ಯೆಹೆಜ್ಕೇಲನು 14:10 - ಪರಿಶುದ್ದ ಬೈಬಲ್10 ಹೀಗೆ, ಸಲಹೆ ಕೇಳಲು ಬಂದ ಮನುಷ್ಯನೂ ಅವನಿಗೆ ಉತ್ತರಕೊಟ್ಟ ಪ್ರವಾದಿಯೂ ಒಂದೇ ಶಿಕ್ಷೆಯನ್ನು ಹೊಂದುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆಕೇಳುವವನ ದೋಷವೂ ಅಷ್ಟೇ; ಇಬ್ಬರೂ ತಮ್ಮ ತಮ್ಮ ದೋಷ ಫಲವನ್ನು ಅನುಭವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆ ಕೇಳುವವನ ದೋಷವೂ ಅಷ್ಟೇ; ಉಭಯರೂ ತಮ್ಮ ತಮ್ಮ ದೋಷಫಲವನ್ನು ಅನುಭವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆಕೇಳುವವನ ದೋಷವೂ ಅಷ್ಟೇ; ಉಭಯರೂ ತಮ್ಮ ತಮ್ಮ ದೋಷಫಲವನ್ನು ಅನುಭವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು. ವಿಚಾರಿಸುವವನ ದಂಡನೆಯು ಹೇಗೆಯೋ ಹಾಗೆಯೇ, ಪ್ರವಾದಿಗೆ ದಂಡನೆಯೂ ಇರುವುದು. ಅಧ್ಯಾಯವನ್ನು ನೋಡಿ |
ಆದರೆ ನಾನು ಅವರಿಗೆ ಉತ್ತರಕೊಡುವೆನು. ಅವರಿಗೆ ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ಇಸ್ರೇಲರಲ್ಲಿ ಯಾರಾದರೂ ಪ್ರವಾದಿಯ ಬಳಿಗೆ ಬಂದು ನನ್ನ ಸಲಹೆಯನ್ನು ಕೇಳಿದರೆ, ನಾನೇ ಆ ಮನುಷ್ಯನಿಗೆ ಉತ್ತರ ಕೊಡುವೆನು. ಅವನ ಬಳಿಯಲ್ಲಿ ಹೊಲಸು ವಿಗ್ರಹಗಳಿದ್ದರೂ, ಅವನನ್ನು ಪಾಪದಲ್ಲಿ ಬೀಳುವಂತೆ ಮಾಡಿದ ವಸ್ತುಗಳನ್ನು ಅವನು ಇಟ್ಟುಕೊಂಡಿದ್ದರೂ, ಅವನು ಆ ವಿಗ್ರಹಗಳನ್ನು ಇನ್ನೂ ಪೂಜೆ ಮಾಡುತ್ತಿದ್ದರೂ ನಾನು ಅವನೊಂದಿಗೆ ಮಾತನಾಡುವೆನು. ಅವನ ವಿಗ್ರಹಾರಾಧನೆಗೆ ತಕ್ಕ ಉತ್ತರವನ್ನೇ ಕೊಡುವೆನು.
ನನ್ನ ಹೆಸರಿನಲ್ಲಿ ಬೋಧನೆ ಮಾಡುತ್ತಿರುವ ಈ ಪ್ರವಾದಿಗಳ ಬಗ್ಗೆ ನಾನು ಹೇಳುವದು ಇಷ್ಟೇ. ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಆ ಪ್ರವಾದಿಗಳು ‘ಶತ್ರುಗಳು ಖಡ್ಗಧಾರಿಗಳಾಗಿ ಎಂದಿಗೂ ಈ ದೇಶದ ಮೇಲೆ ಧಾಳಿ ಮಾಡುವದಿಲ್ಲ. ಈ ದೇಶದಲ್ಲಿ ಎಂದೂ ಕ್ಷಾಮ ಕಾಣಿಸಿಕೊಳ್ಳುವದಿಲ್ಲ’ ಎಂದು ಹೇಳಿದ್ದಾರೆ. ಆದರೆ ಆ ಪ್ರವಾದಿಗಳು ಹಸಿವಿನ ತಾಪದಿಂದ ಸಾಯುತ್ತಾರೆ ಮತ್ತು ಶತ್ರುವಿನ ಖಡ್ಗ ಅವರನ್ನು ಕೊಲ್ಲುತ್ತದೆ.
ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”