ಯೆಹೆಜ್ಕೇಲನು 13:7 - ಪರಿಶುದ್ದ ಬೈಬಲ್7 “‘ಎಲೈ ಸುಳ್ಳುಪ್ರವಾದಿಗಳೇ, ನೀವು ನೋಡಿದ ದರ್ಶನಗಳು ಸತ್ಯವಾದವುಗಳಲ್ಲ. ನೀವು ಮಂತ್ರತಂತ್ರ ಮಾಡಿ ಇಂತಿಂಥದ್ದು ಸಂಭವಿಸುವುದು ಎಂದು ಸುಳ್ಳು ಹೇಳಿದ್ದೀರಿ. ನಾನು ಮಾತಾಡಿಲ್ಲದಿದ್ದರೂ ಯೆಹೋವನೇ ಇದನ್ನು ಹೇಳಿದನೆಂದು ನೀವು ಹೇಳುತ್ತೀರಿ.’” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ಮಾತನಾಡದೆ ಹೋದರೂ, ‘ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನವು ಮಿಥ್ಯ, ನೀವು ಹೇಳಿದ ಕಣಿಯು ಸುಳ್ಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾನು ಮಾತಾಡದೆ ಇದ್ದರೂ ‘ಸರ್ವೇಶ್ವರ ಇಂತೆನ್ನುತ್ತಾರೆ’ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನ ಮಿಥ್ಯ, ನೀವು ಹೇಳಿದ ಭವಿಷ್ಯ ಸುಳ್ಳು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ಮಾತಾಡದೆಹೋದರೂ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನವು ವಿುಥ್ಯ, ನೀವು ಹೇಳಿದ ಕಣಿಯು ಸುಳ್ಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನು ಮಾತಾಡದೇ ಇದ್ದರೂ, “ಯೆಹೋವ ದೇವರು ಇಂತೆನ್ನುತ್ತಾರೆ,” ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನ ಮಿಥ್ಯ, ನೀವು ಹೇಳಿದ ಕಣಿಯು ಸುಳ್ಳು. ಅಧ್ಯಾಯವನ್ನು ನೋಡಿ |
“ಪ್ರವಾದಿಗಳು ಜನರನ್ನು ಎಚ್ಚರಿಸುವದಿಲ್ಲ. ಸತ್ಯವನ್ನು ಮುಚ್ಚಿಡುತ್ತಾರೆ. ಒಂದು ಗೋಡೆಯನ್ನು ದುರಸ್ತಿ ಮಾಡದೆ ಅದರ ರಂಧ್ರಗಳನ್ನು ಗಾರೆಯಿಂದ ಮುಚ್ಚುವ ಕೆಲಸಗಾರರಂತಿದ್ದಾರೆ. ಅವರು ಸುಳ್ಳುದರ್ಶನಗಳನ್ನೆ ನೋಡುತ್ತಾರೆ. ತಮ್ಮ ಭವಿಷ್ಯದ ಬಗ್ಗೆ ಶಕುನದ ಮೂಲಕ ತಿಳಿದುಕೊಳ್ಳುವುದೆಲ್ಲ ಸುಳ್ಳಾಗಿರುತ್ತದೆ. ಅವರು, ‘ನನ್ನ ಒಡೆಯನಾದ ಯೆಹೋವನು ಹೇಳಿದನು’ ಎಂಬುದಾಗಿ ಸುಳ್ಳು ಹೇಳುವರು. ಆದರೆ ನಿಜವಾಗಿಯೂ ಯೆಹೋವನು ಅವರ ಕೂಡ ಮಾತನಾಡಲಿಲ್ಲ.
ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.