ಯೆಹೆಜ್ಕೇಲನು 16:22 - ಪರಿಶುದ್ದ ಬೈಬಲ್22 ನಿನ್ನ ಅಸಹ್ಯಕೃತ್ಯಗಳನ್ನೂ ಸೂಳೆಯಂತೆ ವರ್ತಿಸುತ್ತಿರುವುದನ್ನೂ ನಿನ್ನ ಎಳೆತನದ ಸಮಯವನ್ನೂ ಮತ್ತು ನಿನ್ನ ಸ್ವಂತ ರಕ್ತದಲ್ಲಿ ಬೆತ್ತಲೆಯಾಗಿ ಹೊರಳಾಡುತ್ತಿದ್ದುದನ್ನೂ ನೀನು ಮರೆತುಬಿಟ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಈ ನಿನ್ನ ಅಸಹ್ಯಕಾರ್ಯಗಳನ್ನೂ, ವ್ಯಭಿಚಾರವನ್ನು ನೀನು ಪದೇ ಪದೇ ನಡೆಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಈ ನಿನ್ನ ಅಸಹ್ಯಕಾರ್ಯಗಳನ್ನೂ ಸೂಳೆತನವನ್ನೂ ನೀನು ಪದೇ ಪದೇ ನಡಿಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಈ ನಿನ್ನ ಅಸಹ್ಯಕಾರ್ಯಗಳನ್ನೂ ಸೂಳೆತನವನ್ನೂ ನೀನು ಪದೇಪದೇ ನಡಿಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಎಲ್ಲಾ ಅಸಹ್ಯ ಕಾರ್ಯಗಳನ್ನೂ, ವ್ಯಭಿಚಾರಗಳನ್ನೂ ಮಾಡುತ್ತಿದ್ದಾಗ, ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ, ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದುದನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |
ಇವೆಲ್ಲಾ ಯಾಕೆ ಸಂಭವಿಸಬೇಕು? ಯಾಕೆಂದರೆ ನೀನು ಎಳೆಯವಳಾಗಿದ್ದಾಗ ಏನು ಸಂಭವಿಸಿತೆಂದು ಮರೆತುಬಿಟ್ಟಿರುವೆ. ನೀನು ಕೆಟ್ಟಕೆಲಸಗಳನ್ನು ಮಾಡಿ ನಾನು ಕೋಪಿಸಿಕೊಳ್ಳುವಂತೆ ಮಾಡಿರುವೆ. ಆದ್ದರಿಂದ ಆ ಕೆಟ್ಟಕಾರ್ಯ ಮಾಡಿದ್ದಕ್ಕಾಗಿ ನಿನ್ನನ್ನು ಶಿಕ್ಷಿಸಬೇಕಾಗಿ ಬಂತು. ನೀನು ಅದಕ್ಕಿಂತಲೂ ಭಯಂಕರಕೃತ್ಯ ನಡಿಸಲು ಯೋಜನೆ ಹಾಕಿಕೊಂಡಿರುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.