6 “‘ಅವರನ್ನು ಯೆಹೋವನು ಕಳುಹಿಸಿಲ್ಲದಿದ್ದರೂ ಅವರು, “ಯೆಹೋವನು ಇದನ್ನು ಹೇಳಿದ್ದಾನೆ” ಎನ್ನುತ್ತಾರೆ. ಅವರು ಮಾಟಮಂತ್ರ ಮಾಡಿ ಇಂತಿಂಥದ್ದು ಸಂಭವಿಸುವುದು ಎಂದು ಸುಳ್ಳು ಹೇಳುತ್ತಾರೆ. ದೇವರು ನಮ್ಮನ್ನು ಕಳುಹಿಸಿದ್ದು ಎಂದು ಸುಳ್ಳು ಹೇಳುವರು. ಅವರು ತಮ್ಮ ಸುಳ್ಳು ನಿಜವಾಗುತ್ತಿರುವದನ್ನು ನೋಡಲು ಕಾಯುತ್ತಿದ್ದಾರೆ.
6 ಸರ್ವೇಶ್ವರ ಇಂತೆನ್ನುತ್ತಾರೆಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ; ಕೇಳಿಸಿದ ವಾಣಿ ಸುಳ್ಳು; ಸರ್ವೇಶ್ವರ ಅವರನ್ನು ಕಳುಹಿಸಲಿಲ್ಲ. ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.
6 ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯುವವರಿಗೆ ಆದ ದರ್ಶನ ವಿುಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವದೆಂದು ಸುಮ್ಮ ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.
6 “ಯೆಹೋವ ದೇವರು ಇಂತೆನ್ನುತ್ತಾರೆ,” ಎಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು, ಯೆಹೋವ ದೇವರು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.
“ಪ್ರವಾದಿಗಳು ಜನರನ್ನು ಎಚ್ಚರಿಸುವದಿಲ್ಲ. ಸತ್ಯವನ್ನು ಮುಚ್ಚಿಡುತ್ತಾರೆ. ಒಂದು ಗೋಡೆಯನ್ನು ದುರಸ್ತಿ ಮಾಡದೆ ಅದರ ರಂಧ್ರಗಳನ್ನು ಗಾರೆಯಿಂದ ಮುಚ್ಚುವ ಕೆಲಸಗಾರರಂತಿದ್ದಾರೆ. ಅವರು ಸುಳ್ಳುದರ್ಶನಗಳನ್ನೆ ನೋಡುತ್ತಾರೆ. ತಮ್ಮ ಭವಿಷ್ಯದ ಬಗ್ಗೆ ಶಕುನದ ಮೂಲಕ ತಿಳಿದುಕೊಳ್ಳುವುದೆಲ್ಲ ಸುಳ್ಳಾಗಿರುತ್ತದೆ. ಅವರು, ‘ನನ್ನ ಒಡೆಯನಾದ ಯೆಹೋವನು ಹೇಳಿದನು’ ಎಂಬುದಾಗಿ ಸುಳ್ಳು ಹೇಳುವರು. ಆದರೆ ನಿಜವಾಗಿಯೂ ಯೆಹೋವನು ಅವರ ಕೂಡ ಮಾತನಾಡಲಿಲ್ಲ.
ಇಸ್ರೇಲರ ದೇವರೂ, ಸರ್ವಶಕ್ತನೂ ಆಗಿರುವ ಯೆಹೋವನು, ಹೀಗೆನ್ನುತ್ತಾನೆ: “ನಿಮ್ಮ ಪ್ರವಾದಿಗಳು ಮತ್ತು ಮಾಟಮಂತ್ರಗಾರರು ನಿಮ್ಮನ್ನು ಮರುಳುಗೊಳಿಸದಿರಲಿ. ಅವರು ನೋಡುವ ಕನಸುಗಳಿಗೆ ಕಿವಿಗೊಡಬೇಡಿ.
ತರುವಾಯ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೀಗೆ ಹೇಳಿದನು: “ಹನನ್ಯನೇ, ಕೇಳು. ಯೆಹೋವನು ನಿನ್ನನ್ನು ಕಳುಹಿಸಲಿಲ್ಲ. ಆದರೆ ಯೆಹೂದದ ಜನರಿಗೆ ಸುಳ್ಳನ್ನು ನಂಬುವಂತೆ ನೀನು ಮಾಡಿರುವೆ.
“‘ಓ ಖಡ್ಗವೇ, ನಿನ್ನ ಕುರಿತು ಅವರು ಸುಳ್ಳುದರ್ಶನಗಳನ್ನು ಕಾಣುವರು. ನಿನ್ನ ಕುರಿತು ಅವರು ಹೇಳುವ ಕಣಿಯು ದಾರಿ ತಪ್ಪಿಸುತ್ತದೆ. ಅದು ಕೇವಲ ಸುಳ್ಳುಗಳ ಕಂತೆ. ಓ ಖಡ್ಗವೇ, ನಿನ್ನನ್ನು ದುಷ್ಟರ ಕುತ್ತಿಗೆಗಳ ಮೇಲೆ ಇರಿಸಲಾಗುವುದು. ಬೇಗನೇ ಅವರು ಹೆಣಗಳಾಗಿ ಬೀಳುವರು. ಅವರ ಸಮಯವು ಬಂದಿದೆ. ಇದು ಅವರ ಅಂತ್ಯದಂಡನೆಯ ಸಮಯವಾಗಿದೆ.
ರಾಜನಾದ ಚಿದ್ಕೀಯನೇ, ನಿನ್ನ ಪ್ರವಾದಿಗಳು ಈಗ ಎಲ್ಲಿದ್ದಾರೆ? ಆ ಪ್ರವಾದಿಗಳು ನಿನಗೆ ಸುಳ್ಳುಪ್ರವಾದನೆಯನ್ನು ಮಾಡಿದರು. ‘ಬಾಬಿಲೋನಿನ ರಾಜನು ನಿನ್ನ ಮೇಲಾಗಲಿ ಅಥವಾ ಈ ಯೆಹೂದ ಪ್ರದೇಶದ ಮೇಲಾಗಲಿ ಧಾಳಿ ಮಾಡುವದಿಲ್ಲ’ ಎಂದು ಅವರು ಹೇಳಿದ್ದರು.
ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.
ಆಗ ಯೆಹೋವನು ನನಗೆ, “ಯೆರೆಮೀಯನೇ, ಆ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳುಬೋಧನೆ ಮಾಡುತ್ತಾರೆ. ನಾನು ಆ ಪ್ರವಾದಿಗಳನ್ನು ಕಳುಹಿಸಲಿಲ್ಲ. ಅವರಿಗೆ ನಾನು ಯಾವ ಅಪ್ಪಣೆಯನ್ನೂ ಕೊಟ್ಟಿಲ್ಲ, ಅವರೊಂದಿಗೆ ನಾನು ಮಾತನ್ನೂ ಆಡಿಲ್ಲ. ಆ ಪ್ರವಾದಿಗಳು ಸುಳ್ಳುದರ್ಶನಗಳನ್ನು ನಿಷ್ಪ್ರಯೋಜಕವಾದ ಮಾಟಮಂತ್ರಗಳನ್ನು ಸ್ವಕಲ್ಪಿತ ವಿಚಾರಗಳನ್ನೂ ಬೋಧಿಸುತ್ತಿದ್ದಾರೆ.
ಅವರು ಅರ್ಥವಿಲ್ಲದ ಮಾತು ಗಳಿಂದ ಬಡಾಯಿಕೊಚ್ಚಿಕೊಳ್ಳುತ್ತಾರೆ; ಜನರನ್ನು ಪಾಪಗಳ ಬಲೆಗೆ ನಡೆಸುತ್ತಿದ್ದಾರೆ. ತಪ್ಪುಮಾರ್ಗದಲ್ಲಿ ನಡೆಯುವ ಜನರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡು ಬಂದ ಜನರನ್ನು ದಾರಿತಪ್ಪಿಸುತ್ತಾರೆ. ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಮಾಡಲು ಇಚ್ಛಿಸುವ ಕೆಟ್ಟಕಾರ್ಯಗಳನ್ನು ಬಳಸಿಕೊಂಡು ಈ ಸುಳ್ಳುಬೋಧಕರು ಅವರನ್ನು ದಾರಿ ತಪ್ಪಿಸುತ್ತಾರೆ.
ಇಸ್ರೇಲ್ ಜನರಿಗೆ ಆ ಮಂತ್ರತಂತ್ರಗಳ ಗುರುತು ಅರ್ಥವಿಲ್ಲದ್ದಾಗಿದೆ. ಅವರು ಮಾಡಿದ ವಾಗ್ದಾನವು ಅವರೊಂದಿಗಿದೆ. ಆದರೆ ಯೆಹೋವನು ಅವರ ಪಾಪಗಳನ್ನು ನೆನಪಿಗೆ ತರುವನು. ಆಗ ಇಸ್ರೇಲರು ಶತ್ರುವಶವಾಗುವರು.”
“‘ಎಲೈ ಸುಳ್ಳುಪ್ರವಾದಿಗಳೇ, ನೀವು ನೋಡಿದ ದರ್ಶನಗಳು ಸತ್ಯವಾದವುಗಳಲ್ಲ. ನೀವು ಮಂತ್ರತಂತ್ರ ಮಾಡಿ ಇಂತಿಂಥದ್ದು ಸಂಭವಿಸುವುದು ಎಂದು ಸುಳ್ಳು ಹೇಳಿದ್ದೀರಿ. ನಾನು ಮಾತಾಡಿಲ್ಲದಿದ್ದರೂ ಯೆಹೋವನೇ ಇದನ್ನು ಹೇಳಿದನೆಂದು ನೀವು ಹೇಳುತ್ತೀರಿ.’”
ನಿನ್ನ ಪ್ರವಾದಿಗಳು ನಿನಗಾಗಿ ದರ್ಶನಗಳನ್ನು ಕಂಡರು. ಆದರೆ ಅವರ ದರ್ಶನಗಳು ನಿರರ್ಥಕವಾದ ಹುಸಿನುಡಿಗಳಾಗಿವೆ. ಅವರು ನಿನ್ನ ಪಾಪಕೃತ್ಯಗಳನ್ನು ಬಹಿರಂಗಪಡಿಸಲಿಲ್ಲ. ಅವರು ಪರಿಸ್ಥಿತಿಯನ್ನು ಸುಧಾರಿಸುವ ಪ್ರಯತ್ನ ಮಾಡಲಿಲ್ಲ. ಅವರು ನಿನ್ನ ಕುರಿತು ಸಂದೇಶಗಳನ್ನು ಪ್ರವಾದಿಸಿದರು. ಆದರೆ ಅವು ನಿರಾಧಾರವಾದ ಸಂದೇಶಗಳಾಗಿದ್ದು ನಿನ್ನನ್ನು ಮರುಳುಗೊಳಿಸಿದವು.
“ಯೆರೆಮೀಯನೇ, ಬಾಬಿಲೋನಿನಲ್ಲಿರುವ ಎಲ್ಲಾ ಬಂಧಿಗಳಿಗೆ ಈ ಸಂದೇಶವನ್ನು ಕಳುಹಿಸು, ‘ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಹೀಗೆನ್ನುವನು: ಶೆಮಾಯನು ನಿಮಗೆ ಪ್ರವಾದನೆ ಮಾಡಿದ್ದಾನೆ. ಆದರೆ ನಾನು ಅವನನ್ನು ಕಳುಹಿಸಲಿಲ್ಲ. ನೀವು ಸುಳ್ಳನ್ನು ನಂಬುವಂತೆ ಅವನು ಮಾಡಿದ್ದಾನೆ.
ಮೀಕಾಯೆಹುವನ್ನು ಸೆರೆಮನೆಯಲ್ಲಿಡಬೇಕೆಂದು ಅವರಿಗೆ ತಿಳಿಸಿ. ಅವನಿಗೆ ತಿನ್ನಲು ಸ್ವಲ್ಪ ರೊಟ್ಟಿ ಮತ್ತು ಕುಡಿಯಲು ಸ್ವಲ್ಪ ನೀರನ್ನು ಮಾತ್ರ ಕೊಡಿ. ನಾನು ಯುದ್ಧದಿಂದ ಮನೆಗೆ ಹಿಂದಿರುಗುವವರೆಗೆ ಅವನನ್ನು ಅಲ್ಲಿಯೇ ಇಡಿ” ಎಂದು ಹೇಳಿದನು.
ಅಹಾಬನು ಪ್ರವಾದಿಗಳ ಸಭೆಯೊಂದನ್ನು ಕರೆದನು. ಆ ಸಮಯದಲ್ಲಿ ನಾನೂರುಮಂದಿ ಪ್ರವಾದಿಗಳಿದ್ದರು. ಅಹಾಬನು ಪ್ರವಾದಿಗಳನ್ನು, “ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ನಾನು ರಾಮೋತಿಗೆ ಹೋಗಬೇಕೇ? ಅಥವಾ ನಾನು ಬೇರೊಂದು ಸಮಯಕ್ಕಾಗಿ ಕಾಯಬೇಕೇ?” ಎಂದು ಕೇಳಿದನು. ಪ್ರವಾದಿಗಳು, “ನೀನು ಹೋಗಿ ಯುದ್ಧಮಾಡು. ನೀನು ಗೆಲ್ಲುವಂತೆ ಯೆಹೋವನು ಮಾಡುವನು” ಎಂದು ಹೇಳಿದರು.
ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಪ್ರವಾದಿಗಳು ನಿಮಗೆ ಹೇಳುತ್ತಿರುವ ವಿಷಯಗಳ ಕಡೆಗೆ ಗಮನ ಕೊಡಬೇಡಿರಿ. ಅವರು ನಿಮ್ಮನ್ನು ಮರುಳುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ದರ್ಶನಗಳ ಬಗ್ಗೆ ಹೇಳುತ್ತಾರೆ. ಅವರ ದರ್ಶನಗಳು ಅವರ ಮನಸ್ಸಿನಿಂದ ಬಂದವುಗಳೇ ಹೊರತು ನನ್ನಿಂದ ಬಂದವುಗಳಲ್ಲ.
ಇತರ ಪ್ರವಾದಿಗಳೆಲ್ಲರೂ ಚಿದ್ಕೀಯನ ಮಾತನ್ನು ಬೆಂಬಲಿಸಿದರು. ಪ್ರವಾದಿಯು, “ನಿನ್ನ ಸೈನ್ಯವು ಈಗ ಹೊರಡಲಿ. ಅವರು ರಾಮೋತಿನಲ್ಲಿ ಅರಾಮ್ಯರ ಸೈನ್ಯದ ವಿರುದ್ಧ ಹೋರಾಡಲೇಬೇಕು. ನೀನು ಹೋರಾಟದಲ್ಲಿ ಜಯಗಳಿಸುವೆ. ನೀನು ಗೆಲ್ಲುವಂತೆ ಯೆಹೋವನು ಮಾಡುತ್ತಾನೆ” ಎಂದನು.
ನಂತರ ರಾಜನಾದ ಅಹಾಬನ ಎದುರಿನಲ್ಲಿ ಮೀಕಾಯೆಹು ನಿಂತುಕೊಂಡನು. ರಾಜನು ಅವನನ್ನು, “ಮೀಕಾಯೆಹುವೇ, ರಾಜನಾದ ಯೆಹೋಷಾಫಾಟನು ಮತ್ತು ನಾನು ನಮ್ಮ ಸೈನ್ಯಗಳನ್ನು ಒಟ್ಟುಗೂಡಿಸಬಹುದೇ? ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ನಾವೀಗ ಹೋಗಬೇಕೇ?” ಎಂದು ಕೇಳಿದನು. ಮೀಕಾಯೆಹು, “ಆಗಲಿ, ಈಗ ನೀವು ಹೋಗಿ, ಅವರ ವಿರುದ್ಧ ಯುದ್ಧಮಾಡಿ. ಯೆಹೋವನು ನಿಮಗೆ ಜಯವನ್ನು ಕೊಡುತ್ತಾನೆ” ಎಂದನು.
ಯೆಹೂದದಲ್ಲಿ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದ ಐದನೇ ತಿಂಗಳಲ್ಲಿ ಹನನ್ಯನೆಂಬ ಪ್ರವಾದಿಯು ನನ್ನೊಂದಿಗೆ ಮಾತನಾಡಿದನು. ಹನನ್ಯನು ಅಜ್ಜೂರನ ಮಗ, ಹನನ್ಯನು ಗಿಬ್ಯೋನ್ ಊರಿನವನು. ನನ್ನೊಂದಿಗೆ ಮಾತನಾಡಿದಾಗ ಅವನು ಯೆಹೋವನ ಆಲಯದಲ್ಲಿದ್ದನು. ಯಾಜಕರು ಮತ್ತು ಸಮಸ್ತ ಜನರು ಅಲ್ಲಿದ್ದರು. ಹನನ್ಯನು ಹೀಗೆ ಹೇಳಿದನು: