ಯೆಹೆಜ್ಕೇಲನು 16:29 - ಪರಿಶುದ್ದ ಬೈಬಲ್29 ಆದ್ದರಿಂದ ನೀನು ವ್ಯಾಪಾರದ ದೇಶವಾದ ಬಾಬಿಲೋನಿನ ಕಡೆಗೆ ಮುಖ ಮಾಡಿಕೊಂಡೆ. ಆದರೂ ನೀನು ತೃಪ್ತಿ ಪಡೆಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಇದಲ್ಲದೆ ನೀನು ತುಂಬಾ ವ್ಯಾಪಾರವುಳ್ಳ ಕಸ್ದೀಯ ದೇಶಕ್ಕೆ ಸೇರಿ, ಅಲ್ಲಿಯೂ ಬಹಳ ವ್ಯಭಿಚಾರಮಾಡಿದೆ, ಆದರೂ ನಿನಗೆ ತೃಪ್ತಿಯಾಗಲಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಇದಲ್ಲದೆ ನೀನು ವ್ಯಾಪಾರಸ್ಥರಾದ ಬಾಬಿಲೋನಿಯದವರೊಡನೆ ಸೇರಿ ಅಲ್ಲಿಯೂ ಬಹಳ ಸೂಳೆತನಮಾಡಿದೆ; ಆಗಲೂ ನಿನಗೆ ತೃಪ್ತಿಯಾಗಲಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಇದಲ್ಲದೆ ನೀನು ತುಂಬಾ ವ್ಯಾಪಾರವುಳ್ಳ ಕಸ್ದೀಯ ದೇಶಕ್ಕೆ ಸೇರಿ ಅಲ್ಲಿಯೂ ಬಹಳ ಸೂಳೆತನ ಮಾಡಿದಿ, ಆದರೂ ನಿನಗೆ ತೃಪ್ತಿಯಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ವ್ಯಾಪಾರಸ್ಥರಾದ ಬಾಬಿಲೋನಿಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.