ಯೆಹೆಜ್ಕೇಲನು 14:15 - ಪರಿಶುದ್ದ ಬೈಬಲ್15 ದೇವರು ಹೇಳಿದ್ದೇನೆಂದರೆ: “ಒಂದುವೇಳೆ, ನಾನು ಕ್ರೂರಪ್ರಾಣಿಗಳನ್ನು ದೇಶದೊಳಗೆ ಕಳುಹಿಸಿ ಜನರನ್ನು ಕೊಂದರೆ, ಅವುಗಳ ದೆಸೆಯಿಂದ ಯಾವನೂ ದೇಶದಲ್ಲಿ ಪ್ರಯಾಣಮಾಡಲಾಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳ್ಳಿಸಿ, ಹಾಳುಮಾಡಿ, ಯಾರೂ ಹಾದು ಹೋಗದಂತೆ ಹೆದರಿಸುವ ಪಕ್ಷದಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ನನ್ನ ಅಪ್ಪಣೆಯ ಮೇರೆಗೆ ದುಷ್ಟಮೃಗಗಳು ಆ ನಾಡಿನಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳಿಸಿ, ಹಾಳುಮಾಡಿ, ಯಾರೂ ಹಾದುಹೋಗದಂತೆ ಹೆದರಿಸುವ ಪಕ್ಷದಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಪಡಿಸಿ ಹಾಳುಮಾಡಿ ಯಾರೂ ಹಾದುಹೋಗದಂತೆ ಹೆದರಿಸುವ ಪಕ್ಷದಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ನಾನು ದುಷ್ಟಮೃಗಗಳನ್ನು ದೇಶದಲ್ಲಿ ಹಾದುಹೋಗುವಂತೆ ಮಾಡಿ, ಅದನ್ನು ನಿರ್ಜನಪಡಿಸಿ, ಹಾಳು ಮಾಡಿ, ಯಾರೂ ಮೃಗಗಳ ನಿಮಿತ್ತ ಹಾದುಹೋಗದಂತೆ ಮಾಡಿದರೆ, ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.