Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:4 - ಪರಿಶುದ್ದ ಬೈಬಲ್‌

4 ಜೆರುಸಲೇಮೇ, ನೀನು ಹುಟ್ಟಿದ ಆ ದಿವಸದಲ್ಲಿ ನಿನ್ನ ಹೊಕ್ಕಳ ನಾಳವನ್ನು ಕೊಯ್ಯಲು ಯಾರೂ ಇದ್ದಿಲ್ಲ. ನಿನ್ನ ಮೈಯನ್ನು ನೀರು ಹಾಕಿ ಯಾರೂ ತೊಳೆದು ಶುದ್ಧಮಾಡಿಲ್ಲ. ನಿನ್ನನ್ನು ಯಾರೂ ಉಪ್ಪಿನಿಂದ ಉಜ್ಜಿಲ್ಲ. ಯಾರೂ ನಿನಗೆ ಬಟ್ಟೆ ಸುತ್ತಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ಜನನವನ್ನು ಕುರಿತು ಏನು ಹೇಳಲಿ! ನೀನು ಹುಟ್ಟಿದ ದಿನದಲ್ಲಿ ತಾಯಿಯು ನಿನ್ನ ಹೊಕ್ಕಳು ಕೊಯ್ದು ಕಟ್ಟಲಿಲ್ಲ, ನಿನ್ನನ್ನು ನೀರಿನಿಂದ ತೊಳೆದು ಶುಚಿಮಾಡಲಿಲ್ಲ, ನಿನಗೆ ಉಪ್ಪನ್ನು ಸ್ವಲ್ಪವೂ ಸವರಲಿಲ್ಲ, ನಿನ್ನನ್ನು ಬಟ್ಟೆಯಲ್ಲು ಸುತ್ತಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಜನನವನ್ನು ಕುರಿತು ಏನು ಹೇಳಲಿ! ನೀನು ಹುಟ್ಟಿದ ದಿನದಂದು ಯಾರೂ ನಿನ್ನ ಹೊಕ್ಕಳು ಕೊಯ್ದು ಕಟ್ಟಲಿಲ್ಲ. ನಿನ್ನನ್ನು ನೀರಿನಿಂದ ತೊಳೆದು ಶುಚಿಮಾಡಲಿಲ್ಲ, ನಿನಗೆ ಉಪ್ಪನ್ನು ಸ್ವಲ್ಪವು ಸವರಲಿಲ್ಲ, ನಿನ್ನನ್ನು ಬಟ್ಟೆಯಲ್ಲಿ ಸುತ್ತಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ಜನನವನ್ನು ಕುರಿತು ಏನು ಹೇಳಲಿ! ನೀನು ಹುಟ್ಟಿದ ದಿವಸದಲ್ಲಿ ಯಾರೂ ನಿನ್ನ ಹೊಕ್ಕಳು ಕೊಯ್ದುಕಟ್ಟಲಿಲ್ಲ, ನಿನ್ನನ್ನು ನೀರಿನಿಂದ ತೊಳೆದು ಶುಚಿಮಾಡಲಿಲ್ಲ, ನಿನಗೆ ಉಪ್ಪನ್ನು ಸ್ವಲ್ಪವೂ ಸವರಲಿಲ್ಲ, ನಿನ್ನನ್ನು ಬಟ್ಟೆಯಲ್ಲಿ ಎಷ್ಟು ಮಾತ್ರವೂ ಸುತ್ತಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿನ್ನ ಹುಟ್ಟಿದ ಸ್ಥಳದ ವಿಷಯವು: ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸಲಾಗಲಿಲ್ಲ; ಶುದ್ಧವಾಗುವ ಹಾಗೆ ನೀರಿನಲ್ಲಿ ತೊಳೆಯಲಾಗಲಿಲ್ಲ; ನಿನಗೆ ಉಪ್ಪನ್ನು ಸ್ವಲ್ಪವೂ ಸವರಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:4
18 ತಿಳಿವುಗಳ ಹೋಲಿಕೆ  

ಆಕೆ ವ್ಯಭಿಚಾರ ಮಾಡುವದನ್ನು ನಿಲ್ಲಿಸದೆ ಹೋದರೆ ನಾನು ಆಕೆಯನ್ನು ಬೆತ್ತಲೆ ಮಾಡಿ, ಆಕೆ ಜನ್ಮ ತಾಳಿದಾಗ ಹೇಗೆ ಇದ್ದಳೋ ಹಾಗೆ ಮಾಡುವೆನು. ಆಕೆಯ ಜನರನ್ನು ಆಕೆಯಿಂದ ತೊಲಗಿಸಿ ಆಕೆಯನ್ನು ಒಣ ಮರುಭೂಮಿಯಂತೆ ಬೆಂಗಾಡಾಗಿ ಮಾಡುವೆನು. ಆಕೆ ಬಾಯಾರಿ ಸಾಯುವಂತೆ ಮಾಡುವೆನು.


ಆಗ ಯೆಹೋಶುವನು ಅವರೆಲ್ಲರಿಗೆ, “ಇಸ್ರೇಲಿನ ದೇವರಾದ ಯೆಹೋವನು ನಿಮಗೆ ಹೇಳುವುದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ: ‘ಬಹಳ ಹಿಂದಿನ ಕಾಲದಲ್ಲಿ ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯ ದಡದಲ್ಲಿದ್ದರು, ನಾನು ಅಬ್ರಹಾಮ್ ಮತ್ತು ನಾಹೋರ್ ಎಂಬವರ ತಂದೆಯಾದ “ತೆರಹ” ಮೊದಲಾದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಆ ಸಮಯದಲ್ಲಿ ಅವರು ಬೇರೆ ದೇವರುಗಳನ್ನು ಪೂಜಿಸುತ್ತಿದ್ದರು.


ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದುದನ್ನು ನೆನಪುಮಾಡಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನು. ಆದ್ದರಿಂದಲೇ ನಾನು ಈ ಆಜ್ಞೆಯನ್ನು ನಿಮಗೆ ಕೊಡುತ್ತಿದ್ದೇನೆ.


ಆಗ ಯೆಹೋವನು ಅಬ್ರಾಮನಿಗೆ, “ನಿನಗೆ ಈ ವಿಷಯಗಳು ತಿಳಿದಿರಬೇಕು. ನಿನ್ನ ಸಂತತಿಯವರು ಪರದೇಶಿಯರಾಗಿ ತಮ್ಮದಲ್ಲದ ದೇಶದಲ್ಲಿ ವಾಸಮಾಡುವರು. ಅಲ್ಲಿನ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳುವರು. ಅಲ್ಲಿ ಅವರು ನಾನೂರು ವರ್ಷಗಳವರೆಗೆ ಬಾಧೆಪಡುವರು.


ಬಟ್ಟೆಯಲ್ಲಿ ಸುತ್ತಿರುವ ಒಂದು ಮಗು ದನದ ಕೊಟ್ಟಿಗೆಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ. ನೀವು ಆತನನ್ನು ಗೊತ್ತುಪಡಿಸಿಕೊಳ್ಳಲು ಅದೇ ಗುರುತಾಗಿದೆ” ಎಂದು ಹೇಳಿದನು.


ಆಕೆ ತನ್ನ ಚೊಚ್ಚಲಮಗುವನ್ನು (ಯೇಸು) ಹೆತ್ತಳು. ಅವರಿಗೆ ಇಳಿದುಕೊಳ್ಳಲು ಛತ್ರದಲ್ಲಿ ಸ್ಥಳ ದೊರೆಯಲಿಲ್ಲ. ಆದ್ದರಿಂದ ಮರಿಯಳು ಮಗುವನ್ನು ಬಟ್ಟೆಯಿಂದ ಸುತ್ತಿ ದನದ ಕೊಟ್ಟಿಗೆಯಲ್ಲಿ ಮೇವು ಹಾಕುತ್ತಿದ್ದ ತೊಟ್ಟಿಯಲ್ಲಿ ಮಲಗಿಸಿದಳು.


“ಯೆಹೋವನು ಹೇಳಿದ್ದೇನೆಂದರೆ: ‘ನಾನು ನಿಮ್ಮ ದೇವರಾದ ಯೆಹೋವನು. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ನಿಮ್ಮನ್ನು ಅಲ್ಲಿಂದ ಬಿಡುಗಡೆ ಮಾಡಿದೆನು. ಆದ್ದರಿಂದ ನೀವು ಈ ಆಜ್ಞೆಗಳಿಗೆ ವಿಧೇಯರಾಗಬೇಕು:


ಆದರೆ ಅವರು ನನ್ನ ವಿರುದ್ಧವಾಗಿ ಎದ್ದು ನನ್ನ ಮಾತುಗಳನ್ನು ಕೇಳದೆ ಹೋದರು. ತಮ್ಮ ವಿಗ್ರಹಗಳನ್ನು ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಆದ್ದರಿಂದ ನಾನು ಅವರನ್ನು (ಇಸ್ರೇಲರನ್ನು) ಈಜಿಪ್ಟಿನಲ್ಲಿಯೇ ನಾಶಮಾಡಿ ನನ್ನ ರೋಷಾಗ್ನಿಯನ್ನು ತೀರಿಸಿಕೊಳ್ಳಲು ಆಲೋಚಿಸಿದೆನು.


ಭೀತಿಯು ಸುತ್ತಮುತ್ತಲಿಂದ ನನ್ನ ಕಡೆಗೆ ಬರುವಂತೆ ನೀನು ಆಹ್ವಾನಿಸಿದೆ. ಯೆಹೋವನ ಕೋಪದ ದಿನದಂದು ಯಾರೂ ತಪ್ಪಿಸಿಕೊಳ್ಳಲಿಲ್ಲ. ಯಾರೂ ಉಳಿಯಲಿಲ್ಲ. ನಾನು ಸಾಕಿಸಲಹಿದವರನ್ನು ನನ್ನ ವೈರಿಯು ಸಂಹರಿಸಿದನು.


ನನ್ನ ಕಡೆಗೆ ನೋಡು. ನೀನು ಇಷ್ಟೆಲ್ಲ ಮಾಡಿದ್ದು ಯಾರಿಗೆ ಎಂಬುದನ್ನು ನೋಡು. ನಾನು ನಿನಗೆ ಈ ಪ್ರಶ್ನೆಗಳನ್ನು ಕೇಳಬಯಸುತ್ತೇನೆ. ಏನು, ಸ್ತ್ರೀಯರು ತಾವು ಹೆತ್ತ ಮಕ್ಕಳನ್ನೇ ತಿನ್ನಬೇಕೇ? ಸ್ತ್ರೀಯರು ತಾವು ಲಾಲನೆಪಾಲನೆ ಮಾಡಿದ ಮಕ್ಕಳನ್ನೇ ತಿನ್ನಬೇಕೇ? ಯೆಹೋವನ ಪವಿತ್ರ ಆಲಯದಲ್ಲಿಯೇ ಯಾಜಕನನ್ನು ಮತ್ತು ಪ್ರವಾದಿಯನ್ನು ಕೊಲ್ಲಬೇಕೇ?


“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.


ನೀನು ಏನು ಹೇಳಬೇಕೆಂದರೆ, ‘ಜೆರುಸಲೇಮಿಗೆ ನನ್ನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನಿನ್ನ ಇತಿಹಾಸವನ್ನು ನೋಡು. ನೀನು ಕಾನಾನ್‌ನಲ್ಲಿ ಜನಿಸಿರುತ್ತೀ. ನಿನ್ನ ತಂದೆಯು ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.


ಅವರ ತಾಯಿಯು ವೇಶ್ಯೆಯಂತೆ ವರ್ತಿಸಿದಳು. ತಾನು ನಡಿಸಿದ ಕೃತ್ಯಗಳಿಗಾಗಿ ಆಕೆ ನಾಚಿಕೆಪಡಬೇಕು. ಆಕೆಯು ಹೀಗೆಂದುಕೊಳ್ಳುತ್ತಿದ್ದಾಳೆ, ‘ನಾನು ನನ್ನ ಪ್ರಿಯತಮರ ಬಳಿಗೆ ಹೋಗುವೆನು. ಅವರು ನನಗೆ ಅನ್ನ ನೀರನ್ನು ಕೊಡುವರು. ನನಗೆ ಉಣ್ಣೆಯನ್ನೂ, ನಾರುಮಡಿಯನ್ನೂ ಕೊಡುವರು. ದ್ರಾಕ್ಷಾರಸ ಮತ್ತು ಆಲೀವ್ ಎಣ್ಣೆಯನ್ನೂ ಕೊಡುವರು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು