ಯೆಹೆಜ್ಕೇಲನು 13:17 - ಪರಿಶುದ್ದ ಬೈಬಲ್17 ದೇವರು ಹೀಗೆ ನುಡಿದನು: “ನರಪುತ್ರನೇ, ಇಸ್ರೇಲಿನ ಪ್ರವಾದಿನಿಯರನ್ನು ನೋಡು. ಆ ಪ್ರವಾದಿನಿಯರು ನನ್ನ ಪರವಾಗಿ ಮಾತಾಡುತ್ತಿಲ್ಲ. ಅವರು ತಮ್ಮ ಇಚ್ಛೆಯ ಪ್ರಕಾರ ಮಾತನಾಡುತ್ತಾರೆ. ಆದ್ದರಿಂದ ನೀನು ನನ್ನ ಪರವಾಗಿ ಅವರ ವಿರುದ್ಧವಾಗಿ ಮಾತನಾಡಬೇಕು. ಅವರಿಗೆ ಈ ಮಾತುಗಳನ್ನು ಹೇಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “‘ನರಪುತ್ರನೇ, ಸ್ವಕಲ್ಪಿತವಾದುದನ್ನು ಕಣಿ ಎಂದು ಹೇಳುವ ನಿನ್ನ ಸ್ವಕುಲ ಸ್ತ್ರೀಯರ ಕಡೆಗೆ ಮುಖ ಮಾಡಿಕೊಂಡು ಅವರನ್ನೂ ಖಂಡಿಸಿ ಹೀಗೆ ಪ್ರವಾದಿಸು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ನರಪುತ್ರನೇ, ಸ್ವಕಲ್ಪಿತವಾದದ್ದನ್ನು ಭವಿಷ್ಯವಾಣಿ ಎಂದು ಹೇಳುವ ನಿನ್ನ ಸ್ವಕುಲ ಮಹಿಳೆಯರ ಕಡೆಗೆ ಮುಖಮಾಡಿಕೊಂಡು ಅವರನ್ನೂ ಖಂಡಿಸಿ ಹೀಗೆ ಪ್ರವಾದಿಸು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನರಪುತ್ರನೇ, ಸ್ವಕಲ್ಪಿತವಾದದ್ದನ್ನು ಕಣಿಹೇಳುವ ನಿನ್ನ ಸ್ವಕುಲಸ್ತ್ರೀಯರ ಕಡೆಗೆ ಮುಖಮಾಡಿಕೊಂಡು ಅವರಿಗೆ ಖಂಡನೆಯಾಗಿ ಹೀಗೆ ಪ್ರವಾದಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಈಗ ಮನುಷ್ಯಪುತ್ರನೇ, ನೀನು ತಮ್ಮ ಸ್ವಂತ ಕಲ್ಪನೆಯಿಂದ ಪ್ರವಾದಿಸುವ ನಿನ್ನ ಜನರ ಪುತ್ರಿಯರಿಗೆ ವಿರೋಧವಾಗಿ ನಿನ್ನ ಮುಖವನ್ನಿಟ್ಟು, ಅವರಿಗೆ ವಿರೋಧವಾಗಿ ಪ್ರವಾದಿಸಿ, ಅಧ್ಯಾಯವನ್ನು ನೋಡಿ |
ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.
ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.
ಆ ಬಳಿಕ ಒಂದು ಕಬ್ಬಿಣದ ರೊಟ್ಟಿ ಕಲ್ಲನ್ನು ನಿನಗೂ ನಗರಕ್ಕೂ ಮಧ್ಯೆ ಇಡು. ಅದು ನಿನಗೂ ನಗರಕ್ಕೂ ನಡುವೆ ಇರುವ ಕಬ್ಬಿಣದ ಗೋಡೆಯಂತಿರುವುದು. ಈ ರೀತಿಯಾಗಿ ನೀನು ಆ ನಗರಕ್ಕೆ ವಿರುದ್ಧವಾಗಿರುವಂತೆ ಕಂಡುಬರುವೆ. ನೀನು ಆ ನಗರಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧ ಮಾಡುವಿ. ಯಾಕೆಂದರೆ, ಶೀಬ್ರದಲ್ಲೇ ಏನು ಸಂಭವಿಸುತ್ತದೆ ಎಂಬುದಕ್ಕೆ ಇಸ್ರೇಲ್ ಜನರಿಗೆ ಇದು ಸೂಚನೆಯಾಗಿದೆ.