ಯೆಹೆಜ್ಕೇಲನು 16:53 - ಪರಿಶುದ್ದ ಬೈಬಲ್53 ದೇವರು ಹೇಳಿದ್ದೇನೆಂದರೆ: “ಸೊದೋಮ್ ಮತ್ತು ಅದರ ಸುತ್ತಲೂ ಇದ್ದ ನಗರಗಳನ್ನು ನಾನು ನಾಶಮಾಡಿದೆನು. ನಾನು ಸಮಾರ್ಯವನ್ನು ನಾಶಮಾಡಿದೆನು. ಮತ್ತು ಜೆರುಸಲೇಮೇ, ನಾನು ನಿನ್ನನ್ನು ನಾಶಮಾಡುವೆ. ಆದರೆ ನಾನು ತಿರುಗಿ ಆ ಪಟ್ಟಣಗಳನ್ನು ಕಟ್ಟುವೆನು. ಜೆರುಸಲೇಮೇ, ನಾನು ನಿನ್ನನ್ನೂ ಕಟ್ಟುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 “ಸೊದೋಮ್ ಮತ್ತು ಆಕೆಯ ಕುಮಾರ್ತೆಯರು, ಸಮಾರ್ಯ ಮತ್ತು ಆಕೆಯ ಕುಮಾರ್ತೆಯರು, ಇವರ ದುರಾವಸ್ಥೆಯನ್ನು ನಾನು ತಪ್ಪಿಸುವೆನು, ಅದರೊಂದಿಗೆ ನಿನ್ನ ದುರಾವಸ್ಥೆಯನ್ನೂ ತಪ್ಪಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 “ಸೊದೋಮ್ ಮತ್ತು ಆಕೆಯ ಕುವರಿಯರ ಹಾಗೂ ಸಮಾರಿಯ ಮತ್ತು ಆಕೆಯ ಕುವರಿಯರ ಸೌಭಾಗ್ಯವನ್ನು ಪುನಃ ನೀಡುವೆನು. ಅದರೊಂದಿಗೆ ನಿನ್ನ ಸೌಭಾಗ್ಯವನ್ನೂ ಮರಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಸೊದೋಮ್, ಆಕೆಯ ಕುಮಾರ್ತೆಯರು, ಸಮಾರ್ಯ, ಆಕೆಯ ಕುಮಾರ್ತೆಯರು, ಇವರ ದುರವಸ್ಥೆಯನ್ನು ನಾನು ತಪ್ಪಿಸುವೆನು, ಅದರೊಂದಿಗೆ ನಿನ್ನ ದುರವಸ್ಥೆಯನ್ನೂ ತಪ್ಪಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 “ ‘ಸೊದೋಮ್ ಮತ್ತು ಆಕೆಯ ಕುಮಾರಿಯರ ಹಾಗೂ ಸಮಾರ್ಯ ಮತ್ತು ಆಕೆಯ ಕುಮಾರಿಯ ಸೌಭಾಗ್ಯವನ್ನು ಪುನಃ ನೀಡುವೆನು. ಅದರೊಂದಿಗೆ ನಿನ್ನ ಸೌಭಾಗ್ಯವನ್ನೂ ಮರಳಿಸುವೆನು. ಅಧ್ಯಾಯವನ್ನು ನೋಡಿ |
ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.