Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:20 - ಪರಿಶುದ್ದ ಬೈಬಲ್‌

20 ದೇವರಾದ ಯೆಹೋವನಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಬನಾಗಲಿ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಬಹುದಾಗಿತ್ತು.” ಇದು ನನ್ನ ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೋಹ, ದಾನಿಯೇಲ, ಯೋಬ ಎಂಬುವರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಗನನ್ನಾಗಲಿ, ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೋಹ, ದಾನಿಯೇಲ, ಯೋಬ, ಎಂಬವರು ಅದರಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಗನನ್ನಾಗಲಿ ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೊಹ ದಾನಿಯೇಲ ಯೋಬ ಎಂಬಿವರು ಅದರಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಗನನ್ನಾಗಲೀ ಹೆಣ್ಣುಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೋಹನೂ, ದಾನಿಯೇಲನೂ, ಯೋಬನೂ ಅದರಲ್ಲಿದ್ದರೂ ನನ್ನ ಜೀವದಾಣೆ, ಅವರು ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:20
20 ತಿಳಿವುಗಳ ಹೋಲಿಕೆ  

ಆ ದೇಶದಲ್ಲಿ ನೋಹ, ದಾನಿಯೇಲ, ಯೋಬ ಜೀವಿಸಿದ್ದರೂ ಆ ಮೂವರು ತಮ್ಮ ಸತ್ಕಾರ್ಯಗಳಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ಇಡೀ ದೇಶವನ್ನು ರಕ್ಷಿಸಲಾಗುತ್ತಿರಲಿಲ್ಲ.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ.


ಆದ್ದರಿಂದ ದೇವರ ಮಕ್ಕಳು ಯಾರೆಂಬುದನ್ನೂ ಸೈತಾನನ ಮಕ್ಕಳು ಯಾರೆಂಬುದನ್ನೂ ನಾವು ತಿಳಿದುಕೊಳ್ಳಬಹುದು. ಯೋಗ್ಯವಾದುದನ್ನು ಮಾಡದಿರುವ ಜನರು ದೇವರ ಮಕ್ಕಳಲ್ಲ. ತನ್ನ ಸಹೋದರನನ್ನು ಪ್ರೀತಿಸದಿರುವವನು ದೇವರ ಮಗನಲ್ಲ.


ಪ್ರಿಯ ಮಕ್ಕಳೇ, ನಿಮ್ಮನ್ನು ಯಾರೂ ತಪ್ಪುಮಾರ್ಗಕ್ಕೆ ಎಳೆಯದಂತೆ ನೋಡಿಕೊಳ್ಳಿರಿ. ಕ್ರಿಸ್ತನು ನೀತಿವಂತನಾಗಿದ್ದಾನೆ. ಆತನಂತೆ ನೀತಿವಂತನಾಗಿರಲು ಬಯಸುವವನು ಒಳ್ಳೆಯದನ್ನು ಮಾಡಬೇಕು.


ಕ್ರಿಸ್ತನು ನೀತಿವಂತನೆಂಬುದು ನಿಮಗೆ ತಿಳಿದಿದೆ. ಆದ್ದರಿಂದ ಯೋಗ್ಯವಾದುದನ್ನು ಮಾಡುವ ಜನರೆಲ್ಲರೂ ದೇವರ ಮಕ್ಕಳೆಂಬುದು ನಿಮಗೆ ತಿಳಿದಿದೆ.


ತನ್ನನ್ನು ಆರಾಧಿಸುವ ನೀತಿವಂತರು ಯಾರೇ ಆಗಿದ್ದರೂ ಅವರನ್ನು ದೇವರು ಸ್ವೀಕರಿಸಿಕೊಳ್ಳುವನು. ಅವನು ಯಾವ ದೇಶದವನು ಎಂಬುದು ಮುಖ್ಯವಲ್ಲ.


ದೀನರೇ, ಯೆಹೋವನ ಬಳಿಗೆ ಬನ್ನಿರಿ. ಆತನ ನಿಯಮಗಳಿಗೆ ಒಳಗಾಗಿರಿ, ಒಳ್ಳೇದನ್ನು ಮಾಡಿರಿ, ದೀನರಾಗಿರಿ. ಯೆಹೋವನು ತನ್ನ ಕೋಪಾಗ್ನಿಯನ್ನು ಪ್ರದರ್ಶಿಸುವ ದಿವಸದಲ್ಲಿ ನೀವು ರಕ್ಷಿಸಲ್ಪಡಬಹುದು.


ನೀನು ಒಳ್ಳೆಯತನವನ್ನು ಬಿತ್ತಿದರೆ ಪ್ರೀತಿಯೆಂಬ ಬೆಳೆಯನ್ನು ಕೊಯ್ಯುವೆ. ನಿನ್ನ ನೆಲವನ್ನು ಉಳುಮೆ ಮಾಡು. ಆಗ ನೀನು ಯೆಹೋವನೊಂದಿಗೆ ಬೆಳೆಯನ್ನು ಕೊಯ್ಯುವೆ. ಆತನು ಬರುವನು. ಮತ್ತು ಆತನ ಒಳ್ಳೆಯತನವು ನಿನ್ನ ಮೇಲೆ ಮಳೆಯಂತೆ ಸುರಿಯುವದು.


ದೇವರು ಅವನ ಹಿಂದಿನ ಪಾಪಗಳನ್ನು ನೆನಪಿಗೆ ತರುವದಿಲ್ಲ. ಅವನು ತಾನು ಮಾಡಿದ ಒಳ್ಳೆಯ ಕಾರ್ಯಗಳ ನಿಮಿತ್ತ ಬದುಕುವನು.”


ನನ್ನ ಜೀವದಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಬನಾಗಲಿ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಬಹುದಾಗಿತ್ತು. ಆದರೆ ದೇಶವು ನಿರ್ಜನವಾಗುತ್ತಿತ್ತು.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ.


ಒಳ್ಳೆಯವರಿಗೆ ಒಳ್ಳೆಯವುಗಳೇ ಸಂಭವಿಸುತ್ತವೆ ಎಂಬುದಾಗಿ ತಿಳಿಸು. ಅವರು ಮಾಡುವ ಒಳ್ಳೆಯ ಕಾರ್ಯಗಳಿಗಾಗಿ ಅವರಿಗೆ ಬಹುಮಾನ ದೊರೆಯುವುದು.


ಯಾರು ಪಾಪ ಮಾಡುತ್ತಾರೋ ಅವರೇ ಮರಣಶಿಕ್ಷೆ ಹೊಂದುವರು. ತಂದೆಯ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳುವುದಿಲ್ಲ. ಮತ್ತು ಮಗನ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ತಂದೆಯು ಹೊತ್ತುಕೊಳ್ಳುವದಿಲ್ಲ. ಒಬ್ಬ ಒಳ್ಳೆ ಮನುಷ್ಯನ ನೀತಿಯು ಅವನಿಗೇ ಸೇರಿದ್ದು. ಕೆಟ್ಟ ಮನುಷ್ಯನ ದುಷ್ಟತ್ವವೂ ಆ ಕೆಟ್ಟ ಮನುಷ್ಯನಿಗೆ ಸೇರಿದ್ದಾಗಿದೆ.


ಕಣ್ಣಿಗೆ ಇನ್ನೂ ಕಾಣದಿದ್ದ ಸಂಗತಿಗಳ ಬಗ್ಗೆ ದೇವರು ನೋಹನನ್ನು ಎಚ್ಚರಿಸಿದನು. ನೋಹನು ದೇವರಲ್ಲಿ ನಂಬಿಕೆಯಿಟ್ಟಿದ್ದನು ಮತ್ತು ಭಕ್ತಿಯುಳ್ಳವನಾಗಿದ್ದನು. ಆದ್ದರಿಂದ ಅವನು ತನ್ನ ಕುಟುಂಬ ರಕ್ಷಣೆಗಾಗಿ ದೊಡ್ಡ ನಾವೆಯನ್ನು ಕಟ್ಟಿ, ಈ ಲೋಕದ ತಪ್ಪನ್ನು ತೋರ್ಪಡಿಸಿದನು. ಹೀಗೆ, ನಂಬಿಕೆಯ ಮೂಲಕ ನೀತಿವಂತರಾದ ಜನರಲ್ಲಿ ಅವನೂ ಒಬ್ಬನಾದನು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು.


ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.


“ಒಂದುವೇಳೆ ನೀನು ಒಬ್ಬ ದುಷ್ಟಮನುಷ್ಯನನ್ನು ಎಚ್ಚರಿಸಿ ಅವನು ಪಾಪ ಮಾಡದಂತೆ ಮತ್ತು ಅವನ ಜೀವಿತವನ್ನು ಬದಲಾವಣೆ ಮಾಡಲು ಹೇಳಿದ್ದಲ್ಲಿ ಆ ಮನುಷ್ಯನು ನಿನ್ನ ಮಾತುಗಳನ್ನು ಕೇಳಲು ನಿರಾಕರಿಸಿದರೆ, ಅವನು ಪಾಪ ಮಾಡುವುದರಿಂದ ಸಾಯುವನು. ಆದರೆ ನೀನು ನಿನ್ನ ಜೀವವನ್ನು ರಕ್ಷಿಸಿಕೊಳ್ಳುವಿ.


ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ನಾನು ದೇಶದ ಮೇಲೆ ರೋಗಗಳನ್ನು ಬರಮಾಡಿದರೆ, ಅಥವಾ ನನ್ನ ಕೋಪವನ್ನು ಸುರಿದು ಜನರನ್ನು ಕೊಂದುಹಾಕಿದರೆ ಮತ್ತು ಪ್ರಾಣಿಗಳನ್ನು ನಾಶಮಾಡಿದರೆ,


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.


ಆ ತರುಣರಲ್ಲಿ ಯೆಹೂದ ಕುಲಕ್ಕೆ ಸೇರಿದವರಾದ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬವರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು