Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:36 - ಪರಿಶುದ್ದ ಬೈಬಲ್‌

36 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಿನ್ನ ಅತಿಯಾದ ಶರೀರದಾಶೆಯಿಂದಾಗಿ, ನಿನ್ನ ಬೆತ್ತಲೆಯ ದೇಹವನ್ನು ನೋಡಿ ನಿನ್ನೊಂದಿಗೆ ಲೈಂಗಿಕ ಸಂಬಂಧವನ್ನು ಹೊಂದಲು ನೀನು ನಿನ್ನ ಪ್ರಿಯತಮರಿಗೂ, ನಿನ್ನ ಹೊಲಸು ದೇವರುಗಳಿಗೂ ಅವಕಾಶ ಮಾಡಿಕೊಟ್ಟೆ. ನೀನು ನಿನ್ನ ಮಕ್ಕಳನ್ನು ಕೊಂದು ಅವರ ರಕ್ತವನ್ನು ಸುರಿಸಿರುವೆ. ಇದು ಆ ಹೊಲಸು ದೇವರುಗಳಿಗೆ ನೀನು ಕೊಟ್ಟ ದಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಮಿತಿಮೀರಿದ ನಿನ್ನ ಕಾಮಾತುರ, ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ಪ್ರಿಯರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲಾ ಅಸಹ್ಯ ವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 “ಆಹಾ, ಮಿತಿಮೀರಿದ ನಿನ್ನ ಕಾಮಾತುರ! ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ಮಿಂಡರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲ ಅಸಹ್ಯವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ವಿುತಿಮೀರಿದ ನಿನ್ನ ಕಾಮಾತುರ, ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ವಿುಂಡರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲಾ ಅಸಹ್ಯ ವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನಿನ್ನ ಮೋಹವನ್ನು ಸುರಿಸಿದ ಕಾರಣದಿಂದಲೂ, ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ, ನಿನ್ನ ಅಸಹ್ಯ ವಿಗ್ರಹಗಳಿಂದಲೂ, ನೀನು ಆಹುತಿ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:36
22 ತಿಳಿವುಗಳ ಹೋಲಿಕೆ  

ಅವರು ಬಲವಂತದಿಂದ ಆಕೆಯನ್ನು ಸಂಭೋಗಿಸಿದರು. ಆಕೆಯ ಮಕ್ಕಳನ್ನು ತೆಗೆದುಕೊಂಡರು. ಖಡ್ಗವನ್ನು ತೆಗೆದುಕೊಂಡು ಆಕೆಯನ್ನು ಕೊಂದುಹಾಕಿದರು. ಆಕೆಯನ್ನು ಶಿಕ್ಷಿಸಿದರು. ಸ್ತ್ರೀಯರು ಈಗಲೂ ಆಕೆಯ ವಿಷಯ ಮಾತನಾಡುತ್ತಿದ್ದಾರೆ.


ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.


ಜೆರುಸಲೇಮೇ, ನಿನ್ನ ಜನರು ದೇವರಿಗೆ ವಿರುದ್ಧವಾಗಿ ನಡೆದರು. ಇತರರನ್ನು ಹಿಂಸಿಸಿದರು ಮತ್ತು ಪಾಪದಿಂದ ಮಲಿನರಾದರು.


ಆಗ ನಾನು ಶುದ್ಧ ನೀರನ್ನು ನಿಮ್ಮ ಮೇಲೆ ಚಿಮುಕಿಸಿ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವೆನು. ಆ ವಿಗ್ರಹಗಳ ಹೊಲಸನ್ನು ನಿಮ್ಮಿಂದ ನಾನು ತೊಳೆದುಹಾಕಿ ನಿಮ್ಮನ್ನು ಶುದ್ಧರನ್ನಾಗಿ ಮಾಡುವೆನು.”


“‘ನಿನ್ನ ವಿರುದ್ಧ ನನಗಿರುವ ಕೋಪ ತೃಪ್ತಿಗೊಳ್ಳುವ ತನಕ ನೀನು ಮತ್ತೆಂದಿಗೂ ಶುದ್ಧಳಾಗುವುದಿಲ್ಲ. ನಿನ್ನನ್ನು ತೊಳೆದು ಕಲೆಗಳನ್ನು ತೆಗೆಯಲು ನನಗೆ ಮನಸ್ಸಿತ್ತು. ಆದರೆ ಕಲೆಗಳು ಹೋಗಲಿಲ್ಲ. ಆದ್ದರಿಂದ ನಿನ್ನ ಮೇಲಿನ ನನ್ನ ಕೋಪವು ತಣ್ಣಗಾಗುವ ತನಕ ನಾನು ನಿನ್ನನ್ನು ತೊಳೆಯುವುದೇ ಇಲ್ಲ.


ಆಗ ಅವರು ನಿನ್ನನ್ನು ಎಷ್ಟು ದ್ವೇಷಿಸುವರೆಂದು ನಿನಗೆ ತೋರಿಸುವರು. ನೀನು ದುಡಿದವುಗಳನ್ನೆಲ್ಲ ಅವರು ಕಿತ್ತುಕೊಳ್ಳುವರು. ನಿನ್ನನ್ನು ಬೆತ್ತಲೆಮಾಡಿ ಬಿಟ್ಟುಬಿಡುವರು. ಜನರು ನಿನ್ನ ಪಾಪಗಳನ್ನು ಪರಿಪೂರ್ಣವಾಗಿ ನೋಡುವರು. ನೀನು ಸೂಳೆಯಂತೆ ವರ್ತಿಸಿದ್ದನ್ನು ಅವರು ನೋಡುವರು. ನಿನ್ನ ನೀಚತನವೂ ನಿನ್ನ ಸೂಳೆತನವೂ


“ತಾನು ಅಪನಂಬಿಗಸ್ತಳೆಂದು ಎಲ್ಲರೂ ತನ್ನನ್ನು ಗುರುತಿಸುವಂತೆ ಒಹೊಲೀಬಳು ಮಾಡಿದಳು. ಆಕೆಯು ತನ್ನ ನಗ್ನ ಶರೀರವನ್ನು ತೋರಿಸಿದಳು. ಆದ್ದರಿಂದ ಅವಳ ಅಕ್ಕ ನನಗೆ ಹೇಗೆ ಅಸಹ್ಯವಾದಳೋ ಅದೇ ರೀತಿ ಈಕೆಯೂ ನನಗೆ ಅಸಹ್ಯವಾದಳು. ನನಗೆ ಆಕೆಯ ಅಕ್ಕನ ಮೇಲಿದ್ದ ಅನುರಾಗ ಹೇಗೆ ತೊಲಗಿಹೋಯಿತೋ ಹಾಗೆಯೇ ಈಕೆಯ ಮೇಲಿನ ಅನುರಾಗವೂ ತೊಲಗಿಹೋಯಿತು.


ಇದರ ಜೊತೆಯಲ್ಲಿಯೇ ಈಜಿಪ್ಟಿನೊಂದಿಗೆ ತನ್ನ ಪ್ರಣಯ ಸಂಬಂಧವನ್ನು ಮುಂದುವರಿಸುತ್ತಿದ್ದಳು. ಆಕೆಯು ಇನ್ನೂ ಎಳೆಯ ಹುಡುಗಿಯಾಗಿದ್ದಾಗಲೇ ಈಜಿಪ್ಟ್ ಆಕೆಯೊಂದಿಗೆ ಸಂಭೋಗ ಮಾಡಿತ್ತು. ಅವಳ ಎಳೆ ಸ್ತನಗಳನ್ನು ಹಿಸುಕಿದವರಲ್ಲಿ ಮೊದಲನೆಯವರು ಈಜಿಪ್ಟಿನವರೇ. ಈಜಿಪ್ಟ್ ತನ್ನ ಅನೈತಿಕ ಪ್ರೀತಿಯನ್ನು ಆಕೆಯ ಮೇಲೆ ಸುರಿಯಿತು.


ನಾನು ನಿಮ್ಮನ್ನು ಜನಾಂಗಗಳ ಮಧ್ಯೆ ಚದರಿಸಿಬಿಡುವೆನು. ನಿಮ್ಮನ್ನು ಬಹುದೇಶಗಳ ಮಧ್ಯೆ ಅಟ್ಟಿಬಿಡುವೆನು. ಈ ನಗರದಲ್ಲಿರುವ ಅಸಹ್ಯ ವಸ್ತುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡುವೆನು.


ಜೆರುಸಲೇಮಿನ ಲಂಗಗಳು ಮಲಿನವಾಗಿದ್ದವು. ಅವಳಿಗೆ ಮುಂದೆ ಏನಾಗುವದೆಂಬುದರ ಬಗ್ಗೆ ಅವಳು ಯೋಚಿಸಲಿಲ್ಲ. ಅವಳ ಪತನ ವಿಸ್ಮಯಕಾರಿಯಾಗಿತ್ತು. ಅವಳನ್ನು ಸಂತೈಸಲು ಯಾರೂ ಇರಲಿಲ್ಲ. “ಅಯ್ಯೋ, ಯೆಹೋವನೇ, ನನಗೆಷ್ಟು ನೋವಾಗಿದೆ. ನೋಡು! ನನ್ನ ಶತ್ರು ತನ್ನನ್ನು ಎಷ್ಟು ದೊಡ್ಡವನೆಂದು ಭಾವಿಸಿಕೊಂಡಿದ್ದಾನೆ.” ಎಂದು ಆಕೆ ಹೇಳುತ್ತಾಳೆ.


ಯೆಹೂದದ ರಾಜರು ಬಾಳ್ ದೇವರಿಗಾಗಿ ಉನ್ನತವಾದ ಸ್ಥಳಗಳನ್ನು ಕಟ್ಟಿಸಿದರು. ಅವರು ಆ ಸ್ಥಳಗಳಲ್ಲಿ ತಮ್ಮ ಗಂಡುಮಕ್ಕಳನ್ನು ಹೋಮಮಾಡಿದರು. ಅವರು ಬಾಳ್ ದೇವರಿಗೆ ತಮ್ಮ ಗಂಡುಮಕ್ಕಳನ್ನು ಆಹುತಿಕೊಟ್ಟರು. ನಾನು ಹಾಗೆ ಮಾಡಲು ಅವರಿಗೆ ಹೇಳಿರಲಿಲ್ಲ. ನಿಮ್ಮ ಗಂಡುಮಕ್ಕಳನ್ನು ಆಹುತಿಯಾಗಿ ಕೊಡಿ ಎಂದು ನಿಮಗೆ ಹೇಳಲಿಲ್ಲ. ಅಂಥ ವಿಚಾರ ನನ್ನ ಮನಸ್ಸಿನಲ್ಲಿ ಬರಲೇ ಇಲ್ಲ.


ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಬಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ.


ಕೂಡಲೇ ಪುರುಷನಲ್ಲಿಯೂ ಸ್ತ್ರೀಯಲ್ಲಿಯೂ ಬದಲಾವಣೆಗಳಾದವು. ಅವರ ಕಣ್ಣುಗಳು ತೆರೆದವು. ಅವರಿಗೆ ಎಲ್ಲವೂ ವಿಚಿತ್ರವಾಗಿ ಕಂಡವು. ತಾವು ಬೆತ್ತಲೆಯಿಂದಿರುವುದನ್ನು ಕಂಡು ಅಂಜೂರದ ಎಲೆಗಳನ್ನು ಕಿತ್ತು ಒಂದಕ್ಕೊಂದು ಜೋಡಿಸಿ ಸುತ್ತಿಕೊಂಡರು.


ಸೂಳೆಯೇ, ಯೆಹೋವನ ಸಂದೇಶವನ್ನು ಕೇಳು:


ಈಗಿನಂತೆ, ನಿನ್ನ ದುಷ್ಟತನವು ಹೊರಬರುವುದಕ್ಕಿಂತ ಮೊದಲು ನೀನು ಅದನ್ನು ಮಾಡಿದೆ. ಈಗ ಎದೋಮಿನ ಹೆಣ್ಣುಮಕ್ಕಳು (ಪಟ್ಟಣಗಳು) ಮತ್ತು ಆಕೆಯ ನೆರೆಯವರು ನಿನ್ನನ್ನು ಗೇಲಿ ಮಾಡುವರು. ಫಿಲಿಷ್ಟಿಯರ ಹೆಣ್ಣುಮಕ್ಕಳು ಸಹ ನಿನ್ನನ್ನು ಗೇಲಿ ಮಾಡುವರು. ನಿನ್ನ ಸುತ್ತಲೂ ಇರುವವರು ನಿನ್ನನ್ನು ಕಡೆಗಾಣಿಸುವರು.


ನೀವು ಅವುಗಳಿಗೆ ಅದೇ ರೀತಿಯ ಕಾಣಿಕೆಗಳನ್ನರ್ಪಿಸುತ್ತೀರಿ. ಆ ಸುಳ್ಳು ದೇವರುಗಳಿಗೆ ನೀವು ನಿಮ್ಮ ಮಕ್ಕಳನ್ನು ಬೆಂಕಿಯ ಮೂಲಕ ಆಹುತಿ ಮಾಡುತ್ತೀರಿ. ಈ ಹೊತ್ತಿನ ದಿನದ ತನಕವೂ ಆ ಹೊಲಸು ವಿಗ್ರಹಗಳ ಮೂಲಕ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳುತ್ತಿದ್ದೀರಿ. ನೀವು ನನ್ನ ಬಳಿಗೆ ಬಂದು ನನ್ನ ಸಲಹೆಗಳನ್ನು ಕೇಳಲು ನಿಮ್ಮನ್ನು ನಾನು ಸ್ವಾಗತಿಸಬೇಕೋ? ನಾನು ಒಡೆಯನಾದ ಯೆಹೋವನು. ನನ್ನ ಜೀವದಾಣೆ, ನಾನು ನಿಮಗೆ ಉತ್ತರಿಸುವುದಿಲ್ಲ; ನಿಮಗೆ ಸಲಹೆಗಳನ್ನೂ ಕೊಡುವದಿಲ್ಲ.


ಅವರು ವ್ಯಭಿಚಾರ ಮಾಡಿದ್ದಾರೆ. ಅವರು ಕೊಲೆ ಮಾಡಿರುತ್ತಾರೆ. ಅವರು ಸೂಳೆಯಂತೆ ವರ್ತಿಸಿದ್ದಾರೆ. ಅವರು ತಮ್ಮ ಹೊಲಸು ವಿಗ್ರಹಗಳೊಂದಿಗೆ ಇರಲು ನನ್ನನ್ನು ತೊರೆದುಬಿಟ್ಟಿದ್ದಾರೆ. ಅವರಲ್ಲಿ ನನ್ನ ಮಕ್ಕಳು ಇದ್ದಾರೆ. ಆದರೆ ಅವರನ್ನು ಬಲವಂತದಿಂದ ಬೆಂಕಿಯ ಮೇಲೆ ದಾಟಿಸಿದರು. ತಮ್ಮ ಹೊಲಸು ವಿಗ್ರಹಗಳಿಗೆ ಆಹಾರ ಕೊಡುವಂತೆ ಅವರು ಹಾಗೆ ಮಾಡಿದರು.


ಆ ದೇಶದಲ್ಲಿ ಜನರನ್ನು ಕೊಲೆಮಾಡಿ ಅವರ ರಕ್ತವನ್ನು ನೆಲದ ಮೇಲೆ ಸುರಿದರು. ತಮ್ಮ ವಿಗ್ರಹಗಳಿಂದ ದೇಶವನ್ನು ಹೊಲಸು ಮಾಡಿದರು. ಆದ್ದರಿಂದ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂಬುದನ್ನು ನಾನು ತೋರಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು