ಯೆಹೆಜ್ಕೇಲನು 13:19 - ಪರಿಶುದ್ದ ಬೈಬಲ್19 ಜನರೆದುರಿನಲ್ಲಿ ನನಗೆ ನೀವು ಮಹತ್ವವನ್ನು ಕೊಡುವದಿಲ್ಲ. ಸ್ವಲ್ಪ ಬಾರ್ಲಿಗಾಗಿಯೂ ಕೆಲವು ತುಂಡು ರೊಟ್ಟಿಗಾಗಿಯೂ ನೀವು ನನಗೆ ವಿರುದ್ಧವಾಗಿ ವರ್ತಿಸುತ್ತೀರಿ. ನನ್ನ ಜನರಿಗೆ ನೀವು ಸುಳ್ಳನ್ನು ಆಡುತ್ತೀರಿ. ಅವರಿಗೆ ಸುಳ್ಳೆಂದರೆ ಬಹಳ ಪ್ರೀತಿ. ನೀವು ಸಾಯತಕ್ಕಲ್ಲದವರನ್ನು ಸಾವಿಗೀಡು ಮಾಡುತ್ತೀರಿ. ಬದುಕತಕ್ಕಲ್ಲದವರನ್ನು ಜೀವಂತವಾಗಿಡುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀವು ಜವೆಗೋದಿಯ ಹಿಡಿಗಳನ್ನೂ, ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳು ಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವುದರಿಂದ ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೀವು ಹಿಡಿಯುವಷ್ಟೆ ಜವೆಗೋಧಿಗೆ, ಚೂರುಪಾರು ರೊಟ್ಟಿಗೆ ಆಸೆಪಟ್ಟು, ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀವು ಜವೆಗೋದಿಯ ಹಿಡಿಗಳನ್ನೂ ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವದರಿಂದ ಸಾಯದಿರತಕ್ಕವರನ್ನು ಸಾಯಿಸಿ ಸಾಯತಕ್ಕವರನ್ನು ಉಳಿಸಿ ನನ್ನ ಜನರ ನಡುವೆ ನನ್ನ ಘನತೆಗೆ ಕುಂದು ತಂದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಜವೆಗೋಧಿಗೂ, ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಗೊಳಿಸುವಿರೋ? ಅಧ್ಯಾಯವನ್ನು ನೋಡಿ |
“ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನ್ನು ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ.
ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.
ನೀನು ತಿನ್ನುವ ಒಂದು ಆಹಾರಪದಾರ್ಥದಿಂದ ನಿನ್ನ ಸಹೋದರನ ನಂಬಿಕೆಗೆ ನೀನು ತೊಂದರೆಯನ್ನು ಮಾಡಿದರೆ, ನೀನು ಪ್ರೀತಿಯ ಮಾರ್ಗವನ್ನು ನಿಜವಾಗಿಯೂ ಅನುಸರಿಸುತ್ತಿಲ್ಲ. ಒಬ್ಬನು ಯಾವುದಾದರೂ ಆಹಾರಪದಾರ್ಥವನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವಾಗ, ನೀನು ಆ ಪದಾರ್ಥವನ್ನು ತಿಂದರೆ ಅವನ ನಂಬಿಕೆ ಹಾಳಾಗುವುದು. ಆದ್ದರಿಂದ ನೀನು ಹಾಗೆ ಮಾಡಕೂಡದು. ಕ್ರಿಸ್ತನು ಆ ವ್ಯಕ್ತಿಗಾಗಿಯೂ ಸತ್ತನು.
ಆದ್ದರಿಂದ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ನೀವು ಆ ಬಟ್ಟೆಯ ತೋಳುಪಟ್ಟಿಯನ್ನು ಜನರು ಬೋನಿನಲ್ಲಿ ಸಿಲುಕಿಕೊಳ್ಳುವಂತೆ ಮಾಡುತ್ತೀರಿ. ಆದರೆ ನಾನು ಅವರನ್ನು ಸ್ವತಂತ್ರರಾಗುವಂತೆ ಮಾಡುವೆನು. ನಿಮ್ಮ ತೋಳಿನಿಂದ ಆ ಪಟ್ಟಿಯನ್ನು ಹರಿದುಹಾಕುವೆನು. ಆಗ ಜನರು ನಿಮ್ಮ ಬಂಧನದಿಂದ ವಿಮುಕ್ತರಾಗುವರು. ಬೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯು ಬಿಡಿಸಿದ ಕೂಡಲೇ ಹಾರಾಡುವಂತೆ ಅವರೂ ಹಾರಾಡುವರು.