ಯೆಹೆಜ್ಕೇಲನು 16:11 - ಪರಿಶುದ್ದ ಬೈಬಲ್11 ಅನಂತರ ನಿನಗೆ ಕೆಲವು ಆಭರಣಗಳನ್ನು ಕೊಟ್ಟೆನು. ನಿನ್ನ ತೋಳುಗಳಿಗೆ ತೋಳುಕಟ್ಟುಗಳನ್ನು, ಕುತ್ತಿಗೆಗೆ ಹಾರವನ್ನು ತೊಡಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು, ಕಂಠಕ್ಕೆ ಮಾಲೆಯನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು, ಕಂಠಕ್ಕೆ ಮಾಲೆಯನ್ನು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಭರಣಗಳಿಂದ ನಿನ್ನನ್ನು ಅಲಂಕರಿಸಿದೆನು: ನಾನು ನಿನ್ನ ಕೈಗಳಿಗೆ ಕಡಗಗಳನ್ನು ನಿನ್ನ ಕೊರಳಿಗೆ ಸರವನ್ನು ಹಾಕಿದೆನು. ಅಧ್ಯಾಯವನ್ನು ನೋಡಿ |
ನಾನು ನಿನ್ನ ಬಗ್ಗೆ ಕೇಳಿದ್ದೇನೆ. ನೀನು ಗೂಢಾರ್ಥವನ್ನು ತಿಳಿದುಕೊಳ್ಳಬಲ್ಲೆ ಮತ್ತು ಕಠಿಣವಾದ ಸಮಸ್ಯೆಗಳಿಗೆ ಪರಿಹಾರ ಹೇಳಬಲ್ಲೆ ಎಂದು ನಾನು ಕೇಳಿದ್ದೇನೆ. ನೀನು ಗೋಡೆಯ ಮೇಲಿನ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ವಿವರಿಸಿದರೆ, ನಾನು ನಿನಗೆ ಕಂದುಬಣ್ಣದ ಬಟ್ಟೆಗಳನ್ನು ಕೊಡುತ್ತೇನೆ. ನಿನ್ನ ಕತ್ತಿಗೆ ಚಿನ್ನದ ಹಾರವನ್ನು ಹಾಕುತ್ತೇನೆ; ನಿನ್ನನ್ನು ನನ್ನ ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುತ್ತೇನೆ” ಎಂದು ಹೇಳಿದನು.
ಆಗ ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.
ಇಸ್ರೇಲರು ಸೋಲಿಸಿದ ಜನರಲ್ಲಿ ಕೆಲವರು ಇಷ್ಮಾಯೇಲ್ಯರಾಗಿದ್ದರು. ಇಷ್ಮಾಯೇಲ್ಯರು ಕಿವಿಗಳಲ್ಲಿ ಚಿನ್ನದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು. ಆದ್ದರಿಂದ ಗಿದ್ಯೋನನು ಇಸ್ರೇಲರಿಗೆ, “ನೀವು ನನಗಾಗಿ ಈ ಒಂದು ಕೆಲಸವನ್ನು ಮಾಡಬೇಕೆಂದು ನನ್ನ ಕೋರಿಕೆ. ನೀವು ಯುದ್ಧದಲ್ಲಿ ಕೊಳ್ಳೆಹೊಡೆದ ವಸ್ತುಗಳಿಂದ ಪ್ರತಿಯೊಬ್ಬನು ಒಂದು ಬಂಗಾರದ ಮುರುವನ್ನು ನನಗೆ ಕೊಡಬೇಕು” ಎಂದು ಕೇಳಿದನು.