Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:14 - ಪರಿಶುದ್ದ ಬೈಬಲ್‌

14 ಹೌದು, ನೀನು ನಿನ್ನ ಸಂಪೂರ್ಣವಾದ ಸೌಂದರ್ಯಕ್ಕಾಗಿ ಜನಾಂಗಗಳ ಮಧ್ಯದಲ್ಲಿ ಹೆಸರು ವಾಸಿಯಾಯಿತು. ಯಾಕೆಂದರೆ ನಾನು ನಿನ್ನನ್ನು ಅತ್ಯಂತ ಸೌಂದರ್ಯವತಿಯನ್ನಾಗಿ ಮಾಡಿದೆನು.’” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯವು ಪರಿಪೂರ್ಣವಾಯಿತು; ನಿನ್ನ ಚೆಲುವು ಹೆಸರುವಾಸಿಯಾಗಿ ಜನಾಂಗಗಳಲ್ಲಿ ಹಬ್ಬಿತು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾನು ನಿನಗೆ ಅನುಗ್ರಹಿಸಿದ ನಿನ್ನ ವೈಭವದಿಂದ ನಿನ್ನ ಸೌಂದರ್ಯ ಪರಿಪೂರ್ಣವಾಯಿತು; ನಿನ್ನ ಚೆಲುವು ಜನಾಂಗಗಳಲ್ಲಿ ಪ್ರಸಿದ್ಧವಾಯಿತು; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯವು ಪರಿಪೂರ್ಣವಾಯಿತು; ನಿನ್ನ ಚೆಲುವಿಕೆಯ ಹೆಸರುವಾಸಿಯು ಜನಾಂಗಗಳಲ್ಲಿ ಹಬ್ಬಿತು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯ ಪರಿಪೂರ್ಣವಾಯಿತು; ನಿನ್ನ ಚೆಲುವು ಜನಾಂಗಗಳಲ್ಲಿ ಪ್ರಸಿದ್ಧವಾಯಿತು, ಇದು ಸಾರ್ವಭೌಮ ಯೆಹೋವ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:14
13 ತಿಳಿವುಗಳ ಹೋಲಿಕೆ  

ಪಕ್ಕದಲ್ಲಿ ದಾರಿ ಹಿಡಿದುಹೋಗುವ ಜನರು ನಿನ್ನನ್ನು ನೋಡಿ ಅಪಹಾಸ್ಯದಿಂದ ಚಪ್ಪಾಳೆ ತಟ್ಟುತ್ತಾರೆ. ಜೆರುಸಲೇಮಿನ ಮಗಳ ಸ್ಥಿತಿಯನ್ನು ನೋಡಿ ಅವರು ಸಿಳ್ಳುಹಾಕುತ್ತಾರೆ ಮತ್ತು ತಲೆಯಾಡಿಸುತ್ತಾರೆ. “ಜನರಿಂದ ‘ಪರಿಪೂರ್ಣ ಸುಂದರ ನಗರ’ ‘ಸಮಸ್ತಲೋಕದ ಸಂತೋಷ’ ಎಂದು ಕರೆಸಿಕೊಂಡದ್ದು ಇದೇ ನಗರವೇ?” ಎಂದು ಅವರು ಕೇಳುತ್ತಾರೆ.


ಭೂಲೋಕದವರೆಲ್ಲರೂ ರಾಜನಾದ ಸೊಲೊಮೋನನನ್ನು ನೋಡುವುದಕ್ಕೂ ದೇವರು ಸೊಲೊಮೋನನಿಗೆ ದಯಪಾಲಿಸಿರುವ ಜ್ಞಾನವಾಕ್ಯಗಳನ್ನು ಕೇಳುವುದಕ್ಕೂ ಅಪೇಕ್ಷಿಸುತ್ತಿದ್ದರು.


ನಿಮ್ಮನ್ನು ಇತರ ಜನರಿಗಿಂತಲೂ ಉತ್ತಮರೆಂದು ಯಾರು ಹೇಳುತ್ತಾರೆ? ನಿಮ್ಮಲ್ಲಿರುವ ಪ್ರತಿಯೊಂದನ್ನೂ ದೇವರೇ ನಿಮಗೆ ಕೊಟ್ಟಿದ್ದಾನೆ. ಹೀಗಿರುವಾಗ, ನಿಮ್ಮ ಸ್ವಂತ ಶಕ್ತಿಯಿಂದ ಅವುಗಳನ್ನು ಪಡೆದುಕೊಂಡವರಂತೆ ಏಕೆ ಜಂಬಕೊಚ್ಚಿಕೊಳ್ಳುವಿರಿ?


ದೇವರು ಅವನಿಗೆ ದಯಪಾಲಿಸಿದ ಜ್ಞಾನವನ್ನು ನೋಡಿ ಅವನಿಂದ ಜ್ಞಾನವಾಕ್ಯಗಳನ್ನು ಕೇಳಲು ಲೋಕದ ರಾಜರುಗಳು ಅವನ ಬಳಿಗೆ ಬರುತ್ತಿದ್ದರು.


ಸೌಂದರ್ಯದಿಂದ ಕಂಗೊಳಿಸುತ್ತಿರುವ ಚೀಯೋನಿನಲ್ಲಿ ದೇವರು ಪ್ರಕಾಶಿಸುತ್ತಾನೆ.


ಆಮೇಲೆ ನನ್ನ ಒಡೆಯನಾದ ಯೆಹೋವನು ಹೀಗೆಂದನು: “ಆ ಇಟ್ಟಿಗೆಯು ಜೆರುಸಲೇಮಿನ ಚಿತ್ರ. ನಾನು ಜೆರುಸಲೇಮನ್ನು ಇತರ ಜನಾಂಗಗಳ ಮಧ್ಯದಲ್ಲಿ ನೆಲೆಗೊಳಿಸಿದ್ದೇನೆ. ಆಕೆಯ ಸುತ್ತಲೂ ಬೇರೆ ದೇಶಗಳಿವೆ.


ನಿನಗೆ ಮೂಗುತಿ, ಕಿವಿಗೆ ಕಿವಿಯುಂಗುರಗಳನ್ನು ಮತ್ತು ಒಂದು ಅಂದವಾದ ಕಿರೀಟವನ್ನು ಧರಿಸಲು ಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು