ಯೆಹೆಜ್ಕೇಲನು 15:6 - ಪರಿಶುದ್ದ ಬೈಬಲ್6 ದ್ರಾಕ್ಷಿಬಳ್ಳಿಯು ಕಾಡಿನ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ, ಬೆಂಕಿಗೆ ಬೇಕಾದ ಇಂಧನಕ್ಕಾಗಿ ನಾನು ಅದರ ಕಟ್ಟಿಗೆಯನ್ನು ನೇಮಿಸಿದ್ದೇನೆ. ಇದೇ ಕೆಲಸವನ್ನು ಜೆರುಸಲೇಮಿನ ನಿವಾಸಿಗಳಿಗೂ ನಾನು ನೇಮಿಸಿದ್ದೇನೆ.” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವನ ವೃಕ್ಷಗಳಲ್ಲಿ ದ್ರಾಕ್ಷಿಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯನ್ನಾಗಿ ಕೊಟ್ಟಿದ್ದೇನೋ, ಹಾಗೆಯೇ ನಾನು ಯೆರೂಸಲೇಮಿನವರನ್ನು ವಿನಾಶಕ್ಕೆ ಗುರಿಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇಂತಿರಲು ಸರ್ವೇಶ್ವರನಾದ ದೇವರು ಹೇಳುವುದಿದು: “ವನವೃಕ್ಷಗಳಲ್ಲಿ ದ್ರಾಕ್ಷಾವೃಕ್ಷವನ್ನೆ ಅಗ್ನಿಗೆ ನಾನು ಸೌದೆಯನ್ನಾಗಿಸಿರುವಂತೆ ಕೊಟ್ಟಿರುವೆನು ಜೆರುಸಲೇಮನ್ನು ವಿನಾಶಕ್ಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ವನವೃಕ್ಷಗಳಲ್ಲಿ ದ್ರಾಕ್ಷೆಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯಾಗಿ ಕೊಟ್ಟಿದ್ದೇನೋ ಹಾಗೆಯೇ ನಾನು ಯೆರೂಸಲೇವಿುನವರನ್ನು [ನಾಶನಕ್ಕೆ] ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ವನವೃಕ್ಷಗಳಲ್ಲಿ ದ್ರಾಕ್ಷಿಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಯಾಗಿ ಮಾಡಿರುವೆನೋ ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ವಿನಾಶಕ್ಕೆ ಗುರಿಮಾಡಿದ್ದೇನೆ. ಅಧ್ಯಾಯವನ್ನು ನೋಡಿ |
ನಾನು ಈ ದ್ರಾಕ್ಷಾರಸವನ್ನು ಜೆರುಸಲೇಮಿನ ಮತ್ತು ಯೆಹೂದದ ಜನರಿಗೆ ಸುರಿದೆನು. ನಾನು ರಾಜನನ್ನು ಮತ್ತು ಯೆಹೂದದ ನಾಯಕರನ್ನು ಈ ಪಾತ್ರೆಯಲ್ಲಿಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆನು. ಅವರು ಬರಿದಾದ ಮರುಭೂಮಿಯಂತಾಗಲೆಂದು ಹೀಗೆ ಮಾಡಿದೆನು. ಆ ಸ್ಥಳವು ತುಂಬಾ ಹಾಳಾಗಲಿ, ಜನರು ಅದರ ಬಗ್ಗೆ ಸಿಳ್ಳುಹಾಕಲಿ, ಶಾಪಹಾಕಲಿ ಎಂಬ ಉದ್ದೇಶದಿಂದ ನಾನು ಹಾಗೆ ಮಾಡಿದೆನು. ಹಾಗೆಯೇ ಆಯಿತು. ಯೆಹೂದವು ಈಗ ಹಾಗೆಯೇ ಇದೆ.
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’