ಯೆಹೆಜ್ಕೇಲನು 14:19 - ಪರಿಶುದ್ದ ಬೈಬಲ್19 ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ನಾನು ದೇಶದ ಮೇಲೆ ರೋಗಗಳನ್ನು ಬರಮಾಡಿದರೆ, ಅಥವಾ ನನ್ನ ಕೋಪವನ್ನು ಸುರಿದು ಜನರನ್ನು ಕೊಂದುಹಾಕಿದರೆ ಮತ್ತು ಪ್ರಾಣಿಗಳನ್ನು ನಾಶಮಾಡಿದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 “ನಾನು ಆ ದೇಶದ ಮೇಲೆ ನನ್ನ ಕೋಪವನ್ನು ಹೊಯ್ದು, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನರನ್ನು, ಪಶುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ನಾನು ಆ ನಾಡಿನ ಮೇಲೆ ಕೋಪಕಾರಿ, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನ ಜಾನುವಾರುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾನು ಆ ದೇಶದ ಮೇಲೆ ನನ್ನ ಕೋಪವನ್ನು ಹೊಯ್ದು ರಕ್ತವನ್ನು ಸುರಿಸಿ ವ್ಯಾಧಿಯನ್ನು ಕಳುಹಿಸಿ ಜನಪಶುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಮರಣದಂಡನೆಯಾಗಿ ಅದರ ಮೇಲೆ ನನ್ನ ರೋಷವನ್ನು ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ತೆಗೆದುಹಾಕುವಾಗ, ಅಧ್ಯಾಯವನ್ನು ನೋಡಿ |
ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.
ಗಾದನು ದಾವೀದನ ಬಳಿಗೆ ಹೋಗಿ, “ಈ ಮೂರು ಶಿಕ್ಷೆಗಳಲ್ಲಿ ಒಂದನ್ನು ಆರಿಸಿಕೊ: ನಿನಗೆ ಮತ್ತು ನಿನ್ನ ದೇಶಕ್ಕೆ ಏಳು ವರ್ಷಗಳ ಕಾಲ ಬರಗಾಲ ಬರಬೇಕೇ? ಅಥವಾ ನಿನ್ನ ಶತ್ರುಗಳು ನಿನ್ನನ್ನು ಮೂರು ತಿಂಗಳ ಕಾಲ ಅಟ್ಟಿಸಬೇಕೇ? ಅಥವಾ ಮೂರು ದಿನಗಳ ಕಾಲ ನಿನ್ನ ದೇಶದಲ್ಲಿ ರೋಗರುಜಿನಗಳು ವ್ಯಾಪಿಸಬೇಕೇ? ಇವುಗಳ ಬಗ್ಗೆ ಯೋಚಿಸು, ನನ್ನನ್ನು ಕಳುಹಿಸಿದ ಯೆಹೋವನಿಗೆ ನಾನು ಏನು ಹೇಳಬೇಕೆಂಬುದನ್ನು ನೀನು ತೀರ್ಮಾನಿಸು” ಎಂದು ಹೇಳಿದನು.
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.