ಯೆಹೆಜ್ಕೇಲನು 16:35 - ಪರಿಶುದ್ದ ಬೈಬಲ್35 ಸೂಳೆಯೇ, ಯೆಹೋವನ ಸಂದೇಶವನ್ನು ಕೇಳು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಹೀಗಿರಲು ವ್ಯಭಿಚಾರಿಯೇ, ಯೆಹೋವನ ಈ ವಾಕ್ಯವನ್ನು ಕೇಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಹೀಗಿರಲು ಎಲೌ ಜಾರಿಣಿಯೇ, ಸರ್ವೇಶ್ವರನ ಈ ವಾಕ್ಯವನ್ನು ಕೇಳು: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಹೀಗಿರಲು, ಸೂಳೆಯೇ, ಯೆಹೋವನ ಈ ವಾಕ್ಯವನ್ನು ಕೇಳು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 “ ‘ಆದಕಾರಣ ವ್ಯಭಿಚಾರಿಣಿಯೇ, ನೀನು ಯೆಹೋವ ದೇವರ ವಾಕ್ಯವನ್ನು ಕೇಳು. ಅಧ್ಯಾಯವನ್ನು ನೋಡಿ |
ನೆಗೆವ್ ಅಡವಿಗೆ ಹೀಗೆ ಹೇಳು: ‘ಯೆಹೋವನ ಮಾತುಗಳನ್ನು ಆಲೈಸು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನ ಅಡವಿಯಲ್ಲಿ ಬೆಂಕಿಯನ್ನು ಹಾಕುತ್ತೇನೆ. ಆ ಬೆಂಕಿಯು ಪ್ರತಿಯೊಂದು ಹಸಿರು ಮರವನ್ನೂ ಪ್ರತಿಯೊಂದು ಒಣಗಿದ ಮರವನ್ನೂ ಸುಟ್ಟುಬಿಡುವುದು. ಆ ಬೆಂಕಿಯನ್ನು ನಂದಿಸಲಾಗುವದಿಲ್ಲ. ದಕ್ಷಿಣದಿಂದ ಉತ್ತರದ ತನಕವಿರುವ ಪ್ರತಿಯೊಂದು ಮುಖವು ಅದರ ತಾಪವನ್ನು ಅನುಭವಿಸುವುದು.
ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.
ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.