ಯೆಹೆಜ್ಕೇಲನು 14:6 - ಪರಿಶುದ್ದ ಬೈಬಲ್6 “ಆದ್ದರಿಂದ ಇಸ್ರೇಲ್ ಜನರಿಗೆ ಈ ವಿಷಯವನ್ನು ತಿಳಿಸು. ಅವರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ನಿಮ್ಮ ಹೊಲಸು ವಿಗ್ರಹಗಳನ್ನು ತೊರೆದುಬಿಟ್ಟು ನನ್ನ ಬಳಿಗೆ ಹಿಂತಿರುಗಿರಿ. ಆ ಭಯಂಕರ ಸುಳ್ಳು ದೇವರಿಂದ ತೊಲಗಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿ, ನಿಮ್ಮ ಎಲ್ಲಾ ಅಸಹ್ಯ ವಸ್ತುಗಳ ಕಡೆಗೆ ಬೆನ್ನುಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಆದಕಾರಣ ನೀನು ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿರಿ; ನಿಮ್ಮ ಎಲ್ಲಾ ಅಸಹ್ಯವಸ್ತುಗಳ ಕಡೆಗೆ ಬೆನ್ನುಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ನಿಮ್ಮ ಬೊಂಬೆಗಳನ್ನು ತೊರೆದುಬಿಟ್ಟು ಹಿಂದಿರುಗಿರಿ, ನಿಮ್ಮ ಎಲ್ಲಾ ಅಸಹ್ಯವಸ್ತುಗಳ ಕಡೆಗೆ ಬೆನ್ನುಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಆದ್ದರಿಂದ ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮಾನಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾಗಿಯೇ ತಿರುಗಿಕೊಳ್ಳಿರಿ. ನಿಮ್ಮ ಅಸಹ್ಯವಾದವುಗಳನ್ನೆಲ್ಲಾ ಬಿಟ್ಟು, ನಿಮ್ಮ ಮುಖಗಳನ್ನು ತಿರುಗಿಸಿರಿ. ಅಧ್ಯಾಯವನ್ನು ನೋಡಿ |
ಆದರೆ ನಾನು ಅವರಿಗೆ ಉತ್ತರಕೊಡುವೆನು. ಅವರಿಗೆ ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ಇಸ್ರೇಲರಲ್ಲಿ ಯಾರಾದರೂ ಪ್ರವಾದಿಯ ಬಳಿಗೆ ಬಂದು ನನ್ನ ಸಲಹೆಯನ್ನು ಕೇಳಿದರೆ, ನಾನೇ ಆ ಮನುಷ್ಯನಿಗೆ ಉತ್ತರ ಕೊಡುವೆನು. ಅವನ ಬಳಿಯಲ್ಲಿ ಹೊಲಸು ವಿಗ್ರಹಗಳಿದ್ದರೂ, ಅವನನ್ನು ಪಾಪದಲ್ಲಿ ಬೀಳುವಂತೆ ಮಾಡಿದ ವಸ್ತುಗಳನ್ನು ಅವನು ಇಟ್ಟುಕೊಂಡಿದ್ದರೂ, ಅವನು ಆ ವಿಗ್ರಹಗಳನ್ನು ಇನ್ನೂ ಪೂಜೆ ಮಾಡುತ್ತಿದ್ದರೂ ನಾನು ಅವನೊಂದಿಗೆ ಮಾತನಾಡುವೆನು. ಅವನ ವಿಗ್ರಹಾರಾಧನೆಗೆ ತಕ್ಕ ಉತ್ತರವನ್ನೇ ಕೊಡುವೆನು.
ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.
ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.
ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”