ಯೆಹೆಜ್ಕೇಲನು 16:28 - ಪರಿಶುದ್ದ ಬೈಬಲ್28 ಆ ಬಳಿಕ ನೀನು ಅಶ್ಶೂರದವರೊಂದಿಗೆ ಸಂಭೋಗಿಸಲು ಹೋದಿ. ನೀನು ತೃಪ್ತಿಗೊಳ್ಳುವಷ್ಟು ಆನಂದ ಸಿಗಲಿಲ್ಲ. ನೀನೆಂದೂ ತೃಪ್ತಿಗೊಂಡವಳಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಮತ್ತು ಇಷ್ಟೂ ಸಾಲದೆಂದು ಅಶ್ಶೂರ್ಯರೊಂದಿಗೂ ವ್ಯಭಿಚಾರಮಾಡಿದಿ; ಹೌದು, ಅವರೊಡನೆ ವ್ಯಭಿಚಾರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ಇಷ್ಟೂ ಸಾಲದೆಂದು ನೀನು ಅಸ್ಸೀರಿಯರೊಂದಿಗೂ ಹಾದರಮಾಡಿದೆ; ಹೌದು, ಅವರೊಡನೆ ಹಾದರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಮತ್ತು ಇಷ್ಟೂ ಸಾಲದೆಂದು ಅಶ್ಯೂರ್ಯರೊಂದಿಗೂ ಹಾದರಮಾಡಿದಿ; ಹೌದು, ಅವರೊಡನೆ ಹಾದರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಇದಲ್ಲದೆ ಅಸ್ಸೀರಿಯರೊಂದಿಗೂ ವ್ಯಭಿಚಾರ ಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀಯೆ; ಆದರೂ ತೃಪ್ತಿಯಾಗಲಿಲ್ಲ. ಅಧ್ಯಾಯವನ್ನು ನೋಡಿ |
ದಮಸ್ಕದ ಜನರು ಆರಾಧಿಸುವ ಆ ದೇವರುಗಳಿಗೆ ಆಹಾಜನು ಯಜ್ಞಗಳನ್ನರ್ಪಿಸಿದನು. ದಮಸ್ಕದ ಜನರು ಆಹಾಜನನ್ನು ಸೋಲಿಸಿದ್ದರು. ಆಗ ಆಹಾಜನು, “ಅರಾಮ್ಯರು ಪೂಜಿಸುವ ದೇವರು ಅವರಿಗೆ ಸಹಾಯ ಮಾಡಿದನು. ಆದ್ದರಿಂದ ನಾನು ಆ ದೇವರಿಗೆ ಯಜ್ಞವನ್ನರ್ಪಿಸಿ ಆರಾಧಿಸಿದರೆ ಆ ದೇವರು ನನಗೂ ಸಹಾಯ ಮಾಡುವನು” ಎಂದುಕೊಂಡನು. ಆಹಾಜನು ಆ ದೇವರುಗಳನ್ನು ಪೂಜಿಸುವುದರ ಮೂಲಕ ತಾನೂ ಪಾಪಮಾಡಿ ತನ್ನ ಪ್ರಜೆಗಳನ್ನೂ ಪಾಪಮಾಡುವದಕ್ಕೆ ಪ್ರೋತ್ಸಾಹಿಸಿದನು.
ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.