Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:23 - ಪರಿಶುದ್ದ ಬೈಬಲ್‌

23 ಅವರು ಜೀವಿಸುವ ರೀತಿ, ದುಷ್ಟತನವನ್ನು ನಡಿಸುವ ರೀತಿಯನ್ನು ನೀವು ನೋಡುವಿರಿ. ಆಗ ನಾನು ಯಾಕೆ ಅವರನ್ನು ಶಿಕ್ಷಿಸುತ್ತೇನೆಂದು ನಿಮಗೆ ಗೊತ್ತಾಗುವದು.” ಇದು ನನ್ನ ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಜೆರುಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ಆಗ ತಿಳಿಯುವುದು. ಇದು ಸರ್ವೇಶ್ವರನಾದ ದೇವರ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಯೆರೂಸಲೇವಿುಗೆ ಮಾಡಿದ್ದೆಲ್ಲಾ ಸುಮ್ಮನೆ ಮಾಡಿದ್ದಲ್ಲವೆಂದು ನಿಮಗೆ ತಿಳಿದುಬರುವದು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀವು ಅವರ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಅದರೊಳಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:23
20 ತಿಳಿವುಗಳ ಹೋಲಿಕೆ  

ಆ ಜನರು ನಿನ್ನ ಪರಿಶುದ್ಧ ಜನರ ಮತ್ತು ನಿನ್ನ ಪ್ರವಾದಿಗಳ ರಕ್ತವನ್ನು ಸುರಿಸಿದರು. ಈಗ ನೀನು ಅವರಿಗೆ ಕುಡಿಯಲು ರಕ್ತವನ್ನೇ ನೀಡಿರುವೆ. ಅವರು ಇದಕ್ಕೆ ಪಾತ್ರರಾಗಿದ್ದಾರೆ.”


ಪ್ರಭುವೇ, ಜನರೆಲ್ಲರೂ ನಿನಗೆ ಭಯಗೊಳ್ಳುತ್ತಾರೆ; ಜನರೆಲ್ಲರೂ ನಿನ್ನ ಹೆಸರನ್ನು ಸ್ತುತಿಸುತ್ತಾರೆ. ನೀನು ಮಾತ್ರ ಪರಿಶುದ್ಧನಾದವನು. ನೀನು ಯೋಗ್ಯವಾದ ಕಾರ್ಯಗಳನ್ನು ಮಾಡುತ್ತೀ ಎಂಬುದು ಸ್ಪಷ್ಟವಾಗಿರುವುದರಿಂದ ಜನರೆಲ್ಲರೂ ನಿನ್ನ ಸನ್ನಿಧಿಗೆ ಬಂದು ನಿನ್ನನ್ನು ಆರಾಧಿಸುತ್ತಾರೆ.”


ನೀವು ಕಠಿಣರಾಗಿದ್ದೀರಿ ಮತ್ತು ಮೊಂಡರಾಗಿದ್ದೀರಿ. ಮಾರ್ಪಾಟಾಗಲು ನಿಮಗೆ ಇಷ್ಟವಿಲ್ಲ. ಆದ್ದರಿಂದ ನಿಮಗೆ ಬರಲಿರುವ ದಂಡನೆಯನ್ನು ನೀವು ಹೆಚ್ಚುಹೆಚ್ಚು ಮಾಡಿಕೊಳ್ಳುತ್ತಿದ್ದೀರಿ. ದೇವರು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ನಿಮಗೆ ಆ ದಂಡನೆಯಾಗುವುದು. ಆ ದಿನದಲ್ಲಿ ದೇವರ ನ್ಯಾಯವಾದ ತೀರ್ಪುಗಳನ್ನು ಜನರು ನೋಡುವರು.


ಯೆಹೋವನಾದ ನೀನು ನಮಗೆ ಆಪತ್ತುಗಳನ್ನು ಸಿದ್ಧಪಡಿಸಿಟ್ಟಿದ್ದೆ. ಆ ಆಪತ್ತುಗಳು ನಮ್ಮ ಮೇಲೆ ಬರುವಂತೆ ನೀನು ಮಾಡಿದೆ. ಯೆಹೋವನಾದ ನೀನು ಎಲ್ಲವನ್ನು ನಿಷ್ಪಕ್ಷಪಾತವಾಗಿ ಮಾಡುವೆ. ಆದ್ದರಿಂದಲೇ ಇದೆಲ್ಲವನ್ನು ಮಾಡಿದೆ. ಆದರೆ ಇಂದಿಗೂ ನಾವು ನಿನ್ನ ಉಪದೇಶಕ್ಕೆ ಕಿವಿಗೊಟ್ಟಿಲ್ಲ.


“ಯೆಹೋವನೇ, ನೀನು ಒಳ್ಳೆಯವನು, ಒಳ್ಳೆಯತನ ನಿನ್ನ ಪಾಲಾಗಿದೆ. ಆದರೆ ಈಗ ನಮ್ಮದು ನಾಚಿಕೆಪಡುವ ಸ್ಥಿತಿಯಾಗಿದೆ. ಯೆಹೂದ ಮತ್ತು ಜೆರುಸಲೇಮಿನ ಜನರು ನಾಚಿಕೆಪಡುವಂತಾಗಿದೆ. ಹತ್ತಿರದಲ್ಲಿದ್ದವರು ಹಾಗೂ ದೂರದಲ್ಲಿದ್ದವರು, ಒಟ್ಟಿನಲ್ಲಿ ಇಸ್ರೇಲಿನ ಎಲ್ಲ ಜನರು ನಾಚಿಕೆಪಡುವಂತಾಗಿದೆ. ಯೆಹೋವನೇ, ನೀನು ಆ ಜನರನ್ನು ಎಲ್ಲಾ ದೇಶಗಳಲ್ಲಿ ಚದರಿಸಿಬಿಟ್ಟಿರುವೆ. ಆ ಎಲ್ಲಾ ದೇಶಗಳಲ್ಲಿರುವ ಇಸ್ರೇಲರು ನಾಚಿಕೆಪಡಬೇಕಾಗಿದೆ. ಯೆಹೋವನೇ, ನಿನ್ನ ವಿರುದ್ಧ ಮಾಡಿದ ಎಲ್ಲಾ ಹೀನಕೃತ್ಯಗಳಿಗಾಗಿ ಅವರು ನಾಚಿಕೆಪಡಬೇಕಾಗಿದೆ.


ಅಯೋಗ್ಯವಾದ ಶಾಪ ನಿರಪರಾಧಿಗೆ ತಟ್ಟುವುದಿಲ್ಲ. ಆ ಶಾಪದ ಮಾತುಗಳು ಹಾರಿಹೋಗಿ ಎಂದೂ ಕೆಳಗಿಳಿಯದ ಪಕ್ಷಿಗಳಂತಿವೆ.


ಆದರೆ ದೇವರೇ, ನಮಗೆ ಸಂಭವಿಸುವ ಪ್ರತಿಯೊಂದರಲ್ಲೂ ನಿನ್ನದೇನೂ ತಪ್ಪಿಲ್ಲ. ನೀನು ನ್ಯಾಯವಂತನೇ ಸರಿ. ನಾವೇ ತಪ್ಪಿತಸ್ಥರು.


ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.


ಯೆಹೋವನ ನುಡಿಯು ನನಗೆ ಬಂತು. ಆತನು ಹೇಳಿದ್ದೇನೆಂದರೆ,


ಆಗ, ನೀನು ಮಾಡಿದ ಭಯಂಕರ ಕೃತ್ಯಗಳನ್ನು ನಿನ್ನ ನೆನಪಿಗೆ ತಂದುಕೊಳ್ಳುವೆ. ಆಗ ನೀನು ನಾಚಿಕೆಪಡುವೆ. ಅದೇ ಸಮಯದಲ್ಲಿ ನೀನು ನಿನ್ನ ಸಹೋದರಿಯರನ್ನು ಸಂತೈಸುವೆ.


ನಾನು ಆ ಮರವನ್ನು ಬೀಳಿಸಿದೆನು. ಬೀಳುವ ಅದರ ಶಬ್ದವನ್ನು ಕೇಳಿ ರಾಜ್ಯಗಳೆಲ್ಲಾ ಭಯದಿಂದ ನಡುಗಿದವು. ನಾನು ಆ ಮರವನ್ನು ಪಾತಾಳಕ್ಕೆ ಕಳುಹಿಸಿದೆನು. ಅದು ಹೋಗಿ ಅದಕ್ಕಿಂತ ಮೊದಲೇ ಆ ಆಳವಾದ ಗುಂಡಿಗೆ ಹೋಗಿರುವವರೊಂದಿಗೆ ಸೇರಿಕೊಂಡಿತು. ಗತಿಸಿದ ದಿವಸಗಳಲ್ಲಿ ಏದೆನಿನಲ್ಲಿದ್ದ ಎಲ್ಲಾ ಮರಗಳು, ಲೆಬನೋನಿನ ಉತ್ಕೃಷ್ಟ ಮರಗಳು ಆ ನೀರನ್ನು ಕುಡಿದಿದ್ದವು. ಅವೆಲ್ಲವೂ ಪಾತಾಳದಲ್ಲಿ ಸಂತೈಸಿಕೊಂಡವು.


“ಒಂದುವೇಳೆ ಜನರು ತಮ್ಮ ಪಾಪಗಳನ್ನೂ ತಮ್ಮ ಪೂರ್ವಿಕರ ಪಾಪಗಳನ್ನೂ ಅರಿಕೆ ಮಾಡಬಹುದು; ನನಗೆ ವಿರುದ್ಧವಾಗಿ ಪಾಪಮಾಡಿರುವುದಾಗಿಯೂ ನನಗೆ ವಿರೋಧವಾಗಿ ತಿರುಗಿರುವುದಾಗಿಯೂ ಅವರು ಒಪ್ಪಿಕೊಂಡು


ನಾನು ಅವರಿಗೆ ವಿಮುಖನಾಗಿ ಅವರನ್ನು ಶತ್ರುಗಳ ದೇಶಕ್ಕೆ ಕರೆದುಕೊಂಡು ಬಂದೆನೆಂದು ಅವರು ಅರಿತುಕೊಂಡು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಪಾಪಕ್ಕೆ ಬರತಕ್ಕ ಶಿಕ್ಷೆಯನ್ನು ಸ್ವೀಕರಿಸಲು ಯೋಗ್ಯರೆಂದು ಹೇಳಿಕೊಂಡರೆ


ಬಳಿಕ ಅವನು ಜನರ ಮುಂದೆ ನಿಂತುಕೊಂಡು, ‘ನಾನು ಪಾಪಮಾಡಿದೆನು; ಒಳ್ಳೆಯದನ್ನು ಕೆಟ್ಟದ್ದನ್ನಾಗಿ ಮಾಡಿದೆನು. ಆದರೆ ದೇವರು ಅದಕ್ಕೆ ತಕ್ಕಂತೆ ನನ್ನನ್ನು ದಂಡಿಸಲಿಲ್ಲ!


ಸತ್ತುಹೋದ ಜನರಿಗಾಗಿ ನಿಮ್ಮ ರಾಜನು ಗೋಳಾಡುವನು; ನಾಯಕನಿಗೆ ನಿರೀಕ್ಷೆಯು ಇಲ್ಲವಾಗುವುದು. ಸಾಮಾನ್ಯ ಜನರು ಭಯಗ್ರಸ್ತರಾಗುವರು. ಯಾಕೆಂದರೆ ನಾನು ಅವರ ನಡತೆಗೆ ತಕ್ಕಂತೆ ಅವರಿಗೆ ಮಾಡುವೆನು; ಅವರು ಬೇರೆಯವರಿಗೆ ನ್ಯಾಯ ತೀರಿಸಿದಂತೆ ನಾನು ಅವರಿಗೆ ನ್ಯಾಯತೀರಿಸುವೆನು. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು