Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:19 - ಪರಿಶುದ್ದ ಬೈಬಲ್‌

19 ನಾನು ನಿನಗೆ ರೊಟ್ಟಿ, ಜೇನು ಮತ್ತು ಎಣ್ಣೆಯನ್ನು ಕೊಟ್ಟಿದ್ದೆನು. ಆದರೆ ನೀನು ಆ ಆಹಾರವನ್ನು ಮೂರ್ತಿಗಳಿಗೆ ಕೊಟ್ಟೆ. ಆ ಸುಳ್ಳು ದೇವರುಗಳನ್ನು ಮೆಚ್ಚಿಸುವದಕ್ಕೋಸ್ಕರ ನೀನು ಅವುಗಳನ್ನು ಸುಗಂಧವಾಸನೆಯ ಕಾಣಿಕೆಯಂತೆ ಅರ್ಪಿಸಿದೆ.” ನನ್ನ ಒಡೆಯನಾದ ಯೆಹೋವನು ಈ ಸಂಗತಿಗಳನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ, ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು ಇವುಗಳನ್ನೂ ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ಹೀಗಾಯಿತಲ್ಲ!” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು, ಇವುಗಳನ್ನೂ, ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ನಿನಗೆ ಕೇಡು! ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು ಇವುಗಳನ್ನೂ ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದಿ; ಅಯ್ಯೋ, ಹೀಗಾಯಿತಲ್ಲ! ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ನಿಮಗೆ ಒದಗಿಸಿದ ಆಹಾರ, ಹಿಟ್ಟು, ಎಣ್ಣೆ ಮತ್ತು ಜೇನುತುಪ್ಪವನ್ನು ನಾನು ನಿಮಗೆ ತಿನ್ನಲು ಕೊಟ್ಟಿದ್ದೇನೆ. ನೀವು ಅವರ ಮುಂದೆ ಪರಿಮಳಯುಕ್ತ ಧೂಪವನ್ನು ಅರ್ಪಿಸಿದ್ದೀರಿ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:19
7 ತಿಳಿವುಗಳ ಹೋಲಿಕೆ  

ನಿನ್ನ ಚಿನ್ನ, ಬೆಳ್ಳಿ, ಆಭರಣ, ನಾರುಮಡಿ, ರೇಷ್ಮೆ ಮತ್ತು ಕಸೂತಿ ಹಾಕಿದ ಬಟ್ಟೆಗಳಲ್ಲಿ ನೀನು ಸುಂದರಳಾಗಿ ಕಾಣಿಸುತ್ತಿದ್ದೆ. ನೀನು ಉತ್ತಮವಾದ ಆಹಾರವನ್ನು ಊಟ ಮಾಡಿದೆ: ಉತ್ತಮ ಗೋಧಿಹಿಟ್ಟು, ಜೇನುತುಪ್ಪ ಮತ್ತು ಆಲೀವ್ ಎಣ್ಣೆ. ನೀನು ಅತ್ಯಂತ ಸುಂದರಿಯಾದೆ. ಮತ್ತು ನೀನು ರಾಣಿಯಾಗಿದ್ದೆ.


ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ.


ನಂತರ ನೀನು ಅಂದವಾದ ಬಟ್ಟೆಯಿಂದ ಆ ವಿಗ್ರಹಗಳಿಗೆ ಹೊದಿಸಿದೆ. ನಾನು ನಿನಗೆ ಕೊಟ್ಟಿದ್ದ ಧೂಪ, ಪರಿಮಳದ್ರವ್ಯವನ್ನು ನೀನು ಆ ವಿಗ್ರಹಗಳ ಮುಂದೆ ಹಾಕಿದಿ.


ನಮ್ಮ ಪೂರ್ವಿಕರು ಸಂಪಾದಿಸಿದ್ದೆಲ್ಲವನ್ನು ನೈವೇದ್ಯದಲ್ಲಿ ಸುಳ್ಳುದೇವರಾದ ಬಾಳನು ತಿಂದುಬಿಟ್ಟನು. ನಮ್ಮ ಬಾಲ್ಯದಿಂದಲೂ ಹೀಗಾಗುತಾ ಬಂದಿದೆ. ಭಯಂಕರವಾದ ಆ ಸುಳ್ಳು ದೇವರು ನಮ್ಮ ಪೂರ್ವಿಕರ ದನಕುರಿಗಳನ್ನೂ ಅವರ ಗಂಡುಹೆಣ್ಣುಮಕ್ಕಳನ್ನೂ ಬಲಿ ತೆಗೆದುಕೊಳ್ಳುತ್ತಿರುವನು.


“ಆ ಜನರು ತಮ್ಮ ಬೆಳ್ಳಿಬಂಗಾರಗಳ ಆಭರಣಗಳನ್ನು ಅಲಂಕಾರದ ವಸ್ತುಗಳನ್ನಾಗಿ ಪರಿವರ್ತಿಸಿದರು. ಅವುಗಳಿಂದ ತಮ್ಮ ಕೊಳಕಾದ ಮತ್ತು ಅಸಹ್ಯಕರವಾದ ವಿಗ್ರಹಗಳನ್ನು ಮಾಡಿಕೊಂಡರು. ಆದ್ದರಿಂದ ಅವರ ಬೆಳ್ಳಿಬಂಗಾರಗಳನ್ನು ಅವರಿಗೆ ಕೊಳೆಯ ಬಟ್ಟೆಯನ್ನಾಗಿ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು