ಯೆಹೆಜ್ಕೇಲನು 16:27 - ಪರಿಶುದ್ದ ಬೈಬಲ್27 ಆಗ ನಾನು ನಿನ್ನನ್ನು ಶಿಕ್ಷಿಸಿದೆನು. ನಾನು ನಿನಗೆ ಕೊಟ್ಟ ದೇಶದಿಂದ ಸ್ವಲ್ಪ ಭಾಗವನ್ನು ಕಿತ್ತುಕೊಂಡೆನು. ನಿನ್ನ ಶತ್ರುಗಳಾದ ಫಿಲಿಷ್ಟಿಯರ ಹೆಣ್ಣುಮಕ್ಕಳು ನಿನ್ನೊಂದಿಗೆ ತಮಗೆ ಇಷ್ಟ ಬಂದಂತೆ ವರ್ತಿಸಲುಬಿಟ್ಟೆನು. ನಿನ್ನ ಕೆಟ್ಟಕಾರ್ಯಗಳನ್ನು ನೋಡಿ ಅವರೂ ಅಚ್ಚರಿಗೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆನು; ನಿನ್ನನ್ನು ದ್ವೇಷಿಸಿ ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯದ ಕುಮಾರ್ತೆಯರ ಕೈಗೆ ನಿನ್ನನ್ನು ಸಿಕ್ಕಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 “ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆ; ನಿನ್ನನ್ನು ದ್ವೇಷಿಸಿ, ನಿನ್ನ ಕೆಟ್ಟನಡತೆಗೆ ಅಸಹ್ಯಪಡುವ ಪಿಲಿಷ್ಟಿಯ ಕುವರಿಯರ ಕೈಗೆ ನಿನ್ನನ್ನು ಒಪ್ಪಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆನು; ನಿನ್ನನ್ನು ದ್ವೇಷಿಸಿ ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯದ ಕುಮಾರ್ತೆಯರ ಕೈಗೆ ನಿನ್ನನ್ನು ಸಿಕ್ಕಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದ್ದರಿಂದ ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಭೂಪ್ರದೇಶವನ್ನು ಕಡಿಮೆ ಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು, ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಪುತ್ರಿಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ. ಅಧ್ಯಾಯವನ್ನು ನೋಡಿ |