Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:13 - ಪರಿಶುದ್ದ ಬೈಬಲ್‌

13 ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ನಾನು ಸಿಟ್ಟುಗೊಂಡಿದ್ದೇನೆ. ಮತ್ತು ನಿಮಗೆ ವಿರುದ್ಧವಾಗಿ ಬಿರುಗಾಳಿಯನ್ನು ಕಳುಹಿಸುತ್ತೇನೆ. ನಾನು ಕೋಪಗೊಂಡಿದ್ದೇನೆ. ಆದ್ದರಿಂದ ಭಾರೀ ಮಳೆಯು ಬೀಳುವಂತೆ ಮಾಡುವೆನು. ನಾನು ಕೋಪಗೊಂಡಿದ್ದರಿಂದ ನಾಶಕರವಾದ ಆಲಿಕಲ್ಲು ಆಕಾಶದಿಂದ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶ ಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು, ನನ್ನ ರೋಷದಿಂದ ಆನೆಕಲ್ಲುಗಳು ಸುರಿಯುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಕೆಡವಿಹಾಕುವೆನು; ಅದನ್ನು ನಾಶಮಾಡಲು ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು; ರೋಷದಿಂದ ಆನೆಕಲ್ಲುಗಳು ಸುರಿಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವದು, [ನನ್ನ] ರೋಷದಿಂದ ಆನೆಕಲ್ಲುಗಳು ಸುರಿಯುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದನ್ನು ನನ್ನ ರೋಷದಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ, ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳು ಸುರಿಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:13
20 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಮಹಾಸ್ವರವನ್ನು ಜನರು ಕೇಳುವಂತೆ ಮಾಡುವನು. ತನ್ನ ಸಾಮರ್ಥ್ಯದ ಬಾಹುವು ಕೋಪದಿಂದ ನಡುಗುವದನ್ನು ಜನರು ನೋಡುವಂತೆ ಮಾಡುವನು. ಆ ಬಾಹುವು ಎಲ್ಲವನ್ನು ಸುಡುವ ದೊಡ್ಡ ಅಗ್ನಿಯಂತಿರುವದು. ಯೆಹೋವನ ಶಕ್ತಿಯು ಆಲಿಕಲ್ಲಿನಿಂದಲೂ ಮಳೆಯಿಂದಲೂ ಕೂಡಿರುವ ಬಿರುಗಾಳಿಯಂತಿರುವುದು.


ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲುಗಳು ಬಿದ್ದವು. ಆ ಆಲಿಕಲ್ಲುಗಳು ನೂರು ಪೌಂಡುಗಳಷ್ಟು ಭಾರವಾಗಿದ್ದವು. ಈ ಉಪದ್ರವದ ಕಾಟದಿಂದ ಜನರು ದೇವರನ್ನು ದೂಷಿಸಿದರು. ಈ ಉಪದ್ರವವು ಬಹಳ ಭೀಕರವಾಗಿತ್ತು.


ನಂತರ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರು ತನ್ನ ಜನರಿಗೆ ಅನುಗ್ರಹಿಸಿದ ಒಡಂಬಡಿಕೆಯನ್ನು ಇಟ್ಟಿದ್ದ ಪೆಟ್ಟಿಗೆಯು ಆತನ ಆಲಯದಲ್ಲಿ ಕಾಣಿಸಿತು. ಆಗ ಮಿಂಚುಗಳು ಹೊಳೆದವು, ಶಬ್ದಗಳಾದವು, ಗುಡುಗುಗಳಾದವು, ಭೂಕಂಪಗಳಾದವು ಮತ್ತು ಆಲಿಕಲ್ಲಿನ ಮಳೆಯೂ ಸುರಿಯಿತು.


ಆತನು ಬೆಂಕಿಯನ್ನೂ ಆಲಿಕಲ್ಲನ್ನೂ ಮಂಜನ್ನೂ ಹೊಗೆಯನ್ನೂ ಬಿರುಗಾಳಿಯನ್ನೂ ಉಂಟುಮಾಡಿದನು.


ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ರಕ್ತದಲ್ಲಿ ಕಲಸಿದ್ದ ಆಲಿಕಲ್ಲುಗಳ ಮತ್ತು ಬೆಂಕಿಯ ಮಳೆಯು ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರನೆಯ ಒಂದು ಭಾಗ ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋದವು; ಮತ್ತು ಮರಗಳಲ್ಲಿ ಮೂರನೆಯ ಒಂದು ಭಾಗ ಸುಟ್ಟುಹೋದವು.


ಯಾಕೆ ಹೀಗಾಯಿತು? ಯಾಕೆಂದರೆ ನಾನು ನಿಮ್ಮನ್ನು ಶಿಕ್ಷಿಸಿದೆನು. ನೀವು ನೆಟ್ಟ ಮರಗಳನ್ನು ನಾಶಮಾಡಲು ನಾನು ರೋಗವನ್ನು ಕಳುಹಿಸಿದೆನು. ನಿಮ್ಮ ಕೈಕೆಲಸವನ್ನು ಹಾಳುಮಾಡಲು ನಾನು ಆಲಿಕಲ್ಲಿನ ಮಳೆಯನ್ನು ಕಳುಹಿಸಿದೆನು. ನಾನು ಇಷ್ಟೆಲ್ಲಾ ಮಾಡಿದರೂ ನೀವು ಯಾರೂ ನನ್ನ ಬಳಿಗೆ ಬರಲಿಲ್ಲ.’ ಇದು ಯೆಹೋವನ ನುಡಿ.”


ಆದರೆ ಯೆಹೋವನು ಸಮುದ್ರದ ಮೇಲೆ ದೊಡ್ಡ ಬಿರುಗಾಳಿ ಬೀಸುವಂತೆ ಮಾಡಿದನು. ಬಿರುಗಾಳಿಯು ಸಮುದ್ರದಲ್ಲಿ ದೊಡ್ಡ ಅಲೆಗಳನ್ನು ಎಬ್ಬಿಸಿತು. ಬಿರುಗಾಳಿಯು ಬಲವಾಗಿದ್ದುದರಿಂದ ಹಡಗು ಒಡೆದುಹೋಗುವುದರಲ್ಲಿತ್ತು.


ಈಗ ಯೆಹೋವನಿಂದ ದಂಡನೆಯು ಬಿರುಗಾಳಿಯಂತೆ ಬರುವುದು. ಯೆಹೋವನ ಕೋಪವು ತೂಫಾನಿನಂತೆ ದುಷ್ಟರ ತಲೆಯ ಮೇಲೆ ಆರ್ಭಟಿಸಿ ಬೀಳುವುದು.


ಆತನು ಆಜ್ಞಾಪಿಸಲು ಬಲವಾದ ಗಾಳಿ ಬೀಸತೊಡಗಿತು; ಅಲೆಗಳು ದೊಡ್ಡದಾಗತೊಡಗಿದವು.


ಆತನು ಮಳೆಯನ್ನು ಕಲ್ಮಳೆಯನ್ನಾಗಿ ಪರಿವರ್ತಿಸಿದನು. ಅವರ ದೇಶದಲ್ಲಿ ಸಿಡಿಲುಗಳು ಹೊಡೆದವು.


ನಾನು ನಿಜವಾಗಿ ನನ್ನ ಕೋಪವನ್ನು ತೋರಿಸುವೆನು. ಹೌದು, ನಾನೇ ನಿಮ್ಮ ಪಾಪಗಳಿಗಾಗಿ ನಿಮ್ಮನ್ನು ಏಳರಷ್ಟಾಗಿ ದಂಡಿಸುವೆನು.


“ಯೋಬನೇ, ನಾನು ಹಿಮವನ್ನೂ ಆಲಿಕಲ್ಲನ್ನೂ ಇಟ್ಟಿರುವ ಉಗ್ರಾಣಗಳೊಳಗೆ ನೀನು ಎಂದಾದರೂ ಹೋಗಿರುವಿಯಾ?


ಉತ್ತರ ದಿಕ್ಕಿನಿಂದ ಒಂದು ದೊಡ್ಡ ಬಿರುಗಾಳಿ ಬರುವದನ್ನು ಯೆಹೆಜ್ಕೇಲನಾದ ನಾನು ನೋಡಿದೆನು. ಬಿರುಗಾಳಿಯೊಡನೆ ಕೂಡಿದ ಒಂದು ದೊಡ್ಡ ಮೋಡವು ಅಲ್ಲಿತ್ತು. ಅದರಿಂದ ಬೆಂಕಿಯು ಪ್ರಜ್ವಲಿಸುತ್ತಿತ್ತು. ಮೋಡದ ಸುತ್ತಲೂ ಬೆಳಕಿತ್ತು. ಬೆಂಕಿಯ ಮಧ್ಯದಲ್ಲಿ ಕಾದಲೋಹದಂತೆ ಹೊಳೆಯುತ್ತಿದ್ದ ಏನನ್ನೊ ಕಂಡೆನು.


ಗೋಡೆಯು ಬಿದ್ದಾಗ ಜನರು ಪ್ರವಾದಿಗಳಾದ ನಿಮ್ಮನ್ನು, ‘ನೀವು ಗೋಡೆಗೆ ಹಾಕಿದ ಗಾರೆ ಏನಾಯಿತು?’” ಎಂದು ಪ್ರಶ್ನಿಸುವರು.


ಇಕ್ಕಟ್ಟಿನ ಕಾಲಕ್ಕಾಗಿಯೂ ಯುದ್ಧಕದನಗಳ ಕಾಲಕ್ಕಾಗಿಯೂ ನಾನು ಅವುಗಳನ್ನು ಕೂಡಿಸಿಟ್ಟಿದ್ದೇನೆ.


ಕೋಪೋದ್ರಿಕ್ತನಾದ ಯೆಹೋವನು ಚೀಯೋನಿನ ಮಗಳ ಮೇಲೆ ಹೇಗೆ ಕಾರ್ಮೋಡಗಳು ಕವಿಯುವಂತೆ ಮಾಡಿದ್ದಾನೆ ನೋಡಿರಿ. ಆತನು ಇಸ್ರೇಲಿನ ವೈಭವವನ್ನು ಆಕಾಶದಿಂದ ಭೂಮಿಗೆ ಎಸೆದಿದ್ದಾನೆ. ಯೆಹೋವನಿಗೆ ಕೋಪ ಬಂದಾಗ ಆತನು ಇಸ್ರೇಲ್ ತನ್ನ ಪಾದಪೀಠವೆಂಬುದನ್ನು ಗಮನಕ್ಕೆ ತಂದುಕೊಳ್ಳಲಿಲ್ಲ.


ನನ್ನ ಕೋಪದ ಭರದಲ್ಲಿ ಯೆಹೋವನು ಇಸ್ರೇಲಿನ ಶಕ್ತಿಯನ್ನೆಲ್ಲ ಕತ್ತರಿಸಿಹಾಕಿದನು. ಆತನು ಇಸ್ರೇಲಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡನು. ಶತ್ರು ಬಂದಾಗ ಆತನು ಹೀಗೆ ಮಾಡಿದನು. ಅಗ್ನಿಜ್ವಾಲೆಗಳಂತೆ ಆತನು ಯಾಕೋಬಿನಲ್ಲಿ ಉರಿದನು. ಸುತ್ತಮುತ್ತಲೆಲ್ಲ (ಪ್ರತಿಯೊಂದನ್ನೂ) ದಹಿಸುವ ಬೆಂಕಿಯಂತೆ ಆತನಿದ್ದನು.


ಯೆಹೋವನು ವೈರಿಯಂತೆ ತನ್ನ ಬಿಲ್ಲನ್ನು ಬಾಗಿಸಿದನು. ತನ್ನ ಬಲಗೈಯಲ್ಲಿ ಖಡ್ಗವನ್ನು ಧರಿಸಿದನು: ಆತನು ಯೆಹೂದದ ಎಲ್ಲ ಆಕರ್ಷಕ ಜನರನ್ನು ಕೊಂದುಹಾಕಿದನು. ಆತನು ಶತ್ರುವಿನಂತೆ ಅವರನ್ನು ಕೊಂದನು. ಆತನು ತನ್ನ ರೋಷಾಗ್ನಿಯನ್ನು ಹೊರಸೂಸಿದನು. ಆತನು ಅದನ್ನು ಚೀಯೋನಿನ ಗುಡಾರಗಳ ಮೇಲೆ ಸುರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು