ಯೆಹೆಜ್ಕೇಲನು 16:13 - ಪರಿಶುದ್ದ ಬೈಬಲ್13 ನಿನ್ನ ಚಿನ್ನ, ಬೆಳ್ಳಿ, ಆಭರಣ, ನಾರುಮಡಿ, ರೇಷ್ಮೆ ಮತ್ತು ಕಸೂತಿ ಹಾಕಿದ ಬಟ್ಟೆಗಳಲ್ಲಿ ನೀನು ಸುಂದರಳಾಗಿ ಕಾಣಿಸುತ್ತಿದ್ದೆ. ನೀನು ಉತ್ತಮವಾದ ಆಹಾರವನ್ನು ಊಟ ಮಾಡಿದೆ: ಉತ್ತಮ ಗೋಧಿಹಿಟ್ಟು, ಜೇನುತುಪ್ಪ ಮತ್ತು ಆಲೀವ್ ಎಣ್ಣೆ. ನೀನು ಅತ್ಯಂತ ಸುಂದರಿಯಾದೆ. ಮತ್ತು ನೀನು ರಾಣಿಯಾಗಿದ್ದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು, ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ವಸ್ತ್ರ; ನಿನ್ನ ಆಹಾರವು ಗೋದಿಹಿಟ್ಟು, ಜೇನುತುಪ್ಪ ಮತ್ತು ಎಣ್ಣೆ; ನಿನ್ನ ಲಾವಣ್ಯವು ಅತಿ ಮನೋಹರ; ನೀನು ಹೀಗೆ ವೃದ್ಧಿಗೊಂಡು ರಾಣಿಯಾದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ, ನಿನ್ನ ಆಹಾರವು ನಯವಾದ ಹಿಟ್ಟು, ಜೇನು, ಎಣ್ಣೆ ತಿನ್ನುತ್ತಿದ್ದೆ. ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ. ಅಧ್ಯಾಯವನ್ನು ನೋಡಿ |
ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ: