ಯೆಹೆಜ್ಕೇಲನು 14:9 - ಪರಿಶುದ್ದ ಬೈಬಲ್9 ಆದರೆ ಒಬ್ಬ ಪ್ರವಾದಿಯು ಅವನಿಗೆ ತನ್ನದೇ ಆದ ಉತ್ತರವನ್ನು ಕೊಡುವಷ್ಟು ಮೂರ್ಖನಾಗಿದ್ದರೆ, ಆಗ ನಾನು, ಅವನು ಎಂಥಾ ಮೂರ್ಖನಾಗಿದ್ದಾನೆಂದು ತೋರಿಸುವೆನು. ಅವನ ಮೇಲೆ ನನ್ನ ಸಾಮರ್ಥ್ಯವನ್ನು ಪ್ರಯೋಗಿಸುವೆನು. ಅವನನ್ನು ನಾಶಮಾಡಿ ನನ್ನ ಜನರ ಮಧ್ಯದಿಂದ ಅವನನ್ನು ತೆಗೆದುಬಿಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಒಬ್ಬ ಪ್ರವಾದಿ ಮರುಳುಗೊಂಡು ದೈವೋಕ್ತಿಯೊಂದನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಸರ್ವೇಶ್ವರನಾದ ನಾನೇ. ನಾನು ಅವನ ಮೇಲೆ ಕೈಯೆತ್ತಿ ಇಸ್ರಯೇಲರಾದ ನನ್ನ ಜನರಿಂದ ತೆಗೆದುಹಾಕಿ ಅವನನ್ನು ನಿರ್ನಾಮ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲ್ಯರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ ‘ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ, ಯೆಹೋವ ದೇವರಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ. ನಾನು ನನ್ನ ಕೈಯನ್ನು ಅವನ ವಿರುದ್ಧವಾಗಿ ಚಾಚಿ, ನನ್ನ ಜನರಾದ ಇಸ್ರಾಯೇಲರ ಮಧ್ಯದೊಳಗಿಂದ ಅವನನ್ನು ನಾಶಪಡಿಸುವೆನು. ಅಧ್ಯಾಯವನ್ನು ನೋಡಿ |
ನನ್ನ ಹೆಸರಿನಲ್ಲಿ ಬೋಧನೆ ಮಾಡುತ್ತಿರುವ ಈ ಪ್ರವಾದಿಗಳ ಬಗ್ಗೆ ನಾನು ಹೇಳುವದು ಇಷ್ಟೇ. ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಆ ಪ್ರವಾದಿಗಳು ‘ಶತ್ರುಗಳು ಖಡ್ಗಧಾರಿಗಳಾಗಿ ಎಂದಿಗೂ ಈ ದೇಶದ ಮೇಲೆ ಧಾಳಿ ಮಾಡುವದಿಲ್ಲ. ಈ ದೇಶದಲ್ಲಿ ಎಂದೂ ಕ್ಷಾಮ ಕಾಣಿಸಿಕೊಳ್ಳುವದಿಲ್ಲ’ ಎಂದು ಹೇಳಿದ್ದಾರೆ. ಆದರೆ ಆ ಪ್ರವಾದಿಗಳು ಹಸಿವಿನ ತಾಪದಿಂದ ಸಾಯುತ್ತಾರೆ ಮತ್ತು ಶತ್ರುವಿನ ಖಡ್ಗ ಅವರನ್ನು ಕೊಲ್ಲುತ್ತದೆ.
ಆದ್ದರಿಂದ ನಾನು ಅವರ ಉಪಾಯಗಳನ್ನೇ ಬಳಸಿಕೊಳ್ಳಲು ನಿರ್ಧರಿಸಿದೆನು. ಅವರು ಬಹು ಭಯಪಡುವ ವಸ್ತುಗಳಿಂದಲೇ ಅವರನ್ನು ಶಿಕ್ಷಿಸಲು ತೀರ್ಮಾನಿಸಿದೆನು. ಎಕೆಂದರೆ ನಾನು ಅವರನ್ನು ಕರೆದರೂ ಅವರು ಕಿವಿಗೊಡಲಿಲ್ಲ. ನಾನು ಅವರೊಂದಿಗೆ ಮಾತಾಡಿದರೂ ಅವರು ಕೇಳಲಿಲ್ಲ. ಆದ್ದರಿಂದ ನಾನು ಅವರಿಗೆ ಅದನ್ನೇ ಮಾಡುವೆನು. ನಾನು ಯಾವದನ್ನು ಕೆಟ್ಟದೆಂದು ಪರಿಗಣಿಸಿದ್ದೆನೋ ಅದನ್ನೇ ಅವರು ಮಾಡಿದರು. ನಾನು ಇಷ್ಟಪಡದ ಸಂಗತಿಗಳನ್ನು ಅವರು ಮಾಡಿದರು.”
ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”