ಯೆಹೆಜ್ಕೇಲನು 14:5 - ಪರಿಶುದ್ದ ಬೈಬಲ್5 ಯಾಕೆಂದರೆ ನಾನು ಅವರ ಹೃದಯಗಳನ್ನು ಪರಿವರ್ತಿಸಬೇಕು. ಅವರು ನನ್ನನ್ನು ತೊರೆದು ಹೊಲಸು ವಿಗ್ರಹಗಳನ್ನು ಪೂಜಿಸಿದರೂ ನಾನು ಅವರನ್ನು ಪ್ರೀತಿಸುತ್ತೇನೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು.’ ಇದೇ ನನ್ನ ಉದ್ದೇಶ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇಸ್ರಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದ್ದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ಬೊಂಬೆಗಳ ನಿವಿುತ್ತ ನನ್ನನ್ನು ತೊರೆದದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲಿ ಸಿಕ್ಕಿಸಿ ಹಿಡಿಯುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ತಮ್ಮ ವಿಗ್ರಹಗಳಿಗಾಗಿ ನನ್ನನ್ನು ತೊರೆದ ಇಸ್ರಾಯೇಲ್ ಜನರ ಹೃದಯಗಳನ್ನು ಪುನಃ ವಶಪಡಿಸಿಕೊಳ್ಳಲು ನಾನು ಇದನ್ನು ಮಾಡುತ್ತೇನೆ.’ ಅಧ್ಯಾಯವನ್ನು ನೋಡಿ |