Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:52 - ಪರಿಶುದ್ದ ಬೈಬಲ್‌

52 ಆದ್ದರಿಂದ ನಿನ್ನ ಅವಮಾನವನ್ನು ನೀನು ಸಹಿಸಿಕೊಳ್ಳಬೇಕು. ನಿನಗಿಂತ ನಿನ್ನ ಸಹೋದರಿಯರು ನೀತಿವಂತರಂತೆ ತೋರುತ್ತಾರೆ. ಯಾಕೆಂದರೆ ನಿನ್ನ ಪಾಪಗಳು ಬಹಳ ಅಸಹ್ಯವಾಗಿದ್ದವು. ಆದ್ದರಿಂದ ನಿನಗೆ ಅವಮಾನವಾಗಲೇಬೇಕು; ನೀನು ನಾಚಿಕೆಯನ್ನು ಅನುಭವಿಸಲೇಬೇಕು ಯಾಕೆಂದರೆ ನೀನು ನಿನ್ನ ಸಹೋದರಿಯರನ್ನು ನಿರಪರಾಧಿಗಳಾಗಿ ಕಾಣುವಂತೆ ಮಾಡಿರುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆಪಡು; ಅವರಿಗಿಂತ ಅಧಿಕವಾಗಿ ನೀನು ಮಾಡಿದ ಅಸಹ್ಯ ಪಾಪಗಳ ಮೂಲಕ ಅವರು ನಿನಗಿಂತ ಉತ್ತಮರೆಂದು ಕಂಡುಬಂದಿದ್ದಾರೆ; ಹೌದು, ನೀನು ಲಜ್ಜೆಪಡು, ನಾಚಿಕೆಗೊಳ್ಳು; ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪರವಾಗಿ ನಿಂತದ್ದರಿಂದ ನೀನು ನಾಚಿಕೆಪಡಬೇಕು; ಅವರಿಗಿಂತ ಅಧಿಕವಾಗಿ ನೀನು ಅಸಹ್ಯ ಪಾಪಗಳನ್ನು ಮಾಡಿರುವುದರಿಂದ ಅವರು ನಿನಗಿಂತ ಉತ್ತಮರಾಗಿದ್ದಾರೆ. ಹೌದು, ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿಸಿದ್ದಕ್ಕಾಗಿ ಲಜ್ಜೆಪಡು, ನಾಚಿಕೆಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪಕ್ಷವಾಗಿ ನಿಂತದರಿಂದ ನೀನು ನಾಚಿಕೆಪಡು; ಅವರಿಗಿಂತ ಅಧಿಕವಾಗಿ ನೀನು ಮಾಡಿದ ಅಸಹ್ಯಪಾಪಗಳ ಮೂಲಕ ಅವರು ನಿನಗಿಂತ ಉತ್ತಮರೆಂದು ಕಂಡುಬಂದಿದ್ದಾರೆ; ಹೌದು, ನೀನು ಲಜ್ಜೆಪಡು, ನಾಚಿಕೆಗೊಳ್ಳು; ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿದ್ದೀಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆಪಡು. ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ. ಅವರು ನಿನಗಿಂತ ನೀತಿವಂತರು. ಹೌದು, ನೀನು ನಿನ್ನ ಸಹೋದರಿಯರನ್ನು ನೀತಿವಂತರೆಂದು ತೋರ್ಪಡಿಸಿದ್ದರಿಂದ ನೀನೇ ನಾಚಿಕೆಪಟ್ಟು, ನಿನ್ನ ನಿಂದೆಯನ್ನು ಹೊತ್ತುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:52
27 ತಿಳಿವುಗಳ ಹೋಲಿಕೆ  

ನೀವು ದುಷ್ಕೃತ್ಯಗಳನ್ನು ಮಾಡಿದಿರಿ. ಈಗ ನೀವು ಆ ಕಾರ್ಯಗಳ ವಿಷಯದಲ್ಲಿ ನಾಚಿಕೆಪಡುತ್ತೀರಿ. ಆ ಕಾರ್ಯಗಳು ನಿಮಗೆ ಸಹಾಯ ಮಾಡಿದವೇ? ಇಲ್ಲ. ಆ ಕಾರ್ಯಗಳು ಆತ್ಮಿಕ ಮರಣವನ್ನು ಮಾತ್ರ ಉಂಟುಮಾಡುತ್ತವೆ.


ಆದರೆ ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬರಿಗೂ ಅಂದರೆ ಮೊದಲನೆಯದಾಗಿ ಯೆಹೂದ್ಯರಿಗೆ, ಅನಂತರ ಗ್ರೀಕರಿಗೆ ಸಹ ದೇವರು ಮಹಿಮೆಯನ್ನು, ಘನತೆಯನ್ನು ಮತ್ತು ಶಾಂತಿಯನ್ನು ಕೊಡುವನು.


ಇಂಥವರಿಗೆ ಮರಣದಂಡನೆ ಆಗಬೇಕೆಂದು ದೇವರ ಧರ್ಮಶಾಸ್ತ್ರ ಹೇಳುತ್ತದೆ ಎಂಬುದು ಅವರಿಗೆ ಗೊತ್ತಿದೆ. ಆದರೂ ಅವರು ಇಂಥ ಕಾರ್ಯಗಳನ್ನು ಮಾಡುತ್ತಾರೆ ಮತ್ತು ಇಂಥ ಕಾರ್ಯಗಳನ್ನು ಮಾಡುವ ಜನರಿಗೆ ಪ್ರೋತ್ಸಾಹ ನೀಡುತ್ತಾರೆ.


“ಬೇರೆಯವರಿಗೆ ತೀರ್ಪು ಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಬೇರೆಯವರನ್ನು ಅಪರಾಧಿಗಳೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಇತರರನ್ನು ಕ್ಷಮಿಸಿರಿ, ಆಗ ನಿಮಗೂ ಕ್ಷಮಾಪಣೆ ಆಗುವುದು.


ಅಶ್ಶೂರದ ಅರಸನಿಗೆ ಬಹುಮಾನವಾಗಿ ಅದು ಒಯ್ಯಲ್ಪಡುವುದು; ಅವನು ಇಸ್ರೇಲರ ನಾಚಿಕೆಗೆಟ್ಟ ವಿಗ್ರಹವನ್ನು ಇಟ್ಟುಕೊಳ್ಳುವನು. ಇಸ್ರೇಲ್ ತನ್ನ ವಿಗ್ರಹಕ್ಕಾಗಿ ನಾಚಿಕೆಪಡುವದು.


“ಆದ್ದರಿಂದ ಯಾಜಕರಂತೆ ಲೇವಿಯರು ನನಗೆ ಕಾಣಿಕೆಗಳನ್ನು ತರಕೂಡದು. ಅವರು ನನ್ನ ಪವಿತ್ರ ವಸ್ತುಗಳ ಬಳಿಗೂ, ಅತೀ ಪವಿತ್ರ ವಸ್ತುಗಳ ಬಳಿಗೂ ಬರಬಾರದು. ಅವರು ಮಾಡಿದ ಭಯಂಕರ ಕೃತ್ಯಗಳಿಗಾಗಿ ಅವರು ಅವಮಾನಿತರಾಗಬೇಕು.


ಆ ಜನರು ತಮಗೊದಗಿದ ಅವಮಾನವನ್ನೂ ನನಗೆ ವಿರುದ್ಧವಾಗಿ ವರ್ತಿಸಿದ್ದನ್ನೂ ಮರೆತುಬಿಡುವರು. ತಮ್ಮ ಸ್ವದೇಶದಲ್ಲಿ ಸುರಕ್ಷಿತವಾಗಿ ವಾಸಿಸುವರು. ಅವರು ಯಾರಿಗೂ ಹೆದರಬೇಕಾಗಿಲ್ಲ.


“ನಾನು ಆ ಜನಾಂಗಗಳು ಇನ್ನು ಮೇಲೆ ನಿನ್ನನ್ನು ತುಚ್ಛೀಕರಿಸಲು ಬಿಡುವದಿಲ್ಲ. ಅವರ ಮಾತುಗಳಿಂದ ಇನ್ನು ನೀನು ಬೇಸರಪಟ್ಟುಕೊಳ್ಳಲಾರೆ. ನಿನ್ನ ಜನರಿಂದ ಮಕ್ಕಳನ್ನು ಕಿತ್ತುಕೊಳ್ಳಲಾರೆ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಹೀಗಿರಲು, ನಿನ್ನ ಕಾರ್ಯಗಳನ್ನೆಲ್ಲಾ ನಾನು ಕ್ಷಮಿಸುವಾಗ, ನೀನು ಅವುಗಳನ್ನು ಜ್ಞಾಪಿಸಿಕೊಂಡು ನಾಚಿಕೆಪಡುವೆ. ಅಹಂಕಾರದಿಂದ ಮಾತನಾಡಲು ಮತ್ತೊಮ್ಮೆ ಬಾಯಿ ತೆರೆಯಲಾಗದಂತೆ ನೀನು ಬಹಳವಾಗಿ ಅವಮಾನಿತಳಾಗುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ದೇವರು ಹೇಳಿದ್ದೇನೆಂದರೆ, “ಹಿಂದೆ, ನೀನು ಜಂಬದಿಂದ ನಿನ್ನ ತಂಗಿ ಸೊದೋಮಳ ವಿಷಯವಾಗಿ ಗೇಲಿ ಮಾಡಿದ್ದೀ. ಹಾಗೆ ನೀನು ತಿರುಗಿ ಮಾಡುವುದಿಲ್ಲ.


ಆಗ, ನೀನು ಮಾಡಿದ ಭಯಂಕರ ಕೃತ್ಯಗಳನ್ನು ನಿನ್ನ ನೆನಪಿಗೆ ತಂದುಕೊಳ್ಳುವೆ. ಆಗ ನೀನು ನಾಚಿಕೆಪಡುವೆ. ಅದೇ ಸಮಯದಲ್ಲಿ ನೀನು ನಿನ್ನ ಸಹೋದರಿಯರನ್ನು ಸಂತೈಸುವೆ.


“ಯೆಹೂದದ ಜನರಾದ ನಾವು ನಾಚಿಕೆಪಟ್ಟೆವು. ಜನರು ನಮ್ಮನ್ನು ಅಪಮಾನಗೊಳಿಸಿದ್ದರಿಂದ ನಾವು ನಾಚಿಕೆಪಟ್ಟಿದ್ದೇವೆ. ಏಕೆಂದರೆ ಯೆಹೋವನ ಆಲಯದ ಪವಿತ್ರ ಸ್ಥಳಗಳಲ್ಲಿ ಅಪರಿಚಿತರು ಪ್ರವೇಶಗೈದಿದ್ದಾರೆ.”


ಯೆಹೋವನೇ, ನಾನು ನಿನಗೆ ದೂರವಾಗಿ ಅಲೆದಾಡಿದೆನು. ಆದರೆ ನಾನು ಮಾಡಿದ ದುಷ್ಕೃತ್ಯಗಳ ಬಗ್ಗೆ ತಿಳಿದುಕೊಂಡೆನು. ಆದ್ದರಿಂದ ನಾನು ನನ್ನ ಮನಸ್ಸನ್ನೂ ಜೀವನವನ್ನೂ ಪರಿವರ್ತಿಸಿಕೊಂಡೆ. ತಾರುಣ್ಯಾವಸ್ಥೆಯಲ್ಲಿ ನಾನು ಮಾಡಿದ ಮೂರ್ಖತನಕ್ಕಾಗಿ ಲಜ್ಜೆಗೊಂಡೆನು; ನಾಚಿಕೆಪಟ್ಟೆನು.’”


ನಿಮಗೆ ಶಾಶ್ವತವಾದ ಅಪಕೀರ್ತಿಯನ್ನು ತರುವೆನು. ನೀವು ಈ ಅವಮಾನವನ್ನು ಎಂದಿಗೂ ಮರೆಯಲಾರಿರಿ.’”


ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ, ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.


ಸೌಲನು, “ನೀನೇ ನೀತಿವಂತನು. ನಾನು ತಪ್ಪು ಮಾಡಿದೆ. ನೀನು ನನಗೆ ಒಳ್ಳೆಯವನಾಗಿದ್ದೆ; ಆದರೆ ನಾನು ನಿನಗೆ ಕೆಟ್ಟವನಾದೆ.


ಯೆಹೂದನು ಆ ವಸ್ತುಗಳನ್ನು ಗುರುತಿಸಿ, “ಆಕೆ ಸರಿಯಾದದ್ದನ್ನೇ ಮಾಡಿದ್ದಾಳೆ. ನಾನೇ ತಪ್ಪು ಮಾಡಿದೆ. ನಾನು ಆಕೆಗೆ ಮಾತುಕೊಟ್ಟಂತೆ ನನ್ನ ಮಗನಾದ ಶೇಲಹನನ್ನು ಆಕೆಗೆ ಕೊಡಬೇಕಿತ್ತು” ಎಂದು ಹೇಳಿದನು. ಆದರೆ ಯೆಹೂದನು ಆಕೆಯೊಡನೆ ಮತ್ತೆ ಮಲಗಿಕೊಳ್ಳಲಿಲ್ಲ.


ಯೆಹೋವನು ನನಗೆ, “ಇಸ್ರೇಲ್ ಎಂಬಾಕೆಯು ನನಗೆ ನಂಬಿಗಸ್ತಳಾಗಿ ನಡೆದುಕೊಳ್ಳಲಿಲ್ಲ. ಆದರೆ ಅವಳು ಯೆಹೂದ ಎಂಬಾಕೆಗಿಂತ ಒಳ್ಳೆಯವಳಾಗಿ ಕಂಡು ಬಂದಳು.


ಅವರಿಗಿಂತಲೂ ಹೆಚ್ಚು ಕೆಟ್ಟು ಹೋಗಲು ನಿನಗೆ ಸ್ವಲ್ಪ ಸಮಯವೇ ಸಾಕಾಯಿತು. ಅವರಿಗಿಂತಲೂ ಇನ್ನೂ ಭಯಂಕರವಾದ ಕೆಲಸಗಳನ್ನು ನೀನು ಮಾಡಿರುವೆ.


ದೇವರಾದ ಯೆಹೋವನು ಹೀಗೆನ್ನುತ್ತಾನೆ, ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮಳು ಮತ್ತು ಆಕೆಯ ಹೆಣ್ಣುಮಕ್ಕಳು ನೀನು ನಡಿಸಿದಷ್ಟು ದುಷ್ಟತ್ವವನ್ನು ನಡಿಸಲಿಲ್ಲ.”


ದೇವರು ಹೇಳಿದ್ದೇನೆಂದರೆ: “ಸೊದೋಮ್ ಮತ್ತು ಅದರ ಸುತ್ತಲೂ ಇದ್ದ ನಗರಗಳನ್ನು ನಾನು ನಾಶಮಾಡಿದೆನು. ನಾನು ಸಮಾರ್ಯವನ್ನು ನಾಶಮಾಡಿದೆನು. ಮತ್ತು ಜೆರುಸಲೇಮೇ, ನಾನು ನಿನ್ನನ್ನು ನಾಶಮಾಡುವೆ. ಆದರೆ ನಾನು ತಿರುಗಿ ಆ ಪಟ್ಟಣಗಳನ್ನು ಕಟ್ಟುವೆನು. ಜೆರುಸಲೇಮೇ, ನಾನು ನಿನ್ನನ್ನೂ ಕಟ್ಟುವೆನು.


“ಏಲಾಮು ಕೂಡಾ ಅಲ್ಲಿದೆ. ಆಕೆಯ ಸೈನ್ಯವೆಲ್ಲಾ ಆಕೆಯ ಸಮಾಧಿಯ ಸುತ್ತಲಿದೆ. ಅವರೆಲ್ಲಾ ಯುದ್ಧದಲ್ಲಿ ಮಡಿದರು. ಆ ಪರದೇಶದವರು ಪಾತಾಳವನ್ನು ಸೇರಿದರು. ಅವರು ಜೀವಿಸಿದ್ದಾಗ ಜನರನ್ನು ಭಯಗೊಳಿಸಿದರು. ಆದರೆ ಈಗ ನಾಚಿಕೆಯೊಂದಿಗೆ ಅವರು ಪಾತಾಳವನ್ನು ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು