ಯೆಹೆಜ್ಕೇಲನು 16:43 - ಪರಿಶುದ್ದ ಬೈಬಲ್43 ಇವೆಲ್ಲಾ ಯಾಕೆ ಸಂಭವಿಸಬೇಕು? ಯಾಕೆಂದರೆ ನೀನು ಎಳೆಯವಳಾಗಿದ್ದಾಗ ಏನು ಸಂಭವಿಸಿತೆಂದು ಮರೆತುಬಿಟ್ಟಿರುವೆ. ನೀನು ಕೆಟ್ಟಕೆಲಸಗಳನ್ನು ಮಾಡಿ ನಾನು ಕೋಪಿಸಿಕೊಳ್ಳುವಂತೆ ಮಾಡಿರುವೆ. ಆದ್ದರಿಂದ ಆ ಕೆಟ್ಟಕಾರ್ಯ ಮಾಡಿದ್ದಕ್ಕಾಗಿ ನಿನ್ನನ್ನು ಶಿಕ್ಷಿಸಬೇಕಾಗಿ ಬಂತು. ನೀನು ಅದಕ್ಕಿಂತಲೂ ಭಯಂಕರಕೃತ್ಯ ನಡಿಸಲು ಯೋಜನೆ ಹಾಕಿಕೊಂಡಿರುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 “ನೀನು ನಿನ್ನ ಯೌವನ ಕಾಲವನ್ನು ಜ್ಞಾಪಕಮಾಡಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿರುವೆ” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ನೀನು ನಿನ್ನ ಯೌವನಕಾಲವನ್ನು ನೆನೆಸಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ, ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯಕಾರ್ಯವನ್ನೂ ಮಾಡಿರುವೆ. ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ನೀನು ನಿನ್ನ ಯೌವನಕಾಲವನ್ನು ಜ್ಞಾಪಕಮಾಡಿಕೊಳ್ಳದೆ ಈ ದುಷ್ಕೃತ್ಯಗಳನ್ನೆಲ್ಲಾ ನಡಿಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡಿಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿದ್ದೀಯಲ್ಲಾ. ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 “ ‘ನೀನು ನಿನ್ನ ಯೌವನದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ, ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿನ್ನ ಇತರ ಎಲ್ಲಾ ಅಸಹ್ಯವಾದವುಗಳ ಜೊತೆಗೆ, ಈ ಅಪವಿತ್ರತೆಯನ್ನು ನೀನು ಮಾಡಲಿಲ್ಲವೇ? ಅಧ್ಯಾಯವನ್ನು ನೋಡಿ |
ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.