10 “ಮತ್ತೆಮತ್ತೆ ಆ ಸುಳ್ಳು ಪ್ರವಾದಿಗಳು ನನ್ನ ಜನರಿಗೆ ಸುಳ್ಳು ಹೇಳಿದರು. ಅವರು ಶಾಂತಿ ಇರುವದೆಂದು ಹೇಳಿದರು. ಆದರೆ ಶಾಂತಿ ಇರಲಿಲ್ಲ. ಅದು ಈ ರೀತಿಯಲ್ಲಿದೆ: ಜನರು ಬಲಹೀನವಾದ ಗೋಡೆಯನ್ನು ಕಟ್ಟುತ್ತಾರೆ; ಅದು ಬಲವಾಗಿ ಕಾಣುವಂತೆ ಮಾಡಲು ಪ್ರವಾದಿಗಳು ಅದಕ್ಕೆ ತೆಳುವಾದ ಮಡ್ಡಿ ಮಾಡುತ್ತಾರೆ.
10 “ ‘ಏಕೆಂದರೆ ಸಮಾಧಾನವಿಲ್ಲದಿರುವಾಗ ಅವರು, “ಸಮಾಧಾನವಿದೆ,” ಎಂದು ಹೇಳಿ, ನನ್ನ ಜನರನ್ನು ತಪ್ಪು ದಾರಿಗೆ ನಡೆಸಿದ್ದಾರೆ. ಒಬ್ಬನು ದುರ್ಬಲ ಗೋಡೆಯನ್ನು ಕಟ್ಟಿದರೆ, ಈ ಪ್ರವಾದಿಗಳ ಗುಂಪು ಅದಕ್ಕೆ ಸುಣ್ಣ ಹಚ್ಚಿದ್ದಾರೆ.
“ಪ್ರವಾದಿಗಳು ಜನರನ್ನು ಎಚ್ಚರಿಸುವದಿಲ್ಲ. ಸತ್ಯವನ್ನು ಮುಚ್ಚಿಡುತ್ತಾರೆ. ಒಂದು ಗೋಡೆಯನ್ನು ದುರಸ್ತಿ ಮಾಡದೆ ಅದರ ರಂಧ್ರಗಳನ್ನು ಗಾರೆಯಿಂದ ಮುಚ್ಚುವ ಕೆಲಸಗಾರರಂತಿದ್ದಾರೆ. ಅವರು ಸುಳ್ಳುದರ್ಶನಗಳನ್ನೆ ನೋಡುತ್ತಾರೆ. ತಮ್ಮ ಭವಿಷ್ಯದ ಬಗ್ಗೆ ಶಕುನದ ಮೂಲಕ ತಿಳಿದುಕೊಳ್ಳುವುದೆಲ್ಲ ಸುಳ್ಳಾಗಿರುತ್ತದೆ. ಅವರು, ‘ನನ್ನ ಒಡೆಯನಾದ ಯೆಹೋವನು ಹೇಳಿದನು’ ಎಂಬುದಾಗಿ ಸುಳ್ಳು ಹೇಳುವರು. ಆದರೆ ನಿಜವಾಗಿಯೂ ಯೆಹೋವನು ಅವರ ಕೂಡ ಮಾತನಾಡಲಿಲ್ಲ.
“ಇವೆಲ್ಲಾ ಇಸ್ರೇಲಿನ ಸುಳ್ಳು ಪ್ರವಾದಿಗಳಿಗಾಗುವದು. ಆ ಪ್ರವಾದಿಗಳು ಜೆರುಸಲೇಮಿನ ಬಗ್ಗೆ ಪ್ರವಾದಿಸಿದರು ಮತ್ತು ಶಾಂತಿಯಿಲ್ಲದಿರುವಾಗಲೂ ಶಾಂತಿಯ ದರ್ಶನಗಳನ್ನು ಕಂಡರು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.
ಆಗ ನಾನು ಯೆಹೋವನಿಗೆ, “ನನ್ನ ಒಡೆಯನಾದ ಯೆಹೋವನೇ, ಪ್ರವಾದಿಗಳು ಜನರಿಗೆ ಬೇರೆಯದನ್ನೇ ಹೇಳಿದರು. ಅವರು ಯೆಹೂದದ ಜನರಿಗೆ, ‘ನೀವು ಶತ್ರುವಿನ ಖಡ್ಗಕ್ಕೆ ತುತ್ತಾಗುವದಿಲ್ಲ. ನೀವೆಂದಿಗೂ ಹಸಿವಿನಿಂದ ಬಳಲುವದಿಲ್ಲ, ಯೆಹೋವನು ಈ ದೇಶದಲ್ಲಿ ನಿಮಗೆ ನೆಮ್ಮದಿಯನ್ನು ದಯಪಾಲಿಸುವನು’ ಎಂದು ಹೇಳುತ್ತಿದ್ದರು” ಎಂದೆನು.
ಪ್ರವಾದಿಗಳು ಮತ್ತು ಯಾಜಕರು ನಮ್ಮ ಜನರ ಆಳವಾದ ಗಾಯಗಳನ್ನು ಕೇವಲ ಅಲ್ಪಗಾಯಗಳಂತೆ ಪರಿಗಣಿಸಿ ಚಿಕಿತ್ಸೆ ಕೊಡುತ್ತಿದ್ದಾರೆ. “ಎಲ್ಲಾ ಚೆನ್ನಾಗಿದೆ, ಎಲ್ಲಾ ಚೆನ್ನಾಗಿದೆ” ಎಂದು ಅವರು ಹೇಳುತ್ತಾರೆ. ಆದರೆ ಎಲ್ಲಾ ಚೆನ್ನಾಗಿಲ್ಲ.
ಆದರೆ ಜನರು ದೇವರ ಮಾತನ್ನು ಆಲಿಸಲಿಲ್ಲ. ಇಸ್ರೇಲರು ಕಾನಾನಿಗೆ ಬರುವುದಕ್ಕೆ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನಾಂಗಗಳು ಮಾಡಿದ್ದಕ್ಕಿಂತ ಹೆಚ್ಚು ಕೆಟ್ಟಕಾರ್ಯಗಳನ್ನು ಮನಸ್ಸೆಯಿಂದ ಪ್ರೇರಿತರಾಗಿ ಮಾಡಿದರು. ಇಸ್ರೇಲರು ಅವರ ದೇಶಗಳನ್ನು ವಶಪಡಿಸಿಕೊಳ್ಳಲು ಬಂದಾಗ ಯೆಹೋವನು ಆ ಜನಾಂಗಗಳನ್ನು ನಾಶಪಡಿಸಿದನು.
ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.
ಮುಂದಿನ ದಿನಗಳಲ್ಲಿ ಕೆಲವು ಜನರು ಸತ್ಯ ಬೋಧನೆಯನ್ನು ನಂಬುವುದಿಲ್ಲವೆಂದು ಪವಿತ್ರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಆ ಜನರು ಸುಳ್ಳಾಡುವ ದುರಾತ್ಮಗಳಿಗೆ ವಿಧೇಯರಾಗುವರು; ದೆವ್ವಗಳ ಬೋಧನೆಯನ್ನು ಅನುಸರಿಸುವರು.
ಗರ್ವಿಷ್ಟರು ಸಂತೋಷವಾಗಿದ್ದಾರೆ ಎಂದು ನಾವು ತಿಳಿಯುತ್ತೇವೆ. ದುಷ್ಟಜನರು ಸಫಲತೆ ಹೊಂದುತ್ತಿದ್ದಾರೆ, ದೇವರ ತಾಳ್ಮೆಯನ್ನು ಪರೀಕ್ಷಿಸಲು ದುಷ್ಕೃತ್ಯಗಳನ್ನು ಮಾಡುತ್ತಿದ್ದಾರೆ. ಆದರೆ ದೇವರು ಅವರನ್ನು ಶಿಕ್ಷಿಸಲಿಲ್ಲ” ಎಂದು ಹೇಳಿದಿರಿ.
ಈ ಜನರು ನನ್ನ ಮಾತುಗಳನ್ನು ಕೇಳಲು ಇಷ್ಟಪಡುವದಿಲ್ಲ. ಆದರೆ ಬೇರೊಬ್ಬನ ಸುಳ್ಳು ಮಾತುಗಳನ್ನು ಕೇಳಲು ಇಷ್ಟಪಡುವರು. ಸುಳ್ಳು ಪ್ರವಾದಿಯು ಬಂದು, “ನಿಮಗೆ ಒಳ್ಳೆಯ ಭವಿಷ್ಯವಿದೆ. ಬೇಕಾದಷ್ಟು ದ್ರಾಕ್ಷಾರಸ, ಮದ್ಯವು ನಿಮಗೆ ದೊರಕುವವು” ಎಂದು ಹೇಳಿದರೆ ಅವರು ಅವನನ್ನು ನಂಬಿ ಸ್ವೀಕರಿಸಿಕೊಳ್ಳುವರು.
“ನನ್ನ ಜನರು ತಪ್ಪಿಸಿಕೊಂಡ ಕುರಿಗಳಂತಿದ್ದಾರೆ. ಅವರ ಕುರುಬರು ಅವರನ್ನು ತಪ್ಪು ದಾರಿಗೆ ಎಳೆದಿದ್ದಾರೆ. ಅವರ ನಾಯಕರುಗಳು ಅವರನ್ನು ಬೆಟ್ಟಗಳಲ್ಲಿ ಅಲೆಯುವಂತೆ ಮಾಡಿದ್ದಾರೆ. ಅವರ ವಿಶ್ರಾಂತಿಸ್ಥಾನವನ್ನು ಅವರು ಮರೆತುಬಿಟ್ಟಿದ್ದಾರೆ.
ಆದರೆ ನಾವು ನೆಮ್ಮದಿಯಿಂದ ಇರುವೆವು ಎಂದು ಪ್ರವಾದಿಸುವ ಪ್ರವಾದಿಯು ನಿಜವಾಗಿಯೂ ಯೆಹೋವನಿಂದ ಕಳುಹಿಸಲ್ಪಟ್ಟಿರುವನೇ ಎಂಬುದನ್ನು ನಾವು ಪರೀಕ್ಷಿಸಬೇಕು. ಆ ಪ್ರವಾದಿಯ ಸಂದೇಶವು ಸತ್ಯವಾಗಿ ಪರಿಣಮಿಸಿದರೆ ಅವನು ನಿಜವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವನೆಂದು ಜನರು ತಿಳಿದುಕೊಳ್ಳಬಹುದು.”
ಕೆಲವು ಜನರು ಯೆಹೋವನ ನಿಜವಾದ ಸಂದೇಶಗಳನ್ನು ದ್ವೇಷಿಸುತ್ತಾರೆ. ಆದ್ದರಿಂದ ಆ ಪ್ರವಾದಿಗಳು ಆ ಜನರಿಗೆ ಬೇರೆಯದನ್ನೇ ಹೇಳುತ್ತಾರೆ. ಅವರು ‘ನಿಮಗೆ ಶುಭವಾಗುವುದು’ ಎನ್ನುತ್ತಾರೆ. ಕೆಲವು ಜನರು ಬಹಳ ಮೊಂಡರಾಗಿದ್ದಾರೆ. ಅವರು ತಮ್ಮ ಮನಸ್ಸಿಗೆ ಬಂದುದನ್ನೇ ಮಾಡುತ್ತಾರೆ. ಅವರಿಗೆ ಈ ಪ್ರವಾದಿಗಳು ‘ನಿಮಗೆ ಯಾವ ಕೇಡೂ ಸಂಭವಿಸುವದಿಲ್ಲ’ ಎಂದು ಹೇಳುತ್ತಾರೆ.
ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.
ಆಗ ಯೆರೆಮೀಯನೆಂಬ ನಾನು, “ನನ್ನ ಒಡೆಯನಾದ ಯೆಹೋವನೇ, ನೀನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮೋಸ ಮಾಡಿದೆ, ‘ನೀವು ಶಾಂತಿಯಿಂದ ಇರುವಿರಿ’ ಎಂದು ನೀನು ಅವರಿಗೆ ಹೇಳಿದೆ. ಆದರೆ ಈಗ ಅವರ ಕತ್ತಿನ ಮೇಲೆ ಖಡ್ಗ ಇದೆ” ಅಂದೆನು.
ಅವರು ಪ್ರವಾದಿಗಳಿಗೆ, “ನಾವು ಮಾಡಬೇಕಿರುವ ಕಾರ್ಯಗಳ ಬಗ್ಗೆ ದೈವೋಕ್ತಿ ನುಡಿಯಬೇಡಿ, ನಮಗೆ ಸತ್ಯವನ್ನು ತಿಳಿಸಬೇಡಿ. ನಮಗೊಪ್ಪುವ ಮನರಂಜನೆಯ ಮಾತುಗಳನ್ನಾಡಿ. ನಮಗೋಸ್ಕರ ಒಳ್ಳೆಯ ಸಂಗತಿಗಳನ್ನೇ ನಿಮ್ಮ ದರ್ಶನಗಳಲ್ಲಿ ನೋಡಿರಿ.
ಮೀಕಾಯೆಹುವಿನ ಬಳಿಗೆ ಹೋದ ರಾಜನ ಸೇವಕನು ಅವನಿಗೆ, “ಮೀಕಾಯೆಹುವೇ ಕೇಳು, ಎಲ್ಲಾ ಪ್ರವಾದಿಗಳೂ ರಾಜನು ಗೆಲ್ಲುವನು ಎಂದು ಪ್ರವಾದಿಸುತ್ತಿದ್ದಾರೆ. ಅದನ್ನೇ ನೀನು ಹೇಳಿ ಅರಸನಿಗೆ ಶುಭವನ್ನು ಹಾರೈಸಬೇಕು” ಅಂದನು.
ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ.
ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”