ಯೆಹೆಜ್ಕೇಲನು 13:9 - ಪರಿಶುದ್ದ ಬೈಬಲ್9 ಯೆಹೋವನು ಹೇಳುವುದೇನೆಂದರೆ, “ಯಾವ ಪ್ರವಾದಿಗಳು ಸುಳ್ಳುದರ್ಶನವನ್ನು ನೋಡಿ ಸುಳ್ಳನ್ನು ಹೇಳಿದ್ದಾರೋ, ಅವರನ್ನು ಶಿಕ್ಷಿಸುವೆನು. ನನ್ನ ಜನರ ಮಧ್ಯೆಯಿಂದ ಅವರನ್ನು ತೆಗೆದುಬಿಡುವೆನು. ಅವರ ಹೆಸರುಗಳು ಇಸ್ರೇಲರ ವಂಶಾವಳಿ ಪಟ್ಟಿಯಲ್ಲಿ ಇರುವುದಿಲ್ಲ. ಅವರು ಇಸ್ರೇಲ್ ದೇಶಕ್ಕೆ ಹಿಂದಿರುಗಿ ಬರುವುದಿಲ್ಲ. ನಾನೇ ಒಡೆಯನಾದ ಯೆಹೋವನೆಂದು ಆಗ ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ‘ಮಿಥ್ಯ ದರ್ಶನಹೊಂದಿ, ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರೀಸಭೆಯಲ್ಲಿ ಸೇರಬಾರದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗಬಾರದು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮಿಥ್ಯದರ್ಶನ ಹೊಂದಿ ಸುಳ್ಳು ಭವಿಷ್ಯ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರಿಯ ಸಭೆಯಲ್ಲಿ ಸೇರಕೂಡದು, ಇಸ್ರಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರು ಲಿಖಿತವಾಗಬಾರದು, ಅವರು ಇಸ್ರಯೇಲ್ ನಾಡನ್ನು ಪ್ರವೇಶಿಸಲೂಬಾರದು. ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ವಿುಥ್ಯಾದರ್ಶನ ಹೊಂದಿ ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈ ಮಾಡುವೆನು; ಅವರು ನನ್ನ ಜನರ ಹಿರೀ ಸಭೆಯಲ್ಲಿ ಸೇರಕೂಡದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗವು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಸುಳ್ಳಾದದ್ದನ್ನು ದರ್ಶಿಸಿ, ಸುಳ್ಳು ಕಣಿ ಹೇಳುವ ಪ್ರವಾದಿಗಳಿಗೆ ವಿರುದ್ಧವಾಗಿ ನನ್ನ ಹಸ್ತವಿರುವುದು. ಅವರು ನನ್ನ ಜನರ ಸಭೆಯಲ್ಲಿ ಇರುವುದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲಾಗುವುದೂ ಇಲ್ಲ. ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವುದೂ ಇಲ್ಲ. ಆಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿ |
“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ.
ನನ್ನ ಹೆಸರಿನಲ್ಲಿ ಬೋಧನೆ ಮಾಡುತ್ತಿರುವ ಈ ಪ್ರವಾದಿಗಳ ಬಗ್ಗೆ ನಾನು ಹೇಳುವದು ಇಷ್ಟೇ. ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಆ ಪ್ರವಾದಿಗಳು ‘ಶತ್ರುಗಳು ಖಡ್ಗಧಾರಿಗಳಾಗಿ ಎಂದಿಗೂ ಈ ದೇಶದ ಮೇಲೆ ಧಾಳಿ ಮಾಡುವದಿಲ್ಲ. ಈ ದೇಶದಲ್ಲಿ ಎಂದೂ ಕ್ಷಾಮ ಕಾಣಿಸಿಕೊಳ್ಳುವದಿಲ್ಲ’ ಎಂದು ಹೇಳಿದ್ದಾರೆ. ಆದರೆ ಆ ಪ್ರವಾದಿಗಳು ಹಸಿವಿನ ತಾಪದಿಂದ ಸಾಯುತ್ತಾರೆ ಮತ್ತು ಶತ್ರುವಿನ ಖಡ್ಗ ಅವರನ್ನು ಕೊಲ್ಲುತ್ತದೆ.