ಯೆಹೆಜ್ಕೇಲನು 16:26 - ಪರಿಶುದ್ದ ಬೈಬಲ್26 ಬಳಿಕ ನಿನ್ನ ನೆರೆಯವರೂ ಅತೀ ಕಾಮುಕರೂ ಆಗಿದ್ದ ಈಜಿಪ್ಟಿನವರ ಬಳಿಗೆ ನೀನು ಹೋದೆ. ನನ್ನನ್ನು ಕೋಪಗೊಳಿಸುವುದಕ್ಕಾಗಿ ನೀನು ಅವರೊಂದಿಗೆ ಹಲವಾರು ಸಲ ಲೈಂಗಿಕ ಸಂಪರ್ಕ ಮಾಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಿನ್ನ ನೆರೆಯವರೂ ಅತಿಕಾಮಿಗಳೂ ಆದ ಐಗುಪ್ತ್ಯರೊಂದಿಗೆ ಸಹ ನೀನು ಬೆರೆತು ಹೆಚ್ಚಾಗಿ ವ್ಯಭಿಚಾರಮಾಡಿ ನನ್ನನ್ನು ರೇಗಿಸಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಿನ್ನ ನೆರೆಯವರೂ ಅತಿಕಾಮಿಗಳೂ ಆದ ಈಜಿಪ್ಟರೊಂದಿಗೆ ಸಹ ನೀನು ಕಲೆತು ಹೆಚ್ಚಾಗಿ ಹಾದರಮಾಡಿ ನನ್ನನ್ನು ಕೆರಳಿಸಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನಿನ್ನ ನೆರೆಯವರೂ ಅತಿಕಾವಿುಗಳೂ ಆದ ಐಗುಪ್ತ್ಯರೊಂದಿಗೆ ಸಹ ನೀನು ಕಲೆತು ಹೆಚ್ಚಾಗಿ ಹಾದರಮಾಡಿ ನನ್ನನ್ನು ರೇಗಿಸಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇದಲ್ಲದೆ ಅತಿಕಾಮಿಗಳಾದ ನಿನ್ನ ನೆರೆಯವರಾದ ಈಜಿಪ್ಟಿನವರ ಸಂಗಡ ವ್ಯಭಿಚಾರ ಮಾಡಿದೆ; ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದೆ; ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.