Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:16 - ಪರಿಶುದ್ದ ಬೈಬಲ್‌

16 “ಇವೆಲ್ಲಾ ಇಸ್ರೇಲಿನ ಸುಳ್ಳು ಪ್ರವಾದಿಗಳಿಗಾಗುವದು. ಆ ಪ್ರವಾದಿಗಳು ಜೆರುಸಲೇಮಿನ ಬಗ್ಗೆ ಪ್ರವಾದಿಸಿದರು ಮತ್ತು ಶಾಂತಿಯಿಲ್ಲದಿರುವಾಗಲೂ ಶಾಂತಿಯ ದರ್ಶನಗಳನ್ನು ಕಂಡರು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ‘ಇಸ್ರಾಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯಿದೆ ಎಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇಮಿನ ವಿಷಯವಾಗಿ ಪ್ರವಾದಿಸಿದ್ದೀರಲ್ಲವೆ? ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು’” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ‘ಇಸ್ರಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯ ದರ್ಶನಗಳನ್ನು ನೀವು ಕಂಡು ಜೆರುಸಲೇಮಿನ ಬಗ್ಗೆ ಪ್ರವಾದಿಸಿದ್ದೀರಲ್ಲವೆ? ಗೋಡೆ ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು; ಇದು ಸರ್ವೇಶ್ವರನಾದ ದೇವರ ನುಡಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಸ್ರಾಯೇಲಿನ ಪ್ರವಾದಿಗಳೇ, ಕ್ಷೇಮವಿಲ್ಲದಿದ್ದರೂ ಕ್ಷೇಮವಾಗುವದೆಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇವಿುನ ವಿಷಯವಾಗಿ ಪ್ರವಾದಿಸಿದ್ದೀರಲ್ಲಾ; ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು. ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆರೂಸಲೇಮಿನ ವಿಷಯ ಪ್ರವಾದಿಸಿ, ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ಇರುವುದಿಲ್ಲವೆಂದೂ, ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” ’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:16
11 ತಿಳಿವುಗಳ ಹೋಲಿಕೆ  

“ಮತ್ತೆಮತ್ತೆ ಆ ಸುಳ್ಳು ಪ್ರವಾದಿಗಳು ನನ್ನ ಜನರಿಗೆ ಸುಳ್ಳು ಹೇಳಿದರು. ಅವರು ಶಾಂತಿ ಇರುವದೆಂದು ಹೇಳಿದರು. ಆದರೆ ಶಾಂತಿ ಇರಲಿಲ್ಲ. ಅದು ಈ ರೀತಿಯಲ್ಲಿದೆ: ಜನರು ಬಲಹೀನವಾದ ಗೋಡೆಯನ್ನು ಕಟ್ಟುತ್ತಾರೆ; ಅದು ಬಲವಾಗಿ ಕಾಣುವಂತೆ ಮಾಡಲು ಪ್ರವಾದಿಗಳು ಅದಕ್ಕೆ ತೆಳುವಾದ ಮಡ್ಡಿ ಮಾಡುತ್ತಾರೆ.


ಪ್ರವಾದಿಗಳು ಮತ್ತು ಯಾಜಕರು ನನ್ನ ಜನರಿಗಾದ ದೊಡ್ಡ ಗಾಯಗಳಿಗೆ ಚಿಕ್ಕಗಾಯಗಳಿಗೋ ಎಂಬಂತೆ ಚಿಕಿತ್ಸೆ ಮಾಡುತ್ತಾರೆ. ವಾಸಿಯಾಗಿಲ್ಲದಿದ್ದರೂ ‘ವಾಸಿಯಾಗಿದೆ’ ಎನ್ನುತ್ತಾರೆ.


ಪ್ರವಾದಿಗಳು ಮತ್ತು ಯಾಜಕರು ನಮ್ಮ ಜನರ ಆಳವಾದ ಗಾಯಗಳನ್ನು ಕೇವಲ ಅಲ್ಪಗಾಯಗಳಂತೆ ಪರಿಗಣಿಸಿ ಚಿಕಿತ್ಸೆ ಕೊಡುತ್ತಿದ್ದಾರೆ. “ಎಲ್ಲಾ ಚೆನ್ನಾಗಿದೆ, ಎಲ್ಲಾ ಚೆನ್ನಾಗಿದೆ” ಎಂದು ಅವರು ಹೇಳುತ್ತಾರೆ. ಆದರೆ ಎಲ್ಲಾ ಚೆನ್ನಾಗಿಲ್ಲ.


“ಯೆರೆಮೀಯನೇ, ಬಾಬಿಲೋನಿನಲ್ಲಿರುವ ಎಲ್ಲಾ ಬಂಧಿಗಳಿಗೆ ಈ ಸಂದೇಶವನ್ನು ಕಳುಹಿಸು, ‘ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಹೀಗೆನ್ನುವನು: ಶೆಮಾಯನು ನಿಮಗೆ ಪ್ರವಾದನೆ ಮಾಡಿದ್ದಾನೆ. ಆದರೆ ನಾನು ಅವನನ್ನು ಕಳುಹಿಸಲಿಲ್ಲ. ನೀವು ಸುಳ್ಳನ್ನು ನಂಬುವಂತೆ ಅವನು ಮಾಡಿದ್ದಾನೆ.


ಯೆಹೂದದಲ್ಲಿ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದ ಐದನೇ ತಿಂಗಳಲ್ಲಿ ಹನನ್ಯನೆಂಬ ಪ್ರವಾದಿಯು ನನ್ನೊಂದಿಗೆ ಮಾತನಾಡಿದನು. ಹನನ್ಯನು ಅಜ್ಜೂರನ ಮಗ, ಹನನ್ಯನು ಗಿಬ್ಯೋನ್ ಊರಿನವನು. ನನ್ನೊಂದಿಗೆ ಮಾತನಾಡಿದಾಗ ಅವನು ಯೆಹೋವನ ಆಲಯದಲ್ಲಿದ್ದನು. ಯಾಜಕರು ಮತ್ತು ಸಮಸ್ತ ಜನರು ಅಲ್ಲಿದ್ದರು. ಹನನ್ಯನು ಹೀಗೆ ಹೇಳಿದನು:


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


ಆದರೆ ಯೆಹೋವನು ಹೇಳುವುದೇನೆಂದರೆ, “ದುಷ್ಟರಿಗೆ ಸಮಾಧಾನವೇ ಸಿಗದು.”


“ಜನರು ಭಯದಿಂದ ನಡುಗುವರು. ಅವರು ಶಾಂತಿಗಾಗಿ ಹುಡುಕುವರು, ಆದರೆ ಅವರಿಗೆ ಅದು ಸಿಗುವುದಿಲ್ಲ.


ಗೋಡೆಗೆ ಗಾರೆ ಬಳಿಯುವವರ ಮೇಲೂ, ಗೋಡೆಯ ಮೇಲೂ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ಆಗ ನಾನು, ‘ಈಗ ಗೋಡೆ ಇಲ್ಲ. ಅದಕ್ಕೆ ಗಾರೆ ಹಾಕುವವರೂ ಇಲ್ಲ’ ಎಂದು ಹೇಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು