ಯೆಹೆಜ್ಕೇಲನು 16:41 - ಪರಿಶುದ್ದ ಬೈಬಲ್41 ಬಳಿಕ, ಅನೇಕ ಸ್ತ್ರೀಯರು ನೋಡಲೆಂದು ನಿನ್ನ ಮನೆಗಳನ್ನು ಸುಟ್ಟು, ನಿನ್ನನ್ನು ದಂಡಿಸುವರು. ನೀನು ಸೂಳೆಯಂತೆ ಜೀವಿಸುವದನ್ನು ನಾನು ನಿಲ್ಲಿಸುವೆನು. ನೀನು ನಿನ್ನ ಪ್ರಿಯತಮರಿಗೆ ಹಣ ಕೊಡುವದನ್ನು ನಿಲ್ಲಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಹಣಕೊಡದಿರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಬಹುಮಾನ ತರದಂತೆಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು [ನಿನ್ನ ವಿುಂಡರಿಗೆ] ಇನ್ನು ಹಣಕೊಡದಿರುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಅವರು ನಿನ್ನ ಮನೆಗಳನ್ನು ಸುಟ್ಟು, ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯತೀರಿಸುವರು. ನೀನು ವ್ಯಭಿಚಾರ ಮಾಡುವುದನ್ನು ನಾನು ನಿಲ್ಲಿಸುವೆನು. ನೀನು ನಿನ್ನ ಪ್ರಿಯರಿಗೆ ಕೂಲಿ ಸಹ ಕೊಡುವುದನ್ನು ನಿಲ್ಲಿಸುವೆನು. ಅಧ್ಯಾಯವನ್ನು ನೋಡಿ |
ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.