20 ಆದ್ದರಿಂದ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ನೀವು ಆ ಬಟ್ಟೆಯ ತೋಳುಪಟ್ಟಿಯನ್ನು ಜನರು ಬೋನಿನಲ್ಲಿ ಸಿಲುಕಿಕೊಳ್ಳುವಂತೆ ಮಾಡುತ್ತೀರಿ. ಆದರೆ ನಾನು ಅವರನ್ನು ಸ್ವತಂತ್ರರಾಗುವಂತೆ ಮಾಡುವೆನು. ನಿಮ್ಮ ತೋಳಿನಿಂದ ಆ ಪಟ್ಟಿಯನ್ನು ಹರಿದುಹಾಕುವೆನು. ಆಗ ಜನರು ನಿಮ್ಮ ಬಂಧನದಿಂದ ವಿಮುಕ್ತರಾಗುವರು. ಬೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯು ಬಿಡಿಸಿದ ಕೂಡಲೇ ಹಾರಾಡುವಂತೆ ಅವರೂ ಹಾರಾಡುವರು.
20 “ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಗಳಿಗೆ ನಾನು ಹೇಸಿ, ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತು ಹಾಕುವೆನು; ನೀವು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವ ಪ್ರಾಣಿಗಳನ್ನು ನಾನು ಬಿಡಿಸಿ, ಪಕ್ಷಿಗಳ ಹಾಗೆ ಸ್ವತಂತ್ರವಾಗಿಸುವೆನು.
20 ಹೀಗಿರಲು, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಅಕಟಾ! ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಿಗಳಿಗೆ ನಾನು ಹೇಸಿ, ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತುಹಾಕುವೆನು; ನೀವು ಬೇಟೆಯಾಡುವ ಪ್ರಾಣಿಗಳನ್ನು ಬಿಡುಗಡೆಮಾಡಿ ಪಕ್ಷಿಗಳ ಹಾಗೆ ಸ್ವತಂತ್ರವಾಗಿಸುವೆನು.
20 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವದಕ್ಕೆ ಸಾಧನವಾದ ನಿಮ್ಮ ತಾಯಿತಿಗಳಿಗೆ ನಾನು ಹೇಸಿ ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತುಹಾಕುವೆನು; ನೀವು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವ ಪ್ರಾಣಗಳನ್ನು ನಾನು ಬಿಡಿಸಿಬಿಡುವೆನು.
20 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಿಗಳಿಗೆ ವಿರೋಧವಾಗಿದ್ದೇನೆ. ಅವುಗಳನ್ನು ನಿಮ್ಮ ತೋಳುಗಳಿಂದ ಹರಿದುಬಿಡುವೆನು. ನೀವು ಬೇಟೆಯಾಡುವಂತೆ ಬೇಟೆಯಾಡಿದ ಪ್ರಾಣಗಳನ್ನು ಬಿಡಿಸುತ್ತೇನೆ.
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ಪ್ರವಾದಿನಿಯರೇ, ನಿಮಗೆ ಕೇಡಾಗುವುದು. ಜನರು ತಮ್ಮ ತೋಳುಗಳಲ್ಲಿ ಕಟ್ಟಿಕೊಳ್ಳುವದಕ್ಕಾಗಿ ನೀವು ತಾಯಿತಿಗಳನ್ನು ಹೊಲಿದಿರಿ. ಜನರು ತಮ್ಮ ತಲೆಯ ಮೇಲೆ ಹಾಕಿಕೊಳ್ಳಲು ಮಂತ್ರದ ವಿವಿಧ ಅಳತೆಯ ಮುಸುಕುಗಳನ್ನು ನೀವು ತಯಾರಿಸುತ್ತೀರಿ. ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವದಕ್ಕೂ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕೂ ನೀವು ಇದನ್ನು ಮಾಡುತ್ತೀರಿ.
ಜನರೆದುರಿನಲ್ಲಿ ನನಗೆ ನೀವು ಮಹತ್ವವನ್ನು ಕೊಡುವದಿಲ್ಲ. ಸ್ವಲ್ಪ ಬಾರ್ಲಿಗಾಗಿಯೂ ಕೆಲವು ತುಂಡು ರೊಟ್ಟಿಗಾಗಿಯೂ ನೀವು ನನಗೆ ವಿರುದ್ಧವಾಗಿ ವರ್ತಿಸುತ್ತೀರಿ. ನನ್ನ ಜನರಿಗೆ ನೀವು ಸುಳ್ಳನ್ನು ಆಡುತ್ತೀರಿ. ಅವರಿಗೆ ಸುಳ್ಳೆಂದರೆ ಬಹಳ ಪ್ರೀತಿ. ನೀವು ಸಾಯತಕ್ಕಲ್ಲದವರನ್ನು ಸಾವಿಗೀಡು ಮಾಡುತ್ತೀರಿ. ಬದುಕತಕ್ಕಲ್ಲದವರನ್ನು ಜೀವಂತವಾಗಿಡುತ್ತೀರಿ.
ನಾನು ನಿಮ್ಮ ಮುಸುಕುಗಳನ್ನು ಹರಿದುಹಾಕುವೆನು. ಮತ್ತು ನಿಮ್ಮ ಹಿಡಿತದಿಂದ ಅವರನ್ನು ಬಿಡಿಸುವೆನು. ಆ ಜನರು ನಿಮ್ಮ ಉರುಲಿನಿಂದ ತಪ್ಪಿಸಿಕೊಳ್ಳುವರು. ಆಗ ನಾನೇ ಒಡೆಯನಾದ ಯೆಹೋವನು ಎಂದು ಗೊತ್ತಾಗುವುದು.