯಾಕೆಂದರೆ ನಿನ್ನನ್ನು ನಾನು ಇಸ್ರೇಲರಿಗೆ ಒಂದು ನಿದರ್ಶನವಾಗಿ ಉಪಯೋಗಿಸುತ್ತಿದ್ದೇನೆ.”
6 ಅವರ ಕಣ್ಣ ಮುಂದೆ ಅದನ್ನು ಹೆಗಲ ಮೇಲೆ ಹಾಕಿ ಕತ್ತಲಲ್ಲಿ ಹೊತ್ತುಕೊಂಡು ಹೋಗು; ನೆಲವನ್ನು ನೋಡದಂತೆ ಮೋರೆಯನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಮುಂಗುರುತನ್ನಾಗಿ ಮಾಡಿದ್ದೇನೆ.
6 ಅವರ ಕಣ್ಣುಗಳ ಮುಂದೆ ಸಲಕರಣೆಗಳನ್ನು ಹೆಗಲಿನ ಮೇಲೆ ಹೊತ್ತುಕೊಂಡು ಮುಸ್ಸಂಜೆಯಲ್ಲಿ ಹೋಗಬೇಕು; ನೆಲವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ.”
ಆ ಬಳಿಕ ಒಂದು ಕಬ್ಬಿಣದ ರೊಟ್ಟಿ ಕಲ್ಲನ್ನು ನಿನಗೂ ನಗರಕ್ಕೂ ಮಧ್ಯೆ ಇಡು. ಅದು ನಿನಗೂ ನಗರಕ್ಕೂ ನಡುವೆ ಇರುವ ಕಬ್ಬಿಣದ ಗೋಡೆಯಂತಿರುವುದು. ಈ ರೀತಿಯಾಗಿ ನೀನು ಆ ನಗರಕ್ಕೆ ವಿರುದ್ಧವಾಗಿರುವಂತೆ ಕಂಡುಬರುವೆ. ನೀನು ಆ ನಗರಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧ ಮಾಡುವಿ. ಯಾಕೆಂದರೆ, ಶೀಬ್ರದಲ್ಲೇ ಏನು ಸಂಭವಿಸುತ್ತದೆ ಎಂಬುದಕ್ಕೆ ಇಸ್ರೇಲ್ ಜನರಿಗೆ ಇದು ಸೂಚನೆಯಾಗಿದೆ.
ಯಾರಿಗೂ ತನ್ನ ಗುರುತು ಸಿಕ್ಕದಂತೆ ಸೌಲನು ವೇಷವನ್ನು ಬದಲಾಯಿಸಿಕೊಂಡನು. ಸೌಲನು ತನ್ನ ಜನರಿಬ್ಬರೊಡನೆ ಅದೇ ರಾತ್ರಿಯಲ್ಲೇ ಆ ಬೇತಾಳಿಕಳನ್ನು ನೋಡಲು ಹೋದನು. ಸೌಲನು ಅವಳಿಗೆ, “ಬೇತಾಳದ ಮೂಲಕ ನನ್ನ ಭವಿಷ್ಯವನ್ನು ನನಗೆ ತೋರಿಸು, ನಾನು ಹೆಸರಿಸುವ ವ್ಯಕ್ತಿಯನ್ನು ಕರೆ” ಎಂದು ಕೇಳಿದನು.
ದಾವೀದನು ಆಲೀವ್ ಮರಗಳ ದಿಣ್ಣೆಯನ್ನೇರಿದನು. ಅವನು ಗೋಳಾಡುತ್ತಿದ್ದನು. ಅವನು ತಲೆಯ ಮೇಲೆ ಮುಸುಕೆಳೆದುಕೊಂಡು ಬರಿಗಾಲಿನಲ್ಲಿ ನಡೆದುಕೊಂಡು ಹೋದನು. ದಾವೀದನ ಜೊತೆಯಲ್ಲಿದ್ದ ಅವನ ಜನರೆಲ್ಲರೂ ತಲೆಯ ಮೇಲೆ ಮುಸುಕು ಹಾಕಿಕೊಂಡು ಗೋಳಾಡುತ್ತಾ ದಾವೀದನೊಂದಿಗೆ ಹೋದರು.
ಅವನು ತಪ್ಪಿಸಿಕೊಳ್ಳಲು ಪ್ರಯತ್ನ ಮಾಡುವನು. ಆದರೆ, ನಾನು (ಯೆಹೋವನು) ಅವನನ್ನು ಹಿಡಿಯುವೆನು. ಅವನು ನನ್ನ ಬಲೆಯೊಳಗೆ ಬೀಳುವನು. ನಾನು ಅವನನ್ನು ಕಸ್ದೀಯರ ದೇಶವಾದ ಬಾಬಿಲೋನಿಗೆ ತರುವೆನು. ಅವನು ಆ ದೇಶವನ್ನು ನೋಡುವುದಿಲ್ಲ; ಅಲ್ಲದೆ ಅವನು ಅಲ್ಲಿ ಸಾಯುವನು.
ಪ್ರಧಾನ ಯಾಜಕನಾದ ಯೆಹೋಶುವನೇ, ಅವನೊಂದಿಗೆ ಸೇವೆಮಾಡುವ ಇತರ ಯಾಜಕರೇ, ನನ್ನ ಮಾತಿಗೆ ಕಿವಿಗೊಡಿರಿ. ಈ ಗಂಡಸರು ಮುಂದೆ ಏನಾಗಬಹುದೆಂಬುದಕ್ಕೆ ನಿದರ್ಶನವಾಗಿದ್ದಾರೆ. ಆಗ ನಾನು ನನ್ನ ವಿಶೇಷ ಸೇವಕನನ್ನು ಕರೆತರುವೆನು. ಆತನ ಹೆಸರು ಕೊಂಬೆ.