ಯೆಹೆಜ್ಕೇಲನು 14:22 - ಪರಿಶುದ್ದ ಬೈಬಲ್22 ಆದರೆ ಆಶ್ಚರ್ಯಕರವಾಗಿ, ಕೆಲವರು ಅದರಲ್ಲಿ ಉಳಿದುಕೊಳ್ಳುವರು, ಪುತ್ರಪುತ್ರಿಯರನ್ನು ನಿಮ್ಮ ಬಳಿಗೆ ಜೀವಂತವಾಗಿ ತರಲಾಗುವುದು. ಆ ಜನರು ಎಷ್ಟು ದುಷ್ಟರೆಂಬುದನ್ನು ಸ್ವತಃ ನೀವೇ ಅರ್ಥಮಾಡಿಕೊಳ್ಳುವಿರಿ. ನಾನು ಜೆರುಸಲೇಮಿನ ಮೇಲೆ ಬರಮಾಡಿದ ಇಡೀ ಆಪತ್ತಿನ ಬಗ್ಗೆ ನೀವು ಬಹಳವಾಗಿ ನೊಂದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿ ಸಮಾಧಾನ ಹೊಂದುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಅವರು ನಿಮ್ಮ ಬಳಿ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು, ನಾನು ಜೆರುಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ ಅದಕ್ಕೆ ಉಂಟುಮಾಡಿದ ಎಲ್ಲ ಕೇಡುಗಳ ವಿಷಯವಾಗಿ, ಸಮಾಧಾನ ಹೊಂದುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇವಿುನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿಯೂ ಸಮಾಧಾನ ಹೊಂದುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೂ ಅದರಲ್ಲಿ ಪುತ್ರಪುತ್ರಿಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲಾಗುವರು. ಅವರು ನಿಮ್ಮ ಬಳಿಗೆ ಬಂದಾಗ, ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ಸಮಾಧಾನ ಹೊಂದುವಿರಿ. ಅಧ್ಯಾಯವನ್ನು ನೋಡಿ |
“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”
ನಾನು ಆ ಮರವನ್ನು ಬೀಳಿಸಿದೆನು. ಬೀಳುವ ಅದರ ಶಬ್ದವನ್ನು ಕೇಳಿ ರಾಜ್ಯಗಳೆಲ್ಲಾ ಭಯದಿಂದ ನಡುಗಿದವು. ನಾನು ಆ ಮರವನ್ನು ಪಾತಾಳಕ್ಕೆ ಕಳುಹಿಸಿದೆನು. ಅದು ಹೋಗಿ ಅದಕ್ಕಿಂತ ಮೊದಲೇ ಆ ಆಳವಾದ ಗುಂಡಿಗೆ ಹೋಗಿರುವವರೊಂದಿಗೆ ಸೇರಿಕೊಂಡಿತು. ಗತಿಸಿದ ದಿವಸಗಳಲ್ಲಿ ಏದೆನಿನಲ್ಲಿದ್ದ ಎಲ್ಲಾ ಮರಗಳು, ಲೆಬನೋನಿನ ಉತ್ಕೃಷ್ಟ ಮರಗಳು ಆ ನೀರನ್ನು ಕುಡಿದಿದ್ದವು. ಅವೆಲ್ಲವೂ ಪಾತಾಳದಲ್ಲಿ ಸಂತೈಸಿಕೊಂಡವು.