Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:18 - ಪರಿಶುದ್ದ ಬೈಬಲ್‌

18 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ಪ್ರವಾದಿನಿಯರೇ, ನಿಮಗೆ ಕೇಡಾಗುವುದು. ಜನರು ತಮ್ಮ ತೋಳುಗಳಲ್ಲಿ ಕಟ್ಟಿಕೊಳ್ಳುವದಕ್ಕಾಗಿ ನೀವು ತಾಯಿತಿಗಳನ್ನು ಹೊಲಿದಿರಿ. ಜನರು ತಮ್ಮ ತಲೆಯ ಮೇಲೆ ಹಾಕಿಕೊಳ್ಳಲು ಮಂತ್ರದ ವಿವಿಧ ಅಳತೆಯ ಮುಸುಕುಗಳನ್ನು ನೀವು ತಯಾರಿಸುತ್ತೀರಿ. ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವದಕ್ಕೂ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕೂ ನೀವು ಇದನ್ನು ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು, ಎಲ್ಲರ ಮೊಣಕೈಗಳಿಗೆ ತಾಯಿತಗಳನ್ನು ಕಟ್ಟಿ, ಉದ್ದವಾದವರಿಗೂ, ಗಿಡ್ಡವಾದವರಿಗೂ ತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಸ್ತ್ರೀಯರ ಗತಿಯನ್ನು ಏನೆಂದು ಹೇಳಲಿ! ಸ್ತ್ರೀಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ ಸ್ವಂತ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು, ಎಲ್ಲರ ಮೊಣಕೈಗಳಿಗೆ ತಾಯಿತಿಗಳನ್ನು ಕಟ್ಟಿ, ಉದ್ದವಾದವರಿಗೂ ಗಿಡ್ಡವಾದವರಿಗೂ ತಕ್ಕತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಮಹಿಳೆಯರಿಗೆ ಧಿಕ್ಕಾರ! ಮಹಿಳೆಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ, ನಿಮಗೆ ಬೇಕಾದವರ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ತಾಯಿತಿಗಳನ್ನು ಕಟ್ಟಿ ಉದ್ದವಾದವರಿಗೂ ಗಿಡ್ಡಾದವರಿಗೂ ತಕ್ಕತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಸ್ತ್ರೀಯರ ಗತಿಯನ್ನು ಏನೆಂದು ಹೇಳಲಿ! ಸ್ತ್ರೀಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ ಸ್ವಂತ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೀಗೆ ಹೇಳು ಎಂದು, ‘ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡುಗಳನ್ನು ಹೊಲೆದು ಮತ್ತು ಪ್ರತಿಯೊಬ್ಬನ ಎತ್ತರದ ತಲೆಗಳಿಗೆ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಪುತ್ರಿಯರಿಗೆ ಕಷ್ಟ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ, ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:18
11 ತಿಳಿವುಗಳ ಹೋಲಿಕೆ  

ಅವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರಾಗಿದ್ದಾರೆ. ಅವರು ದುರ್ಬಲರನ್ನು ಪಾಪವೆಂಬ ಉರುಲಿನಲ್ಲಿ ಬೀಳಿಸುತ್ತಾರೆ. ಅವರು ತಮ್ಮ ಹೃದಯಗಳಿಗೆ ಸ್ವಾರ್ಥವನ್ನೇ ಕಲಿಸಿದ್ದಾರೆ. ಅವರು ಶಾಪಗ್ರಸ್ತರಾಗಿದ್ದಾರೆ.


ಆದ್ದರಿಂದ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ನೀವು ಆ ಬಟ್ಟೆಯ ತೋಳುಪಟ್ಟಿಯನ್ನು ಜನರು ಬೋನಿನಲ್ಲಿ ಸಿಲುಕಿಕೊಳ್ಳುವಂತೆ ಮಾಡುತ್ತೀರಿ. ಆದರೆ ನಾನು ಅವರನ್ನು ಸ್ವತಂತ್ರರಾಗುವಂತೆ ಮಾಡುವೆನು. ನಿಮ್ಮ ತೋಳಿನಿಂದ ಆ ಪಟ್ಟಿಯನ್ನು ಹರಿದುಹಾಕುವೆನು. ಆಗ ಜನರು ನಿಮ್ಮ ಬಂಧನದಿಂದ ವಿಮುಕ್ತರಾಗುವರು. ಬೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯು ಬಿಡಿಸಿದ ಕೂಡಲೇ ಹಾರಾಡುವಂತೆ ಅವರೂ ಹಾರಾಡುವರು.


ಜನರು ಸತ್ಯೋಪದೇಶವನ್ನು ಕೇಳದಿರುವ ಕಾಲವು ಬರಲಿದೆ. ಜನರು ತಮ್ಮನ್ನು ಮೆಚ್ಚಿಸುವಂಥ ಬೋಧಕರನ್ನು ಮತ್ತು ತಮ್ಮ ಕಿವಿಗೆ ಹಿತವೆನಿಸುವ ಬೋಧನೆಯನ್ನು ನೀಡುವ ಬೋಧಕರನ್ನು ಕಂಡುಕೊಳ್ಳುವರು.


ಜೆರುಸಲೇಮಿನ ಪ್ರವಾದಿಗಳು ತಾನು ಬೇಟೆಯಾಡಿ ಕೊಂದ ಪ್ರಾಣಿಯನ್ನು ತಿನ್ನುವ ಗರ್ಜಿಸುವ ಸಿಂಹದಂತಿದ್ದಾರೆ. ಆ ಪ್ರವಾದಿಗಳು ಅನೇಕ ಪ್ರಾಣಗಳನ್ನು ತೆಗೆದುಕೊಂಡಿದ್ದಾರೆ. ಅವರಿಂದ ಬೆಲೆಬಾಳುವ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಜೆರುಸಲೇಮಿನಲ್ಲಿ ಅನೇಕ ಸ್ತ್ರೀಯರು ವಿಧವೆಯರಾಗಲು ಅವರೇ ಕಾರಣರಾಗಿದ್ದಾರೆ.


ಪ್ರವಾದಿಗಳು ಮತ್ತು ಯಾಜಕರು ನನ್ನ ಜನರಿಗಾದ ದೊಡ್ಡ ಗಾಯಗಳಿಗೆ ಚಿಕ್ಕಗಾಯಗಳಿಗೋ ಎಂಬಂತೆ ಚಿಕಿತ್ಸೆ ಮಾಡುತ್ತಾರೆ. ವಾಸಿಯಾಗಿಲ್ಲದಿದ್ದರೂ ‘ವಾಸಿಯಾಗಿದೆ’ ಎನ್ನುತ್ತಾರೆ.


ನಾವು ಇನ್ನು ಮೇಲೆ ಕೂಸುಗಳಾಗಿರಬಾರದು. ಸಮುದ್ರದ ಅಲೆಗಳಿಂದ ಅತ್ತಿಂದಿತ್ತ ಚಲಿಸುವ ಹಡಗಿನಂತೆ ಚಂಚಲರಾಗಿರಬಾರದು. ನಮ್ಮನ್ನು ವಂಚಿಸುವುದಕ್ಕಾಗಿ ಜನರು ಹೇಳುವ ಯಾವುದೇ ಹೊಸ ಉಪದೇಶದಿಂದಾಗಲಿ ನಾವು ಚಂಚಲರಾಗಬಾರದು. ಜನರನ್ನು ಮೋಸಗೊಳಿಸಿ ಕೆಟ್ಟದಾರಿಗೆ ನಡೆಸಬೇಕೆಂಬ ಉದ್ದೇಶದಿಂದ ಆ ದುರ್ಬೋಧಕರು ನಾನಾ ಬಗೆಯ ಕುತಂತ್ರವನ್ನು ಮಾಡುತ್ತಾರೆ.


“ಇವೆಲ್ಲಾ ಇಸ್ರೇಲಿನ ಸುಳ್ಳು ಪ್ರವಾದಿಗಳಿಗಾಗುವದು. ಆ ಪ್ರವಾದಿಗಳು ಜೆರುಸಲೇಮಿನ ಬಗ್ಗೆ ಪ್ರವಾದಿಸಿದರು ಮತ್ತು ಶಾಂತಿಯಿಲ್ಲದಿರುವಾಗಲೂ ಶಾಂತಿಯ ದರ್ಶನಗಳನ್ನು ಕಂಡರು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.


“ಮತ್ತೆಮತ್ತೆ ಆ ಸುಳ್ಳು ಪ್ರವಾದಿಗಳು ನನ್ನ ಜನರಿಗೆ ಸುಳ್ಳು ಹೇಳಿದರು. ಅವರು ಶಾಂತಿ ಇರುವದೆಂದು ಹೇಳಿದರು. ಆದರೆ ಶಾಂತಿ ಇರಲಿಲ್ಲ. ಅದು ಈ ರೀತಿಯಲ್ಲಿದೆ: ಜನರು ಬಲಹೀನವಾದ ಗೋಡೆಯನ್ನು ಕಟ್ಟುತ್ತಾರೆ; ಅದು ಬಲವಾಗಿ ಕಾಣುವಂತೆ ಮಾಡಲು ಪ್ರವಾದಿಗಳು ಅದಕ್ಕೆ ತೆಳುವಾದ ಮಡ್ಡಿ ಮಾಡುತ್ತಾರೆ.


ಆಗ ಯೆರೆಮೀಯನೆಂಬ ನಾನು, “ನನ್ನ ಒಡೆಯನಾದ ಯೆಹೋವನೇ, ನೀನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮೋಸ ಮಾಡಿದೆ, ‘ನೀವು ಶಾಂತಿಯಿಂದ ಇರುವಿರಿ’ ಎಂದು ನೀನು ಅವರಿಗೆ ಹೇಳಿದೆ. ಆದರೆ ಈಗ ಅವರ ಕತ್ತಿನ ಮೇಲೆ ಖಡ್ಗ ಇದೆ” ಅಂದೆನು.


ಸೂಳೆಯು ಒಂದು ರೊಟ್ಟಿಗೇ ಬರಬಹುದು; ಆದರೆ ಬೇರೊಬ್ಬನ ಹೆಂಡತಿಗೆ ನಿನ್ನ ಜೀವವನ್ನೇ ಕಳೆದುಕೊಳ್ಳಬೇಕಾಗುವುದು.


ನಾನು ನಿಮ್ಮ ಮುಸುಕುಗಳನ್ನು ಹರಿದುಹಾಕುವೆನು. ಮತ್ತು ನಿಮ್ಮ ಹಿಡಿತದಿಂದ ಅವರನ್ನು ಬಿಡಿಸುವೆನು. ಆ ಜನರು ನಿಮ್ಮ ಉರುಲಿನಿಂದ ತಪ್ಪಿಸಿಕೊಳ್ಳುವರು. ಆಗ ನಾನೇ ಒಡೆಯನಾದ ಯೆಹೋವನು ಎಂದು ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು