3 “ನರಪುತ್ರನೇ, ಈ ಜನರು ತಮ್ಮ ವಿಗ್ರಹಗಳಿಗೆ ಪ್ರತಿಷ್ಠಿತರಾಗಿದ್ದಾರೆ ಮತ್ತು ಪಾಪಕ್ಕೆ ಬೀಳಲು ತಮಗೆ ತಾವೇ ಅವಕಾಶಮಾಡಿಕೊಡುತ್ತಾರೆ. ಸಹಾಯಕ್ಕಾಗಿ ನನ್ನನ್ನು ಕೇಳಿಕೊಳ್ಳಲು ಅವರಿಗೆ ಅವಕಾಶ ಕೊಡಬೇಕೇ? ಇಲ್ಲ.
3 “ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಇಲ್ಲ.”
3 “ನರಪುತ್ರನೇ, ಈ ಜನರು ವಿಗ್ರಹಗಳನ್ನು, ತಮ್ಮ ಹೃದಯದಲ್ಲಿ ನೆಲೆಗೊಳಿಸಿಕೊಂಡಿದ್ದಾರೆ. ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆಯೇ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಅಲ್ಲ.
3 ನರಪುತ್ರನೇ, ಇವರು ತಮ್ಮ ಬೊಂಬೆಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ ತಮಗೆ ಪಾಪಕಾರಿಯಾದ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವದು ಯುಕ್ತವೋ? ಎಂದಿಗೂ ಅಲ್ಲ.
3 “ಮನುಷ್ಯಪುತ್ರನೇ, ಈ ಮನುಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ, ತಮ್ಮ ಅಕ್ರಮವಾದ ವಿಘ್ನಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವೆಲ್ಲವುಗಳಿಗಾಗಿ ನಾನು ಅವರನ್ನು ವಿಚಾರಿಸಬೇಕೇ?
ಯೆಹೋವನಾದ ನಾನೇ ಸ್ವತಃ ಪ್ರತಿಯೊಬ್ಬನಿಗೂ ಉತ್ತರಿಸುವೆನು ಅಂದರೆ ಅವನು ತನ್ನನ್ನು ಪಾಪಕ್ಕೆ ಬೀಳಿಸುವ ವಿಗ್ರಹಗಳನ್ನು ಹೊಂದಿದ್ದರೂ ಆ ವಿಗ್ರಹಗಳನ್ನು ಪೂಜಿಸುತ್ತಿದ್ದರೂ ಮತ್ತು ನನ್ನಿಂದ ತನ್ನನ್ನು ಬೇರ್ಪಡಿಸಿಕೊಳ್ಳುತ್ತಿದ್ದರೂ ನನ್ನ ಉಪದೇಶಕ್ಕಾಗಿ ನನ್ನ ಬಳಿಗೆ ಬಂದರೆ ಅವನು ಇಸ್ರೇಲನಾಗಿದ್ದರೂ ಇಸ್ರೇಲಿನಲ್ಲಿ ವಾಸವಾಗಿರುವ ಪರದೇಶಿಯಾಗಿದ್ದರೂ ನಾನು ಶಾಪವೆಂಬ ಉತ್ತರ ಕೊಡುವೆನು.
ಅವರು ತಮ್ಮ ಬೆಳ್ಳಿಯ ವಿಗ್ರಹಗಳನ್ನು ರಸ್ತೆಗೆ ಬಿಸಾಡುವರು, ಅವರು ಬಂಗಾರದ ವಿಗ್ರಹವನ್ನು ಅಶುದ್ಧ ವಸ್ತುವಿನಂತೆ ನೋಡುವರು. ಯೆಹೋವನು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರಗಳ ವಿಗ್ರಹಗಳು ಅವರನ್ನು ರಕ್ಷಿಸಲಾರವು. ಅವು ಅವರ ಹಸಿವನ್ನು ನೀಗಿಸಲಾರವು ಅಥವಾ ಅವರ ಹೊಟ್ಟೆಗಳನ್ನು ತುಂಬಿಸಲಾರವು. ಜನರು ಪಾಪದಲ್ಲಿ ಬೀಳುವಂತೆ ಅವು ಮಾಡಿದವು.
“‘ಇಸ್ರೇಲ್ ಜನರು ನನ್ನ ಆಜ್ಞೆಗಳಿಗೆ ವಿಧೇಯರಾಗಲು ನಿರಾಕರಿಸಿದರು. ನನ್ನ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಅವರ ಮನಸ್ಸು ಆ ಹೊಲಸು ದೇವರುಗಳ ಮೇಲೆ ನೆಟ್ಟಿದ್ದರಿಂದ ಅವರು ಹಾಗೆಲ್ಲಾ ಮಾಡಿದರು.
“ನರಪುತ್ರನೇ, ಇಸ್ರೇಲಿನ ಹಿರಿಯರೊಂದಿಗೆ ಮಾತಾಡಿ ಅವರಿಗೆ, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನೀವು ನನ್ನ ಬುದ್ಧಿವಾದವನ್ನು ಕೇಳಲು ಬಂದಿರುವಿರಾ? ನನ್ನ ಜೀವದಾಣೆ, ನನ್ನ ಬುದ್ಧಿವಾದವನ್ನು ನಿಮಗೆ ಹೇಳುವದಿಲ್ಲವೆಂದು ನಾನು ಪ್ರಮಾಣಮಾಡುತ್ತೇನೆ. ನನ್ನ ಒಡೆಯನಾದ ಯೆಹೋವನ ವಾಕ್ಯವಿದು.’
“ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತುವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚೆಚ್ಚಾಗಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ.
ಆದರೆ ನಾನು ಅವರಿಗೆ ಉತ್ತರಕೊಡುವೆನು. ಅವರಿಗೆ ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ಇಸ್ರೇಲರಲ್ಲಿ ಯಾರಾದರೂ ಪ್ರವಾದಿಯ ಬಳಿಗೆ ಬಂದು ನನ್ನ ಸಲಹೆಯನ್ನು ಕೇಳಿದರೆ, ನಾನೇ ಆ ಮನುಷ್ಯನಿಗೆ ಉತ್ತರ ಕೊಡುವೆನು. ಅವನ ಬಳಿಯಲ್ಲಿ ಹೊಲಸು ವಿಗ್ರಹಗಳಿದ್ದರೂ, ಅವನನ್ನು ಪಾಪದಲ್ಲಿ ಬೀಳುವಂತೆ ಮಾಡಿದ ವಸ್ತುಗಳನ್ನು ಅವನು ಇಟ್ಟುಕೊಂಡಿದ್ದರೂ, ಅವನು ಆ ವಿಗ್ರಹಗಳನ್ನು ಇನ್ನೂ ಪೂಜೆ ಮಾಡುತ್ತಿದ್ದರೂ ನಾನು ಅವನೊಂದಿಗೆ ಮಾತನಾಡುವೆನು. ಅವನ ವಿಗ್ರಹಾರಾಧನೆಗೆ ತಕ್ಕ ಉತ್ತರವನ್ನೇ ಕೊಡುವೆನು.
ಆದರೆ ಆ ಲೇವಿಯರು, ಜನರು ನನಗೆ ವಿರುದ್ಧವಾಗಿ ಪಾಪ ಮಾಡುವಂತೆ ಸಹಾಯಮಾಡಿದರು. ಜನರು ತಮ್ಮ ವಿಗ್ರಹಗಳನ್ನು ಪೂಜಿಸುವಂತೆ ಅವರಿಗೆ ಸಹಾಯ ಮಾಡಿದರು. ಆದ್ದರಿಂದ ನಾನು ವಾಗ್ದಾನ ಮಾಡುವದೇನೆಂದರೆ, ‘ಅವರು ಮಾಡಿದ ಪಾಪಗಳಿಗಾಗಿ ಅವರು ಶಿಕ್ಷಿಸಲ್ಪಡುವರು.’” ಇದು ನನ್ನ ಒಡೆಯನಾದ ಯೆಹೋವನ ನುಡಿ.
ನೀವು ಅವುಗಳಿಗೆ ಅದೇ ರೀತಿಯ ಕಾಣಿಕೆಗಳನ್ನರ್ಪಿಸುತ್ತೀರಿ. ಆ ಸುಳ್ಳು ದೇವರುಗಳಿಗೆ ನೀವು ನಿಮ್ಮ ಮಕ್ಕಳನ್ನು ಬೆಂಕಿಯ ಮೂಲಕ ಆಹುತಿ ಮಾಡುತ್ತೀರಿ. ಈ ಹೊತ್ತಿನ ದಿನದ ತನಕವೂ ಆ ಹೊಲಸು ವಿಗ್ರಹಗಳ ಮೂಲಕ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳುತ್ತಿದ್ದೀರಿ. ನೀವು ನನ್ನ ಬಳಿಗೆ ಬಂದು ನನ್ನ ಸಲಹೆಗಳನ್ನು ಕೇಳಲು ನಿಮ್ಮನ್ನು ನಾನು ಸ್ವಾಗತಿಸಬೇಕೋ? ನಾನು ಒಡೆಯನಾದ ಯೆಹೋವನು. ನನ್ನ ಜೀವದಾಣೆ, ನಾನು ನಿಮಗೆ ಉತ್ತರಿಸುವುದಿಲ್ಲ; ನಿಮಗೆ ಸಲಹೆಗಳನ್ನೂ ಕೊಡುವದಿಲ್ಲ.
“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.
ನಂಬದಿರುವ ಜನರಿಗೆ ಆತನು: “ಜನರನ್ನು ಮುಗ್ಗರಿಸುವ ಕಲ್ಲೂ ಜನರನ್ನು ಬೀಳಿಸುವ ಕಲ್ಲೂ ಆಗಿದ್ದಾನೆ.” ದೇವರ ಮಾತಿಗೆ ಅವಿಧೇಯರಾಗುವುದರಿಂದಲೇ ಜನರು ಮುಗ್ಗರಿಸಿ ಬೀಳುವರು. ಆ ಜನರಿಗೆ ಹೀಗಾಗಬೇಕೆಂಬುದು ದೇವರ ಯೋಜನೆಯಾಗಿತ್ತು.
ಆಗ ನಾನು ಶುದ್ಧ ನೀರನ್ನು ನಿಮ್ಮ ಮೇಲೆ ಚಿಮುಕಿಸಿ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವೆನು. ಆ ವಿಗ್ರಹಗಳ ಹೊಲಸನ್ನು ನಿಮ್ಮಿಂದ ನಾನು ತೊಳೆದುಹಾಕಿ ನಿಮ್ಮನ್ನು ಶುದ್ಧರನ್ನಾಗಿ ಮಾಡುವೆನು.”
ಆಮೇಲೆ ದೇವರು ಹೇಳಿದ್ದೇನೆಂದರೆ: “ಆದರೆ ಈಗ ಅವರ ಹೃದಯವು ಆ ಹೊಲಸು ವಿಗ್ರಹಗಳಿಗೆ ಸೇರಿದ್ದಾಗಿದೆ. ಅವರು ಮಾಡಿದ ದುಷ್ಟತನಕ್ಕೆ ನಾನು ಅವರನ್ನು ಶಿಕ್ಷಿಸಲೇಬೇಕಾಗಿದೆ.” ನನ್ನ ಒಡೆಯನಾದ ಯೆಹೋವನು ಈ ಸಂಗತಿಗಳನ್ನು ತಿಳಿಸಿದನು.
ಯೆಹೋವನು ಹೇಳುತ್ತಾನೆ, “ನಾನು ಶೀಘ್ರವಾಗಿ ಯೆಹೂದದ ಜನರಿಗೆ ಏನಾದರೊಂದು ಭಯಂಕರ ಅನಾಹುತ ಸಂಭವಿಸುವಂತೆ ಮಾಡುತ್ತೇನೆ. ಅವರು ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಅವರು ಪಶ್ಚಾತ್ತಾಪಪಡುವರು. ಅವರು ಸಹಾಯಕ್ಕಾಗಿ ನನಗೆ ಮೊರೆಯಿಡುವರು. ಆದರೆ ನಾನು ಅವರ ಮೊರೆಯನ್ನು ಕೇಳುವದಿಲ್ಲ.
ಸೌಲನು ಯೆಹೋವನಿಗೆ ಪ್ರಾರ್ಥನೆ ಮಾಡಿದನು. ಆದರೆ ಯೆಹೋವನು ಅವನಿಗೆ ಉತ್ತರ ನೀಡಲಿಲ್ಲ. ದೇವರು ಕನಸುಗಳಲ್ಲಿಯೂ ಸೌಲನೊಡನೆ ಮಾತನಾಡಲಿಲ್ಲ. ದೇವರು ಅವನಿಗೆ ಊರೀಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲಿಲ್ಲ.
ಇದು ನಿಮಗೆ ಚೆನ್ನಾಗಿ ತಿಳಿದಿರಲಿ: ಲೈಂಗಿಕ ಪಾಪಮಾಡುವವರಿಗೆ, ದುಷ್ಕೃತ್ಯಗಳನ್ನು ಮಾಡುವವರಿಗೆ, ಸ್ವಾರ್ಥಿಗಳಿಗೆ, ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಸ್ಥಳವೇ ಇಲ್ಲ. ಸ್ವಾರ್ಥತೆಯು ವಿಗ್ರಹಾರಾಧನೆಗೆ ಸಮಾನವಾಗಿದೆ.
ಲೋಕದೊಳಗಿರುವ ಎಲ್ಲಾ ಮನುಷ್ಯರನ್ನೂ ಪ್ರಾಣಿಗಳನ್ನೂ ಆಕಾಶದಲ್ಲಿರುವ ಎಲ್ಲಾ ಪಕ್ಷಿಗಳನ್ನೂ ನೀರಿನಲ್ಲಿರುವ ಎಲ್ಲಾ ಮೀನುಗಳನ್ನೂ ನಾನು ನಾಶಮಾಡುವೆನು. ಎಲ್ಲಾ ದುಷ್ಟ ಜನರನ್ನೂ ಮತ್ತು ಅವರನ್ನು ಪಾಪಕ್ಕೆ ನಡಿಸುವ ಎಲ್ಲಾ ವಸ್ತುಗಳನ್ನೂ ನಾನು ನಾಶಮಾಡುವೆನು. ಭೂಮಿಯ ಮೇಲಿರುವ ಎಲ್ಲಾ ಜನರನ್ನು ನಿರ್ಮೂಲ ಮಾಡುವೆನು.” ಈ ವಿಷಯಗಳನ್ನು ಯೆಹೋವನು ತಿಳಿಸಿದನು.
ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.
“ಒಳ್ಳೆಯವನು ತನ್ನ ಒಳ್ಳೆಯತನವನ್ನು ತೊರೆದು ಕೆಟ್ಟದ್ದನ್ನು ಮಾಡಿದರೆ, ನಾನು ಅವನ ಹಾದಿಗೆ ತಡೆಯನ್ನು ಹಾಕಿ ಅವನು ಬೀಳುವಂತೆ ಮಾಡುವೆನು; ಅವನು ಸಾಯುವನು. ನೀನು ಅವನನ್ನು ಎಚ್ಚರಿಸಲಿಲ್ಲವಾದ್ದರಿಂದ ಅವನು ತನ್ನ ಪಾಪದ ನಿಮಿತ್ತ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೆ ಹೊಣೆಗಾರನನ್ನಾಗಿ ಮಾಡುತ್ತೇನೆ. ಜನರು ಅವನ ಒಳ್ಳೆಯ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.
ಪ್ರಾಮಾಣಿಕರಾಗಿರುವ ನೀತಿವಂತರು ಹಣಕ್ಕಾಗಿ ಇತರರಿಗೆ ಹಾನಿಮಾಡದವರಾಗಿದ್ದಾರೆ. ಅವರು ಆ ಬೆಂಕಿಯಲ್ಲಿ ವಾಸಿಸುವರು. ಅವರು ಲಂಚ ತೆಗೆದುಕೊಳ್ಳಲು ನಿರಾಕರಿಸುವರು. ಇತರರನ್ನು ಕೊಲೆಮಾಡುವ ಯೋಜನೆಯನ್ನು ಕೇಳಲು ಅವರು ಇಷ್ಟಪಡುವುದಿಲ್ಲ. ಅವರು ಕೆಟ್ಟಕಾರ್ಯಗಳ ಯೋಜನೆಗಳನ್ನು ನೋಡುವುದಿಲ್ಲ.
ಎಲೀಷನು ಇಸ್ರೇಲಿನ ರಾಜನಿಗೆ, “ನನ್ನಿಂದ ನಿನಗೆ ಏನು ಬೇಕಾಗಿದೆ? ನಿನ್ನ ತಂದೆತಾಯಿಯರ ಪ್ರವಾದಿಗಳ ಬಳಿಗೆ ಹೋಗು!” ಎಂದು ಹೇಳಿದನು. ಇಸ್ರೇಲಿನ ರಾಜನು ಎಲೀಷನಿಗೆ, “ಇಲ್ಲ, ನಾವು ನಿನ್ನನ್ನು ನೋಡಲೆಂದು ಇಲ್ಲಿಗೆ ಬಂದಿದ್ದೇವೆ, ಏಕೆಂದರೆ ಯೆಹೋವನು ಮೂವರು ರಾಜರನ್ನು ಒಟ್ಟಿಗೆ ಬರಮಾಡಿ, ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದ್ದಾನೆ. ನಾವು ನಿನ್ನ ಸಹಾಯವನ್ನು ಬಯಸಿದ್ದೇವೆ” ಎಂದನು.
“‘ನರಪುತ್ರನೇ, ನಿನ್ನ ವಿಷಯದಲ್ಲಿ ನಿನ್ನ ಜನರು ಗೋಡೆಗೆ ಒರಗಿಕೊಂಡೂ ಬಾಗಿಲಿನ ನಡುವೆ ನಿಂತುಕೊಂಡೂ ಮಾತನಾಡಿಕೊಳ್ಳುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು, “ಬನ್ನಿ, ಯೆಹೋವನು ಹೇಳುವುದನ್ನು ನಾವು ಹೋಗಿ ಕೇಳೋಣ”
ಪಷ್ಹೂರ ಮತ್ತು ಚೆಫನ್ಯರು ಹೀಗೆಂದರು: “ನಮಗೋಸ್ಕರ ಯೆಹೋವನನ್ನು ಪ್ರಾರ್ಥಿಸಿ ಮುಂದೆ ಸಂಭವಿಸುವುದನ್ನು ವಿಚಾರಿಸು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿರುವನು; ಆದ್ದರಿಂದ ಮುಂದೆ ಸಂಭವಿಸುವುದನ್ನು ನಾವು ತಿಳಿಯ ಬಯಸುತ್ತೇವೆ. ಮೊದಲಿನಂತೆ ಯೆಹೋವನು ನಮಗೋಸ್ಕರ ಅದ್ಭುತಗಳನ್ನೂ ಮಾಡಬಹುದು. ನೆಬೂಕದ್ನೆಚ್ಚರನು ನಮ್ಮ ಮೇಲೆ ಧಾಳಿ ಮಾಡುವುದನ್ನು ನಿಲ್ಲಿಸಿ ಹೊರಟುಹೋಗುವಂತೆ ಆತನು ಮಾಡಬಹುದು.”