Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:2 - ಪರಿಶುದ್ದ ಬೈಬಲ್‌

2 “ನರಪುತ್ರನೇ, ಜೆರುಸಲೇಮ್ ಪಟ್ಟಣಕ್ಕೆ ಅದರ ಅಸಹ್ಯವಾದ ಆಚರಣೆಗಳ ಬಗ್ಗೆ ಹೇಳು. ದುಷ್ಟತ್ವದ ಕುರಿತು ಅವರಿಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ನೀನು ಯೆರೂಸಲೇಮಿಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ನೀನು ಜೆರುಸಲೇಮಿಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ನೀನು ಯೆರೂಸಲೇವಿುಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನರಪುತ್ರನೇ, ಯೆರೂಸಲೇಮಿಗೆ ಅದರ ಅಸಹ್ಯವಾದವುಗಳನ್ನು ತಿಳಿದುಕೊಳ್ಳುವ ಹಾಗೆ ಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:2
9 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ಹಂತಕರ ನಗರಕ್ಕೆ ನ್ಯಾಯತೀರಿಸುವೆಯಾ? ಆಕೆಯ ಭಯಂಕರ ದುಷ್ಟತನದ ಬಗ್ಗೆ ಆಕೆಗೆ ತಿಳಿಸು.


ನರಪುತ್ರನೇ, ನೀನು ಅವರ ನ್ಯಾಯತೀರಿಸುವಿಯಾ? ಅವರ ಪೂರ್ವಿಕರು ಮಾಡಿದ ಭಯಂಕರ ಸಂಗತಿಗಳನ್ನು ನೀನು ಅವರಿಗೆ ಹೇಳಬೇಕು.


ಎಷ್ಟು ಗಟ್ಟಿಯಾಗಿ ಆರ್ಭಟಿಸಬಹುದೋ ಅಷ್ಟು ಆರ್ಭಟಿಸಿರಿ, ನಿಲ್ಲಿಸಬೇಡಿರಿ. ತುತ್ತೂರಿಯಂತೆ ಗಟ್ಟಿಯಾಗಿ ಕಿರುಚಿರಿ. ಜನರು ಮಾಡಿದ ಪಾಪಗಳನ್ನು ಅವರಿಗೆ ತಿಳಿಸಿರಿ. ಯಾಕೋಬನ ವಂಶದವರಿಗೆ ಅವರ ಪಾಪಗಳನ್ನು ತಿಳಿಸಿರಿ.


“ಯೆಹೋವನಾಲಯದ ಕಾವಲುಗಾರನಂತೆ ತುತ್ತೂರಿಯನ್ನು ನಿನ್ನ ತುಟಿಗಳಲ್ಲಿಟ್ಟು ಊದು. ಇಸ್ರೇಲರು ನನ್ನ ಕಟ್ಟಳೆಗಳಿಗೆ ಅವಿಧೇಯರಾಗಿ ನನ್ನ ಒಡಂಬಡಿಕೆಯನ್ನು ಮುರಿದಿದ್ದಾರೆ.


ನನ್ನ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನೀನು ಒಹೊಲ ಮತ್ತು ಒಹೊಲೀಬಳನ್ನು ನ್ಯಾಯವಿಚಾರಣೆ ಮಾಡುವಿಯೋ? ಆಗ ನೀನು, ಗಾಬರಿಗೊಳಿಸುವ ಅವರ ದುಷ್ಟತನವನ್ನು ಅವರಿಗೆ ತಿಳಿಸು.


ಮತ್ತೆ ಯೆಹೋವನ ವಾಕ್ಯವು ನನಗೆ ಬಂತು. ಆತನು ಹೇಳಿದ್ದೇನೆಂದರೆ,


ನೀನು ಏನು ಹೇಳಬೇಕೆಂದರೆ, ‘ಜೆರುಸಲೇಮಿಗೆ ನನ್ನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನಿನ್ನ ಇತಿಹಾಸವನ್ನು ನೋಡು. ನೀನು ಕಾನಾನ್‌ನಲ್ಲಿ ಜನಿಸಿರುತ್ತೀ. ನಿನ್ನ ತಂದೆಯು ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು