ಆಗ ದೇಶದಲ್ಲಿ ನಿಮ್ಮ ಸಂಖ್ಯೆ ಬೆಳೆಯುವದು” ಇದು ಯೆಹೋವನ ನುಡಿ. “ಆ ಕಾಲದಲ್ಲಿ ಜನರು, ‘ನಮ್ಮಲ್ಲಿ ಯೆಹೋವನ ಒಡಂಬಡಿಕೆಯ ಪೆಟ್ಟಿಗೆ ಇದ್ದ ದಿನಗಳನ್ನು ಜ್ಞಾಪಿಸಿಕೊಳ್ಳುವ’ ಎಂದು ಹೇಳುವುದಿಲ್ಲ. ಅವರು, ‘ಪವಿತ್ರ ಪೆಟ್ಟಿಗೆ’ಯ ಬಗ್ಗೆ ಯೋಚನೆ ಸಹ ಮಾಡುವುದಿಲ್ಲ. ಅವರು ಅದನ್ನು ಜ್ಞಾಪಿಸುವುದೂ ಇಲ್ಲ. ಅದರ ಅಭಾವವನ್ನು ಮನಸ್ಸಿಗೆ ತಂದುಕೊಳ್ಳುವುದೂ ಇಲ್ಲ. ಅವರು ಇನ್ನೊಂದು ‘ಪವಿತ್ರ ಪೆಟ್ಟಿಗೆ’ಯನ್ನು ಸಿದ್ಧಪಡಿಸುವದಿಲ್ಲ.
ಅದು ಕೇವಲ ಬೆಂಕಿಯಲ್ಲಿ ಸುಡಲಿಕ್ಕೆ ಯೋಗ್ಯವಾಗಿದೆ. ಕೆಲವು ಎರಡು ಕೊನೆಯಲ್ಲಿ ಉರಿಯುವವು; ಮಧ್ಯಭಾಗವು ಬೆಂಕಿಯಿಂದ ಕಪ್ಪಾಗಾಗುವುದು. ಕಟ್ಟಿಗೆಯು ಸಂಪೂರ್ಣವಾಗಿ ಸುಟ್ಟುಹೋಗುವುದಿಲ್ಲ. ಆ ಸುಟ್ಟ ಕಟ್ಟಿಗೆಯಿಂದ ಏನನ್ನಾದರೂ ತಯಾರಿಸಬಹುದೋ?
ದ್ರಾಕ್ಷಿಬಳ್ಳಿಯು ಕಾಡಿನ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ, ಬೆಂಕಿಗೆ ಬೇಕಾದ ಇಂಧನಕ್ಕಾಗಿ ನಾನು ಅದರ ಕಟ್ಟಿಗೆಯನ್ನು ನೇಮಿಸಿದ್ದೇನೆ. ಇದೇ ಕೆಲಸವನ್ನು ಜೆರುಸಲೇಮಿನ ನಿವಾಸಿಗಳಿಗೂ ನಾನು ನೇಮಿಸಿದ್ದೇನೆ.” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದ್ದಾನೆ.