Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:14 - ಪರಿಶುದ್ದ ಬೈಬಲ್‌

14 ನೀವು ಗೋಡೆಗೆ ಗಾರೆ ಹಾಕಿದಿರಿ. ಆದರೆ ನಾನು ಇಡೀ ಗೋಡೆಯನ್ನೆ ನಾಶಮಾಡುವೆನು. ಅದನ್ನು ನೆಲಸಮ ಮಾಡುವೆನು. ಆ ಗೋಡೆಯು ನಿಮ್ಮ ಮೇಲೆ ಬಿದ್ದು ನಿಮ್ಮನ್ನು ಕೊಲ್ಲುವುದು. ಆಗ ನಾನು ಯೆಹೋವನೆಂದು ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ಸುಣ್ಣಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲ ಸಮಮಾಡಿ ಅದರ ಅಸ್ತಿವಾರವನ್ನು ಬಯಲುಪಡಿಸುವೆನು; ಅದು ಬಿದ್ದುಹೋಗುವುದು ಮತ್ತು ನೀವು ಅದರೊಳಗೆ ಸಿಕ್ಕಿಕೊಂಡು ನಾಶವಾಗುವಿರಿ ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೀನು ಸುಣ್ಣ ಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲಸಮಮಾಡಿ ಅದರ ಅಸ್ತಿವಾರವನ್ನು ಹೊರಗೆಡಹುವೆನು; ಅದು ಹೀಗೆ ಬಿದ್ದುಹೋಗುವಾಗ ನೀವು ಅದರೊಳಗೆ ಸಿಕ್ಕಿ ನಾಶವಾಗುವಿರಿ; ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲಸಮಮಾಡಿ ಅದರ ಅಸ್ತಿವಾರವನ್ನು ಬೈಲುಪಡಿಸುವೆನು; ಅದು ಬಿದ್ದು ಹೋಗುವದು, ಮತ್ತು ನೀವು ಅದರೊಳಗೆ ಸಿಕ್ಕಿಕೊಂಡು ನಾಶವಾಗುವಿರಿ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ, ನೆಲಸಮಮಾಡಿ, ಅದರ ಅಸ್ತಿವಾರವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವಾಗ, ನೀವು ಅದರಲ್ಲಿ ನಾಶವಾಗುವಿರಿ. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:14
18 ತಿಳಿವುಗಳ ಹೋಲಿಕೆ  

ಆದ್ದರಿಂದ ನಾನು ಸಮಾರ್ಯವನ್ನು ಕಲ್ಲಿನ ರಾಶಿಯನ್ನಾಗಿ ಮಾಡುವೆನು. ಅದು ದ್ರಾಕ್ಷಿಬಳ್ಳಿ ನೆಡಲು ಸಿದ್ಧವಾಗುವುದು. ಸಮಾರ್ಯದ ಕಲ್ಲುಗಳನ್ನೆಲ್ಲಾ ತಗ್ಗಿಗೆ ನೂಕಿಬಿಡುವೆನು; ಆಗ ಅಲ್ಲಿ ಕೇವಲ ಅಸ್ತಿವಾರಗಳು ಕಾಣುವವು.


ಪ್ರವಾದಿಗಳು ಮತ್ತು ಯಾಜಕರು ತಾವು ಮಾಡುವ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ನಾಚಿಕೆಪಡುವದೇ ಇಲ್ಲ. ತಮ್ಮ ಪಾಪಕಾರ್ಯಗಳಿಗಾಗಿ ಸಂಕೋಚಪಡುವುದು ಸಹ ಅವರಿಗೆ ಗೊತ್ತಿಲ್ಲ. ಆದ್ದರಿಂದ ಬೇರೆಯವರಂತೆ ಅವರನ್ನೂ ಶಿಕ್ಷಿಸಲಾಗುವುದು. ನಾನು ಅವರನ್ನು ಶಿಕ್ಷಿಸಿದಾಗ ಅವರನ್ನು ನೆಲಕ್ಕೆ ಎಸೆಯಲಾಗುವದು” ಎಂದು ಯೆಹೋವನು ಅನ್ನುತ್ತಾನೆ.


ನಿನ್ನ ಜನರನ್ನು ರಕ್ಷಿಸಲು ನೀನು ಬಂದೆ. ನೀನು ಆರಿಸಿದ್ದ ರಾಜನನ್ನು ಜಯದ ಕಡೆಗೆ ನಡಿಸುವುದಕ್ಕಾಗಿ ಬಂದೆ. ಪ್ರತೀ ದುಷ್ಟ ಕುಟುಂಬದ ನಾಯಕನನ್ನು ನೀನು ಸಂಹರಿಸಿದೆ. ಭೂಲೋಕದಲ್ಲಿದ್ದ ಪ್ರಮುಖನಿಂದಿಡಿದು ಪ್ರಮುಖನಲ್ಲದವನವರೆಗೂ ನೀನು ಹತಿಸಿದೆ.


ಯೆಹೋವನು ಹೇಳುವುದೇನೆಂದರೆ, “ಯಾವ ಪ್ರವಾದಿಗಳು ಸುಳ್ಳುದರ್ಶನವನ್ನು ನೋಡಿ ಸುಳ್ಳನ್ನು ಹೇಳಿದ್ದಾರೋ, ಅವರನ್ನು ಶಿಕ್ಷಿಸುವೆನು. ನನ್ನ ಜನರ ಮಧ್ಯೆಯಿಂದ ಅವರನ್ನು ತೆಗೆದುಬಿಡುವೆನು. ಅವರ ಹೆಸರುಗಳು ಇಸ್ರೇಲರ ವಂಶಾವಳಿ ಪಟ್ಟಿಯಲ್ಲಿ ಇರುವುದಿಲ್ಲ. ಅವರು ಇಸ್ರೇಲ್ ದೇಶಕ್ಕೆ ಹಿಂದಿರುಗಿ ಬರುವುದಿಲ್ಲ. ನಾನೇ ಒಡೆಯನಾದ ಯೆಹೋವನೆಂದು ಆಗ ನಿಮಗೆ ಗೊತ್ತಾಗುವುದು.


ನನ್ನ ಹೆಸರಿನಲ್ಲಿ ಬೋಧನೆ ಮಾಡುತ್ತಿರುವ ಈ ಪ್ರವಾದಿಗಳ ಬಗ್ಗೆ ನಾನು ಹೇಳುವದು ಇಷ್ಟೇ. ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಆ ಪ್ರವಾದಿಗಳು ‘ಶತ್ರುಗಳು ಖಡ್ಗಧಾರಿಗಳಾಗಿ ಎಂದಿಗೂ ಈ ದೇಶದ ಮೇಲೆ ಧಾಳಿ ಮಾಡುವದಿಲ್ಲ. ಈ ದೇಶದಲ್ಲಿ ಎಂದೂ ಕ್ಷಾಮ ಕಾಣಿಸಿಕೊಳ್ಳುವದಿಲ್ಲ’ ಎಂದು ಹೇಳಿದ್ದಾರೆ. ಆದರೆ ಆ ಪ್ರವಾದಿಗಳು ಹಸಿವಿನ ತಾಪದಿಂದ ಸಾಯುತ್ತಾರೆ ಮತ್ತು ಶತ್ರುವಿನ ಖಡ್ಗ ಅವರನ್ನು ಕೊಲ್ಲುತ್ತದೆ.


“ಅದೇ ರೀತಿಯಲ್ಲಿ, ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದ ವ್ಯಕ್ತಿಯು ಅಸ್ತಿವಾರವಿಲ್ಲದೆ ನೆಲದಮೇಲೆ ಮನೆ ಕಟ್ಟಿದ ಮನುಷ್ಯನಂತಿರುವನು. ಪ್ರವಾಹ ಬಂದಾಗ, ಮನೆಯು ಬೇಗನೆ ಕುಸಿದುಹೋಗಿ ಸಂಪೂರ್ಣವಾಗಿ ನಾಶವಾಗುತ್ತದೆ.”


ನಾನು ಅವನ ವಿರುದ್ಧವಾಗಿ ತಿರುಗಿ ಅವನನ್ನು ನಾಶಮಾಡುವೆನು. ಅವನು ಇಸ್ರೇಲರಿಗೆ ನಿದರ್ಶನವಾಗಿರಬೇಕು, ಜನರು ಅವನನ್ನು ನೋಡಿ ನಗಾಡುವರು. ನಾನು ಅವನನ್ನು ನನ್ನ ಜನರ ಮಧ್ಯದಿಂದ ತೆಗೆದು ಬಿಡುವೆನು. ಆಗ ನೀವು ನಾನೇ ಯೆಹೋವನೆಂದು ತಿಳಿಯುವಿರಿ.


ಆದ್ದರಿಂದ ನೀವು ಪ್ರಯೋಜನವಿಲ್ಲದ ದರ್ಶನವನ್ನು ಇನ್ನು ಮೇಲೆ ನೋಡುವುದಿಲ್ಲ. ನೀವು ನಿಮ್ಮ ಮಂತ್ರತಂತ್ರಗಳನ್ನು ಇನ್ನು ಮಾಡುವುದಿಲ್ಲ. ನನ್ನ ಶಕ್ತಿಯಿಂದ ನಾನು ನನ್ನ ಜನರನ್ನು ಕಾಪಾಡುತ್ತೇನೆ. ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ.’”


ನಾನು ನಿಮ್ಮ ಮುಸುಕುಗಳನ್ನು ಹರಿದುಹಾಕುವೆನು. ಮತ್ತು ನಿಮ್ಮ ಹಿಡಿತದಿಂದ ಅವರನ್ನು ಬಿಡಿಸುವೆನು. ಆ ಜನರು ನಿಮ್ಮ ಉರುಲಿನಿಂದ ತಪ್ಪಿಸಿಕೊಳ್ಳುವರು. ಆಗ ನಾನೇ ಒಡೆಯನಾದ ಯೆಹೋವನು ಎಂದು ಗೊತ್ತಾಗುವುದು.


ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.”


ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ಸ್ವಲ್ಪವೂ ನಾಚಿಕೆಪಡುವುದಿಲ್ಲ. ಅವರಿಗೆ ನಾಚಿಕೆ ಎಂಬುದೇ ತಿಳಿದಿಲ್ಲ. ಆದ್ದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಧಿಸಲಾಗುವುದು. ನಾನು ಅವರನ್ನು ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.’” ಯೆಹೋವನ ನುಡಿಗಳಿವು.


ಅಸ್ತಿವಾರಗಳೇ ನಾಶವಾಗುತ್ತಿದ್ದರೆ ನೀತಿವಂತನು ಏನು ಮಾಡಲಾದೀತು?


ಗೋಡೆಗೆ ಗಾರೆ ಬಳಿಯುವವರ ಮೇಲೂ, ಗೋಡೆಯ ಮೇಲೂ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ಆಗ ನಾನು, ‘ಈಗ ಗೋಡೆ ಇಲ್ಲ. ಅದಕ್ಕೆ ಗಾರೆ ಹಾಕುವವರೂ ಇಲ್ಲ’ ಎಂದು ಹೇಳುವೆನು.


ಕೊಲ್ಲುವ ಸಮಯ, ವಾಸಿಮಾಡುವ ಸಮಯ. ನಾಶಮಾಡುವ ಸಮಯ, ಕಟ್ಟುವ ಸಮಯ.


“ಗೋಡೆಯು ನೆಟ್ಟಗಿದೆಯೆಂದು ನೋಡಲು ಜನರು ಗುಂಡನ್ನೂ ನೂಲನ್ನೂ ಉಪಯೋಗಿಸುತ್ತಾರೆ. ಅದೇ ರೀತಿಯಲ್ಲಿ ನಾನು ನ್ಯಾಯವನ್ನು ನೂಲನ್ನಾಗಿಯೂ ಕರುಣೆಯನ್ನು ಗುಂಡನ್ನಾಗಿಯೂ ಉಪಯೋಗಿಸುವೆನು. ನೀವು ದುಷ್ಟಜನರು. ನೀವು ನಿಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತಿದ್ದೀರಿ. ಆದರೆ ನೀವು ಶಿಕ್ಷಿಸಲ್ಪಡುವಿರಿ. ನೀವು ಅಡಗಿಕೊಂಡಿರುವ ಸ್ಥಳವನ್ನು ನಾಶಮಾಡುವ ಬಿರುಗಾಳಿಯಂತೆಯೂ ಪ್ರವಾಹದಂತೆಯೂ ಅದಿರುವುದು.


ನೀವು ತಪ್ಪಿತಸ್ಥರಾಗಿದ್ದೀರಿ. ನೀವು ಬಿರುಕು ಬಿಟ್ಟಿರುವ ಎತ್ತರದ ಗೋಡೆಯಂತಿದ್ದೀರಿ. ಆ ಗೋಡೆಯು ಇದ್ದಕ್ಕಿದ್ದಂತೆ ನೆಲಕ್ಕುರುಳಿ ಚೂರುಚೂರಾಗುವದು. ಒಳ್ಳೆಯ ಸಮಯವು ಬರುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು