ಯೆಹೆಜ್ಕೇಲನು 13:2 - ಪರಿಶುದ್ದ ಬೈಬಲ್2 “ನರಪುತ್ರನೇ, ನೀನು ಇಸ್ರೇಲಿನ ಪ್ರವಾದಿಗಳಿಗೆ ನನ್ನ ಪರವಾಗಿ ಹೇಳಬೇಕು. ಅವರು ನಿಜವಾಗಿ ನನ್ನ ಪರವಾಗಿ ಮಾತನಾಡುವುದಿಲ್ಲ. ಅವರು ಏನು ಹೇಳಬೇಕೆಂದು ಇಷ್ಟಪಡುತ್ತಾರೋ ಅದನ್ನೇ ಹೇಳುತ್ತಾರೆ. ಅದಕ್ಕಾಗಿ ನೀನು ಅವರ ಕೂಡ ಮಾತನಾಡಿ ಇಂತೆನ್ನಬೇಕು, ‘ಯೆಹೋವನ ಸಂದೇಶವನ್ನು ಕೇಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನರಪುತ್ರನೇ, ಪ್ರವಾದನೆ ಮಾಡಿ, ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು, ‘ಯೆಹೋವನ ವಾಕ್ಯವನ್ನು ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನರಪುತ್ರನೇ, ಪ್ರವಾದನೆ ಮಾಡಿ ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತ ಹೀಗೆ ಹೇಳು: “ಸರ್ವೇಶ್ವರನ ವಾಕ್ಯವನ್ನು ಕೇಳಿರಿ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನರಪುತ್ರನೇ, ಪ್ರವಾದನೆಮಾಡಿ ಸ್ವಕಲ್ಪಿತವಾದದ್ದನ್ನೇ ಸಾರುತ್ತಲಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು - ಯೆಹೋವನ ವಾಕ್ಯವನ್ನು ಕೇಳಿರಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನರಪುತ್ರನೇ, ಪ್ರವಾದಿಸುತ್ತಿರುವ ಇಸ್ರಾಯೇಲಿನ ಮನೆತನದ ಪ್ರವಾದಿಗಳಿಗೆ ವಿರುದ್ಧವಾಗಿ ನೀನು ಪ್ರವಾದಿಸಿ, ತಮ್ಮ ಸ್ವಂತ ಕಲ್ಪನೆಗಳಿಂದ ಪ್ರವಾದಿಸುತ್ತಿರುವವರಿಗೆ ಹೀಗೆ ಹೇಳು: ‘ಯೆಹೋವ ದೇವರ ವಾಕ್ಯವನ್ನು ಕೇಳಿರಿ; ಅಧ್ಯಾಯವನ್ನು ನೋಡಿ |
“ಪ್ರವಾದಿಗಳು ಜನರನ್ನು ಎಚ್ಚರಿಸುವದಿಲ್ಲ. ಸತ್ಯವನ್ನು ಮುಚ್ಚಿಡುತ್ತಾರೆ. ಒಂದು ಗೋಡೆಯನ್ನು ದುರಸ್ತಿ ಮಾಡದೆ ಅದರ ರಂಧ್ರಗಳನ್ನು ಗಾರೆಯಿಂದ ಮುಚ್ಚುವ ಕೆಲಸಗಾರರಂತಿದ್ದಾರೆ. ಅವರು ಸುಳ್ಳುದರ್ಶನಗಳನ್ನೆ ನೋಡುತ್ತಾರೆ. ತಮ್ಮ ಭವಿಷ್ಯದ ಬಗ್ಗೆ ಶಕುನದ ಮೂಲಕ ತಿಳಿದುಕೊಳ್ಳುವುದೆಲ್ಲ ಸುಳ್ಳಾಗಿರುತ್ತದೆ. ಅವರು, ‘ನನ್ನ ಒಡೆಯನಾದ ಯೆಹೋವನು ಹೇಳಿದನು’ ಎಂಬುದಾಗಿ ಸುಳ್ಳು ಹೇಳುವರು. ಆದರೆ ನಿಜವಾಗಿಯೂ ಯೆಹೋವನು ಅವರ ಕೂಡ ಮಾತನಾಡಲಿಲ್ಲ.
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
ಆ ಜನರು ಯೆಹೋವನ ಸಂದೇಶವನ್ನು ತಂದ ಪ್ರವಾದಿಗಳಾಗಿದ್ದರೆ, ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಯೆಹೋವನ ಆಲಯದಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ರಾಜನ ಅರಮನೆಯಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಜೆರುಸಲೇಮಿನಲ್ಲಿರುವ ಪದಾರ್ಥಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಆ ವಸ್ತುಗಳನ್ನೆಲ್ಲ ಬಾಬಿಲೋನಿಗೆ ತೆಗೆದುಕೊಂಡು ಹೋಗಬಾರದೆಂದು ಅವರು ಪ್ರಾರ್ಥನೆ ಸಲ್ಲಿಸಲಿ.
ಆ ಕುರುಬರು ನನ್ನ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಆ ಕುರುಬರಿಗೆ ಹೀಗೆ ಹೇಳುತ್ತಾನೆ, “ನನ್ನ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನ್ನು ಓಡಿಸಿಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇಮವನ್ನು ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನ್ನು ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನ್ನು ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು.