Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:10 - ಪರಿಶುದ್ದ ಬೈಬಲ್‌

10 ನಿನಗೆ ಅಂದವಾದ ಉಡುಪನ್ನು ಕೊಟ್ಟು ಕಾಲಿಗೆ ನಯವಾದ ಚರ್ಮದ ಕೆರಗಳನ್ನು ಕೊಟ್ಟೆನು. ನಿನ್ನ ತಲೆಗೆ ನಾರುಮಡಿಯ ತಲೆಕಟ್ಟನ್ನು ಕೊಟ್ಟೆನು ಮತ್ತು ನಿನಗೆ ರೇಷ್ಮೆಯ ಬಟ್ಟೆಯನ್ನು ಹೊದಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲಪ್ರಾಣಿಯ ಕೆಂಪು ಚರ್ಮದ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರು ಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದಲ್ಲದೆ ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲು ಹಂದಿಯ ತೊಗಲಿನ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರುಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ ಕಡಲುಹಂದಿಯ ತೊಗಲಿನ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ ನಯವಾದ ನಾರುಮಡಿಯನ್ನು ನಿನಗೆ ಉಡಿಸಿ ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲುಹಂದಿಯ ತೊಗಲಿನ ಪಾದರಕ್ಷೆಗಳನ್ನು ಕೊಟ್ಟೆನು. ನಯವಾದ ನಾರುಮಡಿಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:10
24 ತಿಳಿವುಗಳ ಹೋಲಿಕೆ  

ನಂತರ ನೀನು ಅಂದವಾದ ಬಟ್ಟೆಯಿಂದ ಆ ವಿಗ್ರಹಗಳಿಗೆ ಹೊದಿಸಿದೆ. ನಾನು ನಿನಗೆ ಕೊಟ್ಟಿದ್ದ ಧೂಪ, ಪರಿಮಳದ್ರವ್ಯವನ್ನು ನೀನು ಆ ವಿಗ್ರಹಗಳ ಮುಂದೆ ಹಾಕಿದಿ.


ನಿನ್ನ ಚಿನ್ನ, ಬೆಳ್ಳಿ, ಆಭರಣ, ನಾರುಮಡಿ, ರೇಷ್ಮೆ ಮತ್ತು ಕಸೂತಿ ಹಾಕಿದ ಬಟ್ಟೆಗಳಲ್ಲಿ ನೀನು ಸುಂದರಳಾಗಿ ಕಾಣಿಸುತ್ತಿದ್ದೆ. ನೀನು ಉತ್ತಮವಾದ ಆಹಾರವನ್ನು ಊಟ ಮಾಡಿದೆ: ಉತ್ತಮ ಗೋಧಿಹಿಟ್ಟು, ಜೇನುತುಪ್ಪ ಮತ್ತು ಆಲೀವ್ ಎಣ್ಣೆ. ನೀನು ಅತ್ಯಂತ ಸುಂದರಿಯಾದೆ. ಮತ್ತು ನೀನು ರಾಣಿಯಾಗಿದ್ದೆ.


ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.


“ಬಳಿಕ ಪವಿತ್ರಗುಡಾರದ ಪ್ರವೇಶಸ್ಥಳವನ್ನು ಮುಚ್ಚುವುದಕ್ಕೆ ಒಂದು ಪರದೆಯನ್ನು ಮಾಡಿಸಬೇಕು. ಈ ಪರದೆಯನ್ನು ನೀಲಿ, ನೇರಳೆ, ಕೆಂಪು ದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಮಾಡಿಸಿ ಅದರಲ್ಲಿ ಚಿತ್ರಗಳನ್ನು ಕಸೂತಿ ಹಾಕಿಸಬೇಕು.


ನಯವಾದ ನಾರುಮಡಿಯನ್ನು ವಧುವಿಗೆ ಧರಿಸಲು ನೀಡಲಾಗಿತ್ತು. ಆ ನಾರುಮಡಿಯು ಪ್ರಕಾಶಮಾನವಾಗಿತ್ತು ಹಾಗೂ ಶುಭ್ರವಾಗಿತ್ತು.” (ನಯವಾದ ನಾರುಮಡಿಯೆಂದರೆ ದೇವರ ಪರಿಶುದ್ಧ ಜನರು ಮಾಡಿದ ಒಳ್ಳೆಯ ಕಾರ್ಯಗಳು ಎಂದರ್ಥ.)


“ಆದರೆ ತಂದೆಯು ತನ್ನ ಸೇವಕರಿಗೆ, ‘ತ್ವರೆಮಾಡಿರಿ! ಉತ್ತಮವಾದ ಉಡುಪುಗಳನ್ನು ತಂದು ಇವನಿಗೆ ತೊಡಿಸಿರಿ. ಇವನ ಬೆರಳಿಗೆ ಉಂಗುರವನ್ನು ಹಾಕಿರಿ. ಪಾದಗಳಿಗೆ ಒಳ್ಳೆಯ ಪಾದರಕ್ಷೆಗಳನ್ನು ತೊಡಿಸಿರಿ.


ನಿನ್ನಲ್ಲಿ ಅನೇಕ ಬೆಲೆಬಾಳುವ ವಸ್ತುಗಳಿದ್ದುದರಿಂದ ಅರಾಮ್ ನಿನ್ನೊಂದಿಗೆ ವ್ಯಾಪಾರ ಮಾಡಿತು. ಅವರು ಇಂದ್ರನೀಲ, ಧೂಮ್ರ ಬಣ್ಣದ ಬಟ್ಟೆ, ಕಸೂತಿ ಕೆಲಸ, ನಯವಾದ ಬಟ್ಟೆ, ಹವಳ, ಕೆಂಪು ಹರಳು ಇತ್ಯಾದಿಗಳನ್ನು ಕೊಟ್ಟು ವಸ್ತುಗಳನ್ನು ನಿನ್ನಿಂದ ಕೊಂಡುಕೊಂಡರು.


ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”


ಚಿನ್ನದ ದಾರಗಳು, ನಾರುಬಟ್ಟೆ, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಲು ಅವರಿಗೆ ಹೇಳು.


ಹೊರಗಿನ ಗುಡಾರಕ್ಕೆ ಸರಿಹೊಂದುವ ಎರಡು ಹೊದಿಕೆಗಳನ್ನು ಮಾಡಿಸಬೇಕು. ಒಂದು ಹೊದಿಕೆಯನ್ನು ಕೆಂಪುಬಣ್ಣದ ಕುರಿದೊಗಲಿನ ಚರ್ಮದಿಂದ ಮಾಡಬೇಕು. ಇನ್ನೊಂದು ಹೊದಿಕೆಯನ್ನು ಉತ್ತಮ ತೊಗಲಿನಿಂದ ಮಾಡಿಸಬೇಕು.


ರಾಜಮುದ್ರೆಯನ್ನು ಹೊಂದಿದ್ದ ತನ್ನ ಉಂಗುರವನ್ನು ಕೊಟ್ಟನು; ಧರಿಸಿಕೊಳ್ಳಲು ಒಳ್ಳೆಯ ನಾರುಬಟ್ಟೆಯ ನಿಲುವಂಗಿಯನ್ನು ಕೊಟ್ಟನು; ಕೊರಳಿಗೆ ಚಿನ್ನದ ಸರವನ್ನು ಹಾಕಿದನು.


ಪರಿಶುದ್ಧ ನಗರವು ಪರಲೋಕದಿಂದ ದೇವರ ಬಳಿಯಿಂದ ಇಳಿದು ಬರುತ್ತಿರುವುದನ್ನು ನಾನು ನೋಡಿದೆನು. ಈ ಪರಿಶುದ್ಧ ನಗರವೇ ನೂತನ ಜೆರುಸಲೇಮ್. ವಧುವು ತನ್ನ ಪತಿಗಾಗಿ ಶೃಂಗರಿಸಿಕೊಳ್ಳುವಂತೆ ಅದನ್ನು ಸಿದ್ಧಪಡಿಸಿದ್ದರು.


ಅವರು ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರ ವರ್ಣದ ವಸ್ತ್ರ, ರೇಷ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ದಂತದಿಂದ ಮಾಡಿದ ನಾನಾ ಬಗೆಯ ವಸ್ತುಗಳು, ಬಹು ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ ಇವುಗಳನ್ನು ಮಾರುತ್ತಾರೆ.


ಈಜಿಪ್ಟಿನಲ್ಲಿ ತಯಾರಿಸಿದ ಬಣ್ಣದ ನಾರುಮಡಿಯನ್ನು ನಿನ್ನ ಹಾಯಿಗಳಿಗಾಗಿ ಉಪಯೋಗಿಸಿದರು. ಆ ಹಾಯಿಯು ನಿನ್ನ ಧ್ವಜವಾಯಿತು. ನಿನ್ನ ಮೇಲ್ಮಾಳಿಗೆಯ ಹೊದಿಕೆಯು ನೀಲ ಮತ್ತು ಧೂಮ್ರ ವರ್ಣದವುಗಳಾಗಿದ್ದವು. ಅವು ಸೈಪ್ರಸ್ ದ್ವೀಪದಿಂದ ಬಂದವುಗಳಾಗಿದ್ದವು.


ಆಗ ಸಮುದ್ರ ತೀರದ ದೇಶಗಳ ನಾಯಕರೆಲ್ಲಾ ತಮ್ಮ ಸಿಂಹಾಸನದಿಂದ ಕೆಳಗಿಳಿದು ತಮ್ಮ ಶೋಕವನ್ನು ವ್ಯಕ್ತಪಡಿಸುವರು. ಅವರು ತಮ್ಮ ಸುಂದರವಾದ ರಾಜವಸ್ತ್ರಗಳನ್ನು ತೆಗೆದಿಟ್ಟು ಭಯದ ಬಟ್ಟೆಗಳನ್ನು ಧರಿಸಿಕೊಂಡು ನೆಲದ ಮೇಲೆ ಭಯದಿಂದ ಕುಳಿತುಕೊಳ್ಳುವರು. ನೀನು ಎಷ್ಟು ಬೇಗನೇ ನಾಶವಾದೆ ಎಂದು ಕೇಳಿ ದಂಗುಬಡಿದಂತಾಗುವರು.


ನಾನು, ಹೊಲದಲ್ಲಿ ಸಸಿಯು ಹೇಗೆ ಬೆಳೆಯುತ್ತದೋ ಹಾಗೆಯೇ ನೀನು ಬೆಳೆಯಲು ಸಹಾಯ ಮಾಡಿದೆನು. ನೀನು ಬೆಳೆಯುತ್ತಾ ಯೌವನದ ಹೊಸ್ತಿಲಲ್ಲಿ ಕಾಲಿಟ್ಟ ಹೆಂಗಸಿನಂತಾದೆ. ನಿನಗೆ ಮುಟ್ಟು ಪ್ರಾರಂಭವಾಯಿತು. ನಿನ್ನ ಸ್ತನಗಳು ಬೆಳೆದವು. ಕೂದಲುಗಳು ಬೆಳೆದವು. ಆದರೂ ನೀನು ಬಟ್ಟೆಯಿಲ್ಲದವಳಾಗಿ ಬೆತ್ತಲೆಯಾಗಿದ್ದೆ.


ಆಕೆ ಹೊದಿಕೆಗಳನ್ನು ತಯಾರಿಸುವಳು. ಆಕೆಯು ಶ್ರೇಷ್ಠವಾದ ನಾರಗಸೆಯ ದಾರದಿಂದ ಮಾಡಿದ ಬಟ್ಟೆಗಳನ್ನು ಧರಿಸಿಕೊಳ್ಳುವಳು.


ಕೆಂಪುಬಣ್ಣದ ಕುರಿದೊಗಲು, ಉತ್ತಮ ತೊಗಲುಗಳು, ಜಾಲೀಮರ,


ಅವರು ಸಂತೋಷದಿಂದಲೂ ಉಲ್ಲಾಸದಿಂದಲೂ ರಾಜನ ಅರಮನೆಯೊಳಕ್ಕೆ ಪ್ರವೇಶಿಸುವರು.


ಕೈಗನ್ನಡಿಗಳನ್ನು, ಪೋಷಾಕುಗಳನ್ನು, ಮುಂಡಾಸಗಳನ್ನು ಮತ್ತು ಉದ್ದವಾದ ಶಾಲುಗಳನ್ನು ಅವರಿಂದ ತೆಗೆದುಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು