ಯೆಹೆಜ್ಕೇಲನು 13:3 - ಪರಿಶುದ್ದ ಬೈಬಲ್3 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಬುದ್ಧಿಯಿಲ್ಲದ ಪ್ರವಾದಿಗಳೇ, ನಿಮಗೆ ಸಂಕಟಗಳು ಬರುವವು. ನೀವು ನಿಮ್ಮ ಸ್ವಂತ ಆತ್ಮವನ್ನು ಅನುಸರಿಸುತ್ತೀರಿ. ನೀವು ದರ್ಶನಗಳಲ್ಲಿ ಏನನ್ನೂ ಕಂಡಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖ ಪ್ರವಾದಿಗಳ ಗತಿಯನ್ನು ಏನೆಂದು ಹೇಳಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ‘ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖಪ್ರವಾದಿಗಳಿಗೆ ಧಿಕ್ಕಾರ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖ ಪ್ರವಾದಿಗಳ ಗತಿಯು ಏನೆಂದು ಹೇಳಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಮೂರ್ಖ ಪ್ರವಾದಿಗಳೇ ನಿಮಗೆ ಕಷ್ಟ! ಅಧ್ಯಾಯವನ್ನು ನೋಡಿ |
ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ಪ್ರವಾದಿನಿಯರೇ, ನಿಮಗೆ ಕೇಡಾಗುವುದು. ಜನರು ತಮ್ಮ ತೋಳುಗಳಲ್ಲಿ ಕಟ್ಟಿಕೊಳ್ಳುವದಕ್ಕಾಗಿ ನೀವು ತಾಯಿತಿಗಳನ್ನು ಹೊಲಿದಿರಿ. ಜನರು ತಮ್ಮ ತಲೆಯ ಮೇಲೆ ಹಾಕಿಕೊಳ್ಳಲು ಮಂತ್ರದ ವಿವಿಧ ಅಳತೆಯ ಮುಸುಕುಗಳನ್ನು ನೀವು ತಯಾರಿಸುತ್ತೀರಿ. ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವದಕ್ಕೂ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕೂ ನೀವು ಇದನ್ನು ಮಾಡುತ್ತೀರಿ.