ಯೆಹೆಜ್ಕೇಲನು 16:23 - ಪರಿಶುದ್ದ ಬೈಬಲ್23 “ಓ ಜೆರುಸಲೇಮೇ, ಎಂಥಾ ಭಯಂಕರ, ನಿನಗೆಂಥಾ ಭಯಂಕರವಾಗಿರುವುದು ಸಂಭವಿಸುತ್ತದೆ!” ಎನ್ನುತ್ತಾನೆ ನನ್ನ ಒಡೆಯನಾದ ಯೆಹೋವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ!” ಎಂಬುದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅಯ್ಯೋ, ನಿನಗೆ ಧಿಕ್ಕಾರ! ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅಯ್ಯಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ ಎಂಬದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ ‘ನಿನಗೆ ಕಷ್ಟ! ಕಷ್ಟ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅವನ ಎಲ್ಲಾ ದುಷ್ಟತನದ ಹೊರತಾಗಿ, ಅಧ್ಯಾಯವನ್ನು ನೋಡಿ |
ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.
“‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಕೊಲೆಗಾರರ ಪಟ್ಟಣವಾದ ಜೆರುಸಲೇಮಿಗೆ ಆಪತ್ತು ಬರುವುದು. ಕೊಲೆಗಾರರ ನಗರಕ್ಕೆ ಕೇಡಾಗುವದು. ಜೆರುಸಲೇಮು ಕಿಲುಬು ಹಿಡಿದ ಹಂಡೆಯಂತಿದೆ. ಆ ಕಿಲುಬಿನ ಕಲೆಯನ್ನು ತೆಗೆಯಲಾಗುವುದೇ ಇಲ್ಲ. ಆ ಹಂಡೆಯು ಅಶುದ್ಧವಾಗಿರುವುದರಿಂದ ಅದರೊಳಗಿರುವ ಮಾಂಸವನ್ನೆಲ್ಲಾ ಹೊರಗೆ ತೆಗೆದುಬಿಡು. ಆ ಮಾಂಸವನ್ನು ನೀನಾಗಲಿ ಯಾಜಕರಾಗಲಿ ತಿನ್ನಕೂಡದು.
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ಪ್ರವಾದಿನಿಯರೇ, ನಿಮಗೆ ಕೇಡಾಗುವುದು. ಜನರು ತಮ್ಮ ತೋಳುಗಳಲ್ಲಿ ಕಟ್ಟಿಕೊಳ್ಳುವದಕ್ಕಾಗಿ ನೀವು ತಾಯಿತಿಗಳನ್ನು ಹೊಲಿದಿರಿ. ಜನರು ತಮ್ಮ ತಲೆಯ ಮೇಲೆ ಹಾಕಿಕೊಳ್ಳಲು ಮಂತ್ರದ ವಿವಿಧ ಅಳತೆಯ ಮುಸುಕುಗಳನ್ನು ನೀವು ತಯಾರಿಸುತ್ತೀರಿ. ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವದಕ್ಕೂ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕೂ ನೀವು ಇದನ್ನು ಮಾಡುತ್ತೀರಿ.
ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”