Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:46 - ಪರಿಶುದ್ದ ಬೈಬಲ್‌

46 ನಿನ್ನ ಅಕ್ಕ ಸಮಾರ್ಯಳು. ಆಕೆಯು ನಿನ್ನ ಉತ್ತರ ದಿಕ್ಕಿನಲ್ಲಿ ತನ್ನ ಹೆಣ್ಣು ಮಕ್ಕಳೊಂದಿಗೆ (ಪಟ್ಟಣಗಳು) ವಾಸ ಮಾಡಿದ್ದಳು. ನಿನ್ನ ತಂಗಿಯು ಸೊದೋಮಳು. ಆಕೆ ನಿನ್ನ ದಕ್ಷಿಣದಲ್ಲಿ ತನ್ನ ಹೆಣ್ಣುಮಕ್ಕಳೊಂದಿಗೆ (ಪಟ್ಟಣಗಳು) ವಾಸಿಸಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ನಿನ್ನ ಉತ್ತರಕ್ಕೆ ತನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ನಿನ್ನ ದಕ್ಷಿಣಕ್ಕೆ ನಿನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 “ನಿನ್ನ ಉತ್ತರಕ್ಕೆ ತನ್ನ ಕುವರಿಯರೊಂದಿಗೆ ವಾಸಿಸುವ ಸಮಾರಿಯ, ನಿನ್ನ ಅಕ್ಕ; ನಿನ್ನ ದಕ್ಷಿಣ ಕಡೆಯಲ್ಲಿ ಕುವರಿಯರೊಂದಿಗೆ ವಾಸಿಸುವ ಸೊದೋಮ್, ನಿನ್ನ ತಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ನಿನ್ನೆಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ನಿನ್ನ ಉತ್ತರ ದಿಕ್ಕಿನಲ್ಲಿ ಪುತ್ರಿಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ. ದಕ್ಷಿಣ ದಿಕ್ಕಿನಲ್ಲಿ ಪುತ್ರಿಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:46
30 ತಿಳಿವುಗಳ ಹೋಲಿಕೆ  

ಹಿರಿಯ ಅಕ್ಕನ ಹೆಸರು ಒಹೊಲ. ತಂಗಿಯ ಹೆಸರು ಒಹೊಲೀಬ. ಅವರಿಬ್ಬರೂ ನನ್ನ ಹೆಂಡತಿಯರಾದರು. ಅವರು ಗಂಡುಮಕ್ಕಳನ್ನು ಮತ್ತು ಹೆಣ್ಣುಮಕ್ಕಳನ್ನು ಹೆತ್ತರು. ಒಹೊಲ ಎಂದರೆ ಸಮಾರ್ಯ; ಮತ್ತು ಒಹೊಲೀಬ ಎಂದರೆ ಜೆರುಸಲೇಮ್.


ನಿನ್ನ ಅಕ್ಕತಂಗಿಯಂದಿರನ್ನು ನಾನು ನಿನ್ನ ಬಳಿಗೆ ತಂದು ಅವರನ್ನು ನಿನ್ನ ಮಕ್ಕಳನ್ನಾಗಿ ಮಾಡುವೆನು. ಅದು ನಮ್ಮ ಒಡಂಬಡಿಕೆಯಲ್ಲಿಲ್ಲದಿದ್ದರೂ ನಾನು ಅದನ್ನು ನಿನಗಾಗಿ ಮಾಡುವೆನು. ಆಗ ನೀನು ಮಾಡಿದ ಭಯಂಕರ ಸಂಗತಿಗಳನ್ನು ಜ್ಞಾಪಕಕ್ಕೆ ತಂದು ನೀನು ನಾಚಿಕೊಳ್ಳುವಿ.


ದೇವರು ಹೇಳಿದ್ದೇನೆಂದರೆ: “ನೀನು ಮಾಡಿದ ದುಷ್ಕೃತ್ಯಗಳ ಅರ್ಧದಷ್ಟು ಸಮಾರ್ಯವು ಮಾಡಿತ್ತು. ಸಮಾರ್ಯದವರಿಗಿಂತಲೂ ಹೆಚ್ಚಾದ ಭಯಂಕರಕೃತ್ಯಗಳನ್ನು ನೀನು ಮಾಡಿರುವೆ. ನಿನ್ನ ಅಕ್ಕತಂಗಿಯರಿಗಿಂತ ಹೆಚ್ಚಾಗಿ ನೀನು ದುಷ್ಕೃತ್ಯಗಳನ್ನು ಮಾಡಿರುವೆ. ಸಮಾರ್ಯ ಮತ್ತು ಸೊದೋಮ್ ನಿನ್ನೊಂದಿಗೆ ಹೋಲಿಸಿ ನೋಡಿದರೆ ಅವು ಒಳ್ಳೆಯ ಪಟ್ಟಣಗಳಂತೆ ತೋರಿಬರುತ್ತವೆ.


ಈ ಸಾಕ್ಷಿಗಳ ಎರಡು ಶವಗಳು ಮಹಾನಗರದ ಬೀದಿಯಲ್ಲಿ ಬಿದ್ದಿರುತ್ತವೆ. ಈ ನಗರಕ್ಕೆ ಸೊದೋಮ್ ಮತ್ತು ಈಜಿಪ್ಟ್ ಎಂದು ಹೆಸರಾಗುತ್ತದೆ. ಆ ನಗರದ ಹೆಸರುಗಳಿಗೆ ವಿಶೇಷ ಅರ್ಥವಿದೆ. ಪ್ರಭುವು ಈ ನಗರದಲ್ಲಿಯೇ ಶಿಲುಬೆಗೇರಿಸಲ್ಪಟ್ಟನು.


ಸೊದೋಮ್ ಮತ್ತು ಗೊಮೋರ ನಗರಗಳನ್ನೂ ಅವುಗಳ ಸುತ್ತಲಿನ ಪಟ್ಟಣಗಳನ್ನೂ ನೆನಪು ಮಾಡಿಕೊಳ್ಳಿರಿ. ಅವುಗಳೂ ಆ ದೇವದೂತರಂತಾದವು. ಆ ಪಟ್ಟಣಗಳಲ್ಲಿ ಲೈಂಗಿಕ ಪಾಪಗಳು ಮತ್ತು ಕೆಟ್ಟಕಾರ್ಯಗಳು ತುಂಬಿಕೊಂಡಿದ್ದವು. ಅವರು ನಿತ್ಯವಾದ ಬೆಂಕಿಯ ದಂಡನೆಯಿಂದ ಸಂಕಟಪಡುವರು. ಅವರಿಗೆ ನೀಡಿದ ದಂಡನೆಯು ನಮಗೊಂದು ದೃಷ್ಟಾಂತವಾಗಿದೆ.


ದೇವರು ಸೊದೋಮ್, ಗೊಮೋರ ಎಂಬ ಕೆಟ್ಟ ಪಟ್ಟಣಗಳನ್ನು ದಂಡಿಸಿದನು. ಆತನು ಆ ಪಟ್ಟಣಗಳಲ್ಲಿ ಏನೂ ಉಳಿಯದಂತೆ, ಸುಟ್ಟು ಬೂದಿಮಾಡಿದನು. ತನಗೆ ವಿರುದ್ಧವಾಗಿರುವ ಜನರಿಗೆ ಏನಾಗುತ್ತದೆ ಎಂಬುದಕ್ಕೆ ಆತನು ಆ ಪಟ್ಟಣಗಳನ್ನು ನಿದರ್ಶನಗಳನ್ನಾಗಿ ಇಟ್ಟಿದ್ದಾನೆ.


ಇದಕ್ಕೆಲ್ಲಾ ಕಾರಣ ಯಾಕೋಬನ ಪಾಪಗಳೇ, ಇಸ್ರೇಲರ ದ್ರೋಹಗಳೇ! ಯಾಕೋಬು ಪಾಪಮಾಡಿದ್ದಕ್ಕೆ ಕಾರಣವೇನು? ಸಮಾರ್ಯವೇ ಕಾರಣ. ಯೆಹೂದದ ಎತ್ತರವಾದ ಸ್ಥಳ ಯಾವುದು? ಅದೇ ಜೆರುಸಲೇಮ್.


“ಎಫ್ರಾಯೀಮೇ, ನಿನ್ನನ್ನು ಬಿಟ್ಟುಬಿಡಲು ನನಗೆ ಇಷ್ಟವಿಲ್ಲ. ಇಸ್ರೇಲೇ, ನಿನ್ನನ್ನು ಸಂರಕ್ಷಿಸಲು ನನಗೆ ಇಷ್ಟ. ನಿನ್ನನ್ನು ಅದ್ಮದಂತೆ ಮಾಡಲು ನನಗೆ ಮನಸ್ಸಿಲ್ಲ. ನಿನ್ನನ್ನು ಜೆಬೊಯೀಮಿನಂತೆ ಮಾಡಲು ನನಗೆ ಮನಸ್ಸಿಲ್ಲ. ನಾನು ನನ್ನ ನಿರ್ಧಾರವನ್ನು ಬದಲಾಯಿಸುತ್ತಿದ್ದೇನೆ. ನಿನ್ನ ಮೇಲಿರುವ ನನ್ನ ಪ್ರೀತಿಯು ಆಳವಾಗಿದೆ.


ಆಕೆಯ ಹೆಣ್ಣುಮಕ್ಕಳು (ಚಿಕ್ಕ ಪಟ್ಟಣಗಳು) ಯುದ್ಧದಲ್ಲಿ ಕೊಲ್ಲಲ್ಪಡುವರು. ನಾನು ಯೆಹೋವನೆಂದು ಆಗ ತಿಳಿಯುವರು.”


“ಆಕೆಯ ತಂಗಿಯಾದ ಒಹೊಲೀಬಳು ಆಕೆಗಾದದ್ದನ್ನೆಲ್ಲಾ ನೋಡಿದ್ದಳು. ಆದರೆ ಒಹೊಲೀಬಳು ಅಕ್ಕನಿಗಿಂತ ಹೆಚ್ಚು ಪಾಪ ಮಾಡಿದಳು. ಆಕೆ ಒಹೊಲಳಿಗಿಂತ ಹೆಚ್ಚು ಅಪನಂಬಿಗಸ್ತಿಕೆಯುಳ್ಳವಳಾಗಿದ್ದಳು.


ಆಗ ನಾನು ನಿನ್ನನ್ನು ಶಿಕ್ಷಿಸಿದೆನು. ನಾನು ನಿನಗೆ ಕೊಟ್ಟ ದೇಶದಿಂದ ಸ್ವಲ್ಪ ಭಾಗವನ್ನು ಕಿತ್ತುಕೊಂಡೆನು. ನಿನ್ನ ಶತ್ರುಗಳಾದ ಫಿಲಿಷ್ಟಿಯರ ಹೆಣ್ಣುಮಕ್ಕಳು ನಿನ್ನೊಂದಿಗೆ ತಮಗೆ ಇಷ್ಟ ಬಂದಂತೆ ವರ್ತಿಸಲುಬಿಟ್ಟೆನು. ನಿನ್ನ ಕೆಟ್ಟಕಾರ್ಯಗಳನ್ನು ನೋಡಿ ಅವರೂ ಅಚ್ಚರಿಗೊಂಡರು.


ನನ್ನ ಜನರ ಪಾಪವು ಬಹಳವಾಗಿತ್ತು. ಅವರ ಪಾಪವು ಸೊದೋಮ್ ಪಟ್ಟಣದ ಪಾಪಕ್ಕಿಂತಲೂ ಹೆಚ್ಚಾಗಿತ್ತು. ಸೊದೋಮ್ ಇದ್ದಕ್ಕಿದ್ದಂತೆ ನಾಶವಾಯಿತು. ಅದು ನಾಶವಾದದ್ದು ಯಾವ ಮಾನವನಿಂದಲೂ ಅಲ್ಲ.


ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”


ಅವರ ಹೊಲಗಳೂ ದ್ರಾಕ್ಷಾಲತೆಗಳೂ ಸೊದೋಮ್ ಗೊಮೋರಗಳಂತೆ ನಾಶ ಮಾಡಲ್ಪಡುವವು.


ನಿಮ್ಮ ದೇಶವೆಲ್ಲಾ ನಿಷ್ಪ್ರಯೋಜಕವಾಗಿರುವುದು. ಅದರ ಮೇಲೆ ಉಪ್ಪೂ ಗಂಧಕವೂ ತುಂಬಿರುವುದು. ಅದರ ಮೇಲೆ ಯಾವ ಸಸಿಯೂ ಬೆಳೆಯಲಾರದು; ಕೂಳೆಯೂ ಬೆಳೆಯುವುದಿಲ್ಲ. ಸೊದೋಮ್, ಗೊಮೋರ, ಅದ್ಮಾ ಮತ್ತು ಚೆಬೋಯೀಮ್ ಎಂಬ ಪಟ್ಟಣಗಳು ಯೆಹೋವನ ಕೋಪದ ನಿಮಿತ್ತ ನಾಶವಾದಂತೆ ನಿಮ್ಮ ದೇಶವೂ ನಾಶವಾಗುವುದು.


ದೇವರು ಆ ಸೀಮೆಯ ನಗರಗಳನ್ನು ನಾಶಮಾಡಿದರೂ ಅಬ್ರಹಾಮನನ್ನು ಜ್ಞಾಪಿಸಿಕೊಂಡು ಲೋಟನ ಪ್ರಾಣವನ್ನು ಉಳಿಸಿದನು; ಆದರೆ ಲೋಟನು ವಾಸಿಸುತ್ತಿದ್ದ ನಗರವನ್ನು ನಾಶಮಾಡಿದನು.


ಆ ಕಾಲದಲ್ಲಿ, ಸೊದೋಮಿನ ರಾಜನೂ ಗೊಮೋರದ ರಾಜನೂ ಅದ್ಮಾಹದ ರಾಜನೂ ಚೆಬೋಯೀಮಿನ ರಾಜನೂ ಬೇಲಗದ, ಅಂದರೆ ಚೋಗರದ ರಾಜನೂ ಒಟ್ಟಾಗಿ ಸೇರಿಕೊಂಡು ತಮ್ಮ ಶತ್ರುಗಳ ವಿರುದ್ಧವಾಗಿ ದಂಡೆತ್ತಿಕೊಂಡು ಸಿದ್ದೀಮ್ ಕಣಿವೆಗೆ ಹೋದರು.


ಲೇವಿಯು ಮತ್ತು ಅವನ ಸಂಗಡಿಗರು ಸಂತೋಷದಿಂದ ಅಲ್ಲಿದ್ದಾಗ ಆ ನಗರದ ಕೆಲವು ಜನರು ಆ ಮನೆಗೆ ಮುತ್ತಿಗೆ ಹಾಕಿದರು. ಅವರು ಮಹಾ ನೀಚಜನರಾಗಿದ್ದರು. ಅವರು ಬಾಗಿಲು ತಟ್ಟತೊಡಗಿದರು. ಆ ಮನೆಯ ಯಜಮಾನನಾದ ವೃದ್ಧನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ. ನಾವು ಅವನೊಂದಿಗೆ ಸಂಭೋಗ ಮಾಡಬೇಕು”ಎಂದು ಕೂಗಾಡಿದರು.


“ನರಪುತ್ರನೇ, ಸಮಾರ್ಯ ಮತ್ತು ಜೆರುಸಲೇಮಿನ ಈ ಕಥೆಯನ್ನು ಕೇಳು. ಇಬ್ಬರು ಅಕ್ಕತಂಗಿಯರು ಇದ್ದರು. ಅವರು ಒಂದೇ ತಾಯಿಯ ಮಕ್ಕಳಾಗಿದ್ದರು.


ನಾನು ಸಮಾರ್ಯವನ್ನೂ ಅದರ ವಿಗ್ರಹಗಳನ್ನೂ ನಾಶಮಾಡಿದೆ. ಈಗ ಜೆರುಸಲೇಮನ್ನೂ ಅದರ ಜನರು ಮಾಡಿರುವ ವಿಗ್ರಹಗಳನ್ನೂ ನಾನು ನಾಶಮಾಡುವೆನು.’”


ಇಸ್ರೇಲೇ, ನೀನು ಜಾರಿಬಿದ್ದು ದೇವರಿಗೆ ವಿರುದ್ಧವಾಗಿ ಪಾಪಮಾಡಿದಿ. ನಿನ್ನ ದೇವರಾದ ಯೆಹೋವನ ಬಳಿಗೆ ಹಿಂದಿರುಗಿ ಬಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು