Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:5 - ಪರಿಶುದ್ದ ಬೈಬಲ್‌

5 ಗೋಡೆಗಳು ಬಿದ್ದುಹೋದ ಸ್ಥಳಗಳನ್ನು ನೀವು (ಪ್ರವಾದಿಗಳು) ಕಾವಲು ಕಾಯುವದಿಲ್ಲ. ಇಸ್ರೇಲ್ ಜನರಿಗೋಸ್ಕರ ನೀವು ಗೋಡೆಗಳನ್ನು ಕಟ್ಟುವುದಿಲ್ಲ. ಆದ್ದರಿಂದ ಯೆಹೋವನಿಂದ ದಂಡನೆಯ ದಿನವು ಬಂದಾಗ ಜನರು ಯುದ್ಧದಲ್ಲಿ ಸೋತು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿ ಗೋಡೆಯ ಒಡಕುಗಳನ್ನೇರಲಿಲ್ಲ, ಇಸ್ರಾಯೇಲ್ ವಂಶದ ರಕ್ಷಣೆಗಾಗಿ ಗೋಡೆಯನ್ನು ಭದ್ರ ಮಾಡಲೂ ಇಲ್ಲ. ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿಯ ಒಡಕುಗಳನ್ನೇರಲಿಲ್ಲ. ಇಸ್ರಯೇಲ್ ವಂಶದ ರಕ್ಷಣೆಗಾಗಿ ಗೋಡೆಯನ್ನು ಗಟ್ಟಿಮಾಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿಯ ಒಡಕುಗಳನ್ನೇರಲಿಲ್ಲ, ಇಸ್ರಾಯೇಲ್‍ವಂಶದ ರಕ್ಷಣೆಗಾಗಿ ಗೋಡೆಯನ್ನು ಗಟ್ಟಿಮಾಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ಇಸ್ರಾಯೇಲ್ ಮನೆತನದವರ ಸುತ್ತಲೂ ಗೋಡೆಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:5
37 ತಿಳಿವುಗಳ ಹೋಲಿಕೆ  

“ನನ್ನ ಕೋಪದಿಂದ ದೇಶವು ನಾಶವಾಗದಂತೆ ಅದನ್ನು ರಕ್ಷಿಸಲು ಗೋಡೆಯನ್ನು ಸರಿಪಡಿಸುವುದಕ್ಕಾಗಿಯೂ ಗೋಡೆಯು ಒಡೆದುಹೋಗಿದ್ದ ಸ್ಥಳದಲ್ಲಿ ನಿಂತುಕೊಳ್ಳುವುದಕ್ಕಾಗಿ ಅವರಲ್ಲಿ ನಾನು ಒಬ್ಬನನ್ನು ಎದುರುನೋಡಿದೆ. ಆದರೆ ಯಾರೂ ನನಗೆ ಸಿಗಲಿಲ್ಲ.


ಬಹಳ ವರ್ಷಗಳಿಂದ ನಿಮ್ಮ ಪಟ್ಟಣಗಳು ಹಾಳಾಗಿ ಬಿದ್ದಿವೆ. ಆದರೆ ಹೊಸ ಪಟ್ಟಣಗಳು ಏಳುವವು. ಅವುಗಳ ಅಸ್ತಿವಾರಗಳು ಬಹಳ ವರ್ಷ ಬಾಳುವವು. ನೀವು “ಬೇಲಿ ಸರಿಮಾಡುವವರು” ಎಂದು ಕರೆಯಲ್ಪಡುವಿರಿ; “ಮನೆಗಳನ್ನು, ರಸ್ತೆಗಳನ್ನು ನಿರ್ಮಿಸುವವರು” ಎಂದು ನೀವು ಕರೆಯಲ್ಪಡುವಿರಿ.


ಆತನು ಅವರನ್ನು ನಾಶಮಾಡಬೇಕೆಂದಿದ್ದನು. ಆದರೆ ಆತನು ಆರಿಸಿಕೊಂಡಿದ್ದ ಮೋಶೆಯು ಮಧ್ಯಸ್ಥನಾಗಿ ಅವರನ್ನು ನಾಶಮಾಡದಂತೆ ಆತನ ಕೋಪವನ್ನು ಶಾಂತಪಡಿಸಿದನು.


ಅವರು ನನ್ನ ಪರಲೋಕದ ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದಲ್ಲಿ ಅವರು ನನ್ನ ಸಂದೇಶಗಳನ್ನು ಯೆಹೂದದ ಜನರಿಗೆ ಹೇಳಬಹುದಾಗಿತ್ತು. ಅವರ ಕೆಟ್ಟತನವನ್ನೂ ದುಷ್ಟತನವನ್ನೂ ತಡೆಯಬಹುದಾಗಿತ್ತು.”


ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭಯಂಕರವಾದ ದಿನವಾಗಿದೆ. ದೇವರು ಅತ್ಯಂತ ಕೋಪದಿಂದ ದೇಶವನ್ನೆಲ್ಲಾ ನಾಶಮಾಡುವನು; ದುಷ್ಟಜನರನ್ನೆಲ್ಲಾ ದೇಶವನ್ನು ಬಿಟ್ಟುಹೋಗುವಂತೆ ಮಾಡುವನು.


ಯೆಹೋವನ ದಿನವು ಹತ್ತಿರವಾಗಿದೆ. ಆದ್ದರಿಂದ ದುಃಖಿಸಿರಿ, ರೋಧಿಸಿರಿ. ವೈರಿಯು ಬಂದು ನಿಮ್ಮ ಐಶ್ವರ್ಯವನ್ನು ಸೂರೆಮಾಡುವ ಸಮಯವು ಬರುತ್ತದೆ. ಸರ್ವಶಕ್ತನಾದ ದೇವರು ಅದನ್ನು ನೆರವೇರಿಸುವನು.


ಈ ಅಶುದ್ಧಾತ್ಮಗಳು ಸೈತಾನನ ಆತ್ಮಗಳಾಗಿವೆ. ಅವುಗಳಿಗೆ ಮಹಾ ಅದ್ಭುತಗಳನ್ನು ಮಾಡಲು ಶಕ್ತಿಯಿದೆ. ಈ ಅಶುದ್ಧಾತ್ಮಗಳು ಸರ್ವಶಕ್ತನಾದ ದೇವರ ಮಹಾದಿನದಂದು ನಡೆಯುವ ಯುದ್ಧಕ್ಕೆ, ಲೋಕದಲ್ಲೆಲ್ಲಾ ಇರುವ ರಾಜರನ್ನು ಒಟ್ಟುಗೂಡಿಸಲು ಹೊರಗೆ ಹೋಗುತ್ತವೆ.


ಆತನ ಕೋಪವು ಪ್ರಕಟವಾಗುವ ಮಹಾದಿನವು ಬಂದುಬಿಟ್ಟಿದೆ. ಆ ಕೋಪದ ಎದುರಿನಲ್ಲಿ ನಿಲ್ಲಲು ಯಾರಿಗೂ ಸಾಧ್ಯವಿಲ್ಲ” ಎಂದು ಹೇಳಿದರು.


ಆದರೆ ಪ್ರಭುವು ಮತ್ತೆ ಪ್ರತ್ಯಕ್ಷನಾಗುವ ದಿನವು ಕಳ್ಳನು ಬರುವಂತೆ ಅನಿರೀಕ್ಷಿತವಾಗಿ ಬರುತ್ತದೆ. ಆಕಾಶವು ಮಹಾ ಘೋಷದೊಂದಿಗೆ ಅದೃಶ್ಯವಾಗುತ್ತದೆ. ಆಕಾಶಮಂಡಲದಲ್ಲಿರುವ ಎಲ್ಲಾ ಸೃಷ್ಟಿಗಳು ಬೆಂಕಿಯಿಂದ ನಾಶವಾಗುತ್ತವೆ. ಈ ಲೋಕವೂ ಅದರಲ್ಲಿರುವ ಸಮಸ್ತವೂ ಸುಟ್ಟುಹೋಗುತ್ತದೆ.


ಪ್ರಭುವು ಪ್ರತ್ಯಕ್ಷನಾಗುವ ದಿನವು ರಾತ್ರಿಕಾಲದಲ್ಲಿ ಕಳ್ಳನು ಬರುವಂತೆ ಇದ್ದಕ್ಕಿದ್ದಂತೆ ಬರುತ್ತದೆ ಎಂಬುದು ನಿಮಗೆಲ್ಲ ಚೆನ್ನಾಗಿ ತಿಳಿದಿದೆ.


ಯೆಹೋವನು ಹೀಗೆನ್ನುತ್ತಾನೆ, “ನಾನು ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು. ಅವನು ಯೆಹೋವನಿಂದ ಪ್ರಾಪ್ತಿಯಾಗುವ ಭಯಂಕರವಾದ ಮಹಾ ನ್ಯಾಯತೀರ್ಪಿನ ಕಾಲದಲ್ಲಿ ಬರುವನು.


ತೀರ್ಮಾನದ ತಗ್ಗಿನಲ್ಲಿ ಅನೇಕರು ಸೇರಿದ್ದಾರೆ. ಯೆಹೋವನ ವಿಶೇಷ ದಿನವು ತೀರ್ಮಾನದ ತಗ್ಗಿನ ಹತ್ತಿರ ಬಂದಿದೆ.


ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತದಂತಾಗುವನು. ಆಗ ಯೆಹೋವನ ಭಯಂಕರ ದಿನವು ಬರುವುದು.


ಚೀಯೋನಿನಲ್ಲಿ ತುತ್ತೂರಿಯನ್ನೂದಿರಿ. ನನ್ನ ಪವಿತ್ರ ಪರ್ವತದಲ್ಲಿ ಧ್ವನಿಯೆತ್ತಿ ಎಚ್ಚರಿಕೆ ನೀಡಿರಿ. ದೇಶದಲ್ಲಿ ವಾಸಿಸುವ ಎಲ್ಲಾ ಜನರು ಭಯದಿಂದ ನಡುಗಲಿ. ಯೆಹೋವನ ಮಹಾದಿನವು ಬರಲಿದೆ; ಯೆಹೋವನ ಮಹಾದಿನವು ಹತ್ತಿರವೇ ಇದೆ.


ಶೋಕಿಸಿರಿ. ಯಾಕೆಂದರೆ ಯೆಹೋವನ ಮಹಾದಿನವು ಹತ್ತಿರ ಬಂತು. ಆ ಸಮಯದಲ್ಲಿ ಸರ್ವಶಕ್ತನಾದ ದೇವರ ಸನ್ನಿಧಾನದಿಂದ ದಂಡನೆಯು ಬರುವುದು.


ಆ ದಿನವು ಹತ್ತಿರ ಬಂತು! ಹೌದು, ದೇವರು ನ್ಯಾಯತೀರಿಸುವ ದಿನ ಹತ್ತಿರ ಬಂತು. ಅದು ಮೋಡ ಕವಿದ ದಿನವಾಗಿರುವುದು. ಅದು ಜನಾಂಗಗಳಿಗೆ ನ್ಯಾಯತೀರಿಸುವ ಸಮಯ.


ಅವರು ತಮ್ಮ ಬೆಳ್ಳಿಯ ವಿಗ್ರಹಗಳನ್ನು ರಸ್ತೆಗೆ ಬಿಸಾಡುವರು, ಅವರು ಬಂಗಾರದ ವಿಗ್ರಹವನ್ನು ಅಶುದ್ಧ ವಸ್ತುವಿನಂತೆ ನೋಡುವರು. ಯೆಹೋವನು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರಗಳ ವಿಗ್ರಹಗಳು ಅವರನ್ನು ರಕ್ಷಿಸಲಾರವು. ಅವು ಅವರ ಹಸಿವನ್ನು ನೀಗಿಸಲಾರವು ಅಥವಾ ಅವರ ಹೊಟ್ಟೆಗಳನ್ನು ತುಂಬಿಸಲಾರವು. ಜನರು ಪಾಪದಲ್ಲಿ ಬೀಳುವಂತೆ ಅವು ಮಾಡಿದವು.


ಆ ಜನರು ಯೆಹೋವನ ಸಂದೇಶವನ್ನು ತಂದ ಪ್ರವಾದಿಗಳಾಗಿದ್ದರೆ, ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಯೆಹೋವನ ಆಲಯದಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ರಾಜನ ಅರಮನೆಯಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಜೆರುಸಲೇಮಿನಲ್ಲಿರುವ ಪದಾರ್ಥಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಆ ವಸ್ತುಗಳನ್ನೆಲ್ಲ ಬಾಬಿಲೋನಿಗೆ ತೆಗೆದುಕೊಂಡು ಹೋಗಬಾರದೆಂದು ಅವರು ಪ್ರಾರ್ಥನೆ ಸಲ್ಲಿಸಲಿ.


“ಯಾಜಕರೇ, ಯೆಹೋವನು ನಮಗೆ ಶುಭವನ್ನು ಉಂಟುಮಾಡುವಂತೆ ಆತನನ್ನು ಕೇಳಿಕೊಳ್ಳಿರಿ. ಆದರೆ ಆತನು ನಿಮಗೆ ಕಿವಿಗೊಡುವುದಿಲ್ಲ. ನಿಮ್ಮ ತಪ್ಪು ದೋಷಗಳೇ ಅದಕ್ಕೆ ಕಾರಣ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.


ಇದು ನೆರವೇರುವುದು, ಯಾಕೆಂದರೆ ದೇವರು ದಂಡನೆಗಾಗಿ ಸಮಯವನ್ನು ಆರಿಸಿಕೊಂಡಿದ್ದಾನೆ. ಜನರು ಚೀಯೋನಿನಲ್ಲಿ ಮಾಡಿದ ಕಾರ್ಯಗಳಿಗೆ ದಂಡನೆಯನ್ನು ಅನುಭವಿಸುವುದಕ್ಕಾಗಿ ಆತನು ಒಂದು ವರ್ಷವನ್ನು ಆರಿಸಿಕೊಂಡಿದ್ದಾನೆ.


ನಾನು ಕೋಪಗೊಂಡಿಲ್ಲ. ಆದರೆ ಯುದ್ಧ ನಡೆಯುತ್ತಿರುವಾಗ ಯಾರಾದರೂ ಮುಳ್ಳುಬೇಲಿಯನ್ನು ಹಾಕಿದರೆ, ನಾನು ಮುನ್ನುಗ್ಗಿ ಅದನ್ನು ಸುಟ್ಟುಹಾಕುವೆನು.


ಸರ್ವಶಕ್ತನಾದ ಯೆಹೋವನು ಒಂದು ವಿಶೇಷ ದಿನವನ್ನು ಯೋಜಿಸಿರುತ್ತಾನೆ. ಆ ದಿನದಲ್ಲಿ ಯೆಹೋವನು ಅಹಂಕಾರಿಗಳನ್ನೂ ಜಂಬಕೊಚ್ಚಿಕೊಳ್ಳುವವರನ್ನೂ ಶಿಕ್ಷಿಸುವನು. ಆಗ ಆ ಅಹಂಕಾರಿಗಳನ್ನು ಜನರು ದೊಡ್ಡಜನರೆಂದು ಪರಿಗಣಿಸುವುದಿಲ್ಲ.


ದೇವರೇ, ನೀನು ಭಯಂಕರನೇ ಸರಿ! ನೀನು ಕೋಪಗೊಂಡಿರುವಾಗ ನಿನಗೆ ವಿರೋಧವಾಗಿ ಯಾರು ನಿಂತುಕೊಳ್ಳಬಲ್ಲರು?


ನಿನ್ನ ತೋಳುಗಳು ನನ್ನ ತೋಳುಗಳಂತೆ ಬಲಿಷ್ಠವಾಗಿವೆಯೋ? ನಿನ್ನ ಸ್ವರವನ್ನು ನನ್ನ ಸ್ವರದಂತೆ ಗಟ್ಟಿಯಾಗಿ ಗುಡುಗುಟ್ಟಿಸಬಲ್ಲೆಯಾ?


ನಾನು ನಿಮಗಾಗಿ ಪ್ರಾರ್ಥಿಸದಿದ್ದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವನಾಗುತ್ತೇನೆ. ನಾನು ನಿಮಗೆ ಒಳ್ಳೆಯದೂ ಯೋಗ್ಯವೂ ಆಗಿರುವ ಮಾರ್ಗವನ್ನು ಉಪದೇಶಿಸುತ್ತೇನೆ.


“‘ಇಸ್ರೇಲರೇ, ನಿಮ್ಮ ಪ್ರವಾದಿಗಳು ಪಾಳುಬಿದ್ದ ಮನೆಗಳಲ್ಲಿ ಓಡಾಡುವ ನರಿಗಳಂತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು