Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:57 - ಪರಿಶುದ್ದ ಬೈಬಲ್‌

57 ಈಗಿನಂತೆ, ನಿನ್ನ ದುಷ್ಟತನವು ಹೊರಬರುವುದಕ್ಕಿಂತ ಮೊದಲು ನೀನು ಅದನ್ನು ಮಾಡಿದೆ. ಈಗ ಎದೋಮಿನ ಹೆಣ್ಣುಮಕ್ಕಳು (ಪಟ್ಟಣಗಳು) ಮತ್ತು ಆಕೆಯ ನೆರೆಯವರು ನಿನ್ನನ್ನು ಗೇಲಿ ಮಾಡುವರು. ಫಿಲಿಷ್ಟಿಯರ ಹೆಣ್ಣುಮಕ್ಕಳು ಸಹ ನಿನ್ನನ್ನು ಗೇಲಿ ಮಾಡುವರು. ನಿನ್ನ ಸುತ್ತಲೂ ಇರುವವರು ನಿನ್ನನ್ನು ಕಡೆಗಾಣಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ನಿನ್ನ ಕೆಟ್ಟತನವು ಬಯಲಿಗೆ ಬರುವುದಕ್ಕೆ ಮೊದಲು, ಆ ನಿನ್ನ ಗರ್ವಕಾಲದಲ್ಲಿ ಅರಾಮ್ಯರ ಪುತ್ರಿಯರಿಂದಲೂ ಮತ್ತು ಫಿಲಿಷ್ಟಿಯರ ಪುತ್ರಿಯರಿಂದಲೂ ನಿನ್ನ ಹೆಸರು ಅವರ ಬಾಯಲ್ಲಿ ಬರಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

57 ನೀನು ಗರ್ವಪಡುತ್ತಿದ್ದ ಆ ಕಾಲದಲ್ಲಿ ಸೊದೋಮೆಂಬ ನಿನ್ನ ತಂಗಿಯ ಹೆಸರು ನಿನ್ನ ಬಾಯಲ್ಲಿ ಬರಲೇ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ನಿನ್ನ ಕೆಟ್ಟತನವು ಬೈಲಿಗೆ ಬರುವದಕ್ಕೆ ಮೊದಲು ಆ ನಿನ್ನ ಗರ್ವಕಾಲದಲ್ಲಿ ಸೊದೋಮೆಂಬ ನಿನ್ನ ತಂಗಿಯ ಹೆಸರು ನಿನ್ನ ಬಾಯಲ್ಲಿ ಬರಲೇ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ಅರಾಮಿನ ಪುತ್ರಿಯರಿಂದಲೂ ಮತ್ತು ಅದರ ಸುತ್ತಲಿರುವಂತ ಎಲ್ಲವುಗಳಿಂದಲೂ ಮತ್ತು ನಿನ್ನನ್ನು ಉದಾಸೀನ ಮಾಡಿದಂಥ ಎಲ್ಲಾ ಫಿಲಿಷ್ಟಿಯರ ಪುತ್ರಿಯರಿಂದಲೂ, ನಿನಗೆ ನಿಂದೆಯು ಬಂದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವುದಕ್ಕೆ ಪೂರ್ವದಲ್ಲಿಯೇ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:57
24 ತಿಳಿವುಗಳ ಹೋಲಿಕೆ  

ಆಹಾಜನು ಯೋಥಾಮನ ಮಗನು. ಯೋಥಾಮನು ಉಜ್ಜೀಯನ ಮಗನು. ರೆಚೀನ್ ಎಂಬವನು ಅರಾಮ್ಯರ ಅರಸನಾಗಿದ್ದನು. ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ಅರಸನಾಗಿದ್ದನು. ಆಗ ಆಹಾಜನು ಯೆಹೂದದ ಅರಸನಾಗಿದ್ದನು. ರೆಚೀನ್ ಮತ್ತು ಪೆಕಹ ಇವರಿಬ್ಬರೂ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟರು. ಆದರೆ ಆ ನಗರವನ್ನು ಸೋಲಿಸಲು ಅವರಿಂದಾಗಲಿಲ್ಲ.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


“ನಾನು ಇಸ್ರೇಲನ್ನು ಗುಣಪಡಿಸುವೆನು. ಆಗ ಎಫ್ರಾಯೀಮನು ಪಾಪಮಾಡಿದ್ದಾನೆಂದು ಜನರಿಗೆ ತಿಳಿದುಬರುವದು. ಜನರಿಗೆ ಸಮಾರ್ಯದವರ ಸುಳ್ಳು ತಿಳಿದುಬರುವದು. ಆ ನಗರದಲ್ಲಿ ಕಳ್ಳರು ಬರುತ್ತಾ ಹೋಗುತ್ತಾ ಇರುವದನ್ನು ಜನರು ತಿಳಿಯುವರು.


ಈಗ ನಾನು ಆಕೆಯನ್ನು ಬಟ್ಟೆಯನ್ನು ಬಿಚ್ಚಿಹಾಕುವೆನು. ಆಕೆಯ ಬೆತ್ತಲೆತನವನ್ನು ಆಕೆಯ ಪ್ರಿಯತಮರೆಲ್ಲರೂ ನೋಡುವರು. ನನ್ನ ಕೈಯೊಳಗಿಂದ ಯಾರೂ ಆಕೆಯನ್ನು ರಕ್ಷಿಸಲಾರರು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನೀನು ಅನೇಕ ದುಷ್ಕೃತ್ಯಗಳನ್ನು ಮಾಡಿರುವೆ. ನಿನ್ನ ಪಾಪಗಳು ಬಹಳ ಸ್ಪಷ್ಟವಾಗಿವೆ. ನೀನು ದೋಷಿ ಎಂಬುದನ್ನು ನಾನು ನೆನಪುಮಾಡಿಕೊಳ್ಳುವಂತೆ ಮಾಡುವೆ. ವೈರಿಯು ನಿನ್ನನ್ನು ಹಿಡಿಯುವನು.


ಚೀಯೋನೇ, ನಿನಗಾಗಬೇಕಿದ್ದ ದಂಡನೆಯು ಸಂಪೂರ್ಣವಾಯಿತು. ಮತ್ತೆ ನೀನು ಸೆರೆವಾಸಕ್ಕೆ ಹೋಗುವುದಿಲ್ಲ. ಆದರೆ ಎದೋಮಿನ ಜನರೇ, ನಿಮ್ಮ ಪಾಪಗಳಿಗಾಗಿ ಯೆಹೋವನು ನಿಮ್ಮನ್ನು ದಂಡಿಸುವನು. ಆತನು ನಿಮ್ಮ ಪಾಪಗಳನ್ನು ಬಹಿರಂಗಪಡಿಸುವನು.


“ಯೆರೆಮೀಯನೇ, ಜನರು ಏನು ಹೇಳಿದರೆಂಬುದನ್ನು ಕೇಳಲಿಲ್ಲವೇ? ‘ಯೆಹೋವನು ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಎರಡು ಕುಟುಂಬಗಳನ್ನು ಆರಿಸಿಕೊಂಡನು; ಆದರೆ ಈಗ ಅವರನ್ನು ತಿರಸ್ಕರಿಸಿದ್ದಾನೆ.’ ಎಂದು ಅವರು ಹೇಳುತ್ತಿದ್ದಾರೆ. ಅನ್ಯಜನರು ನನ್ನ ಜನರನ್ನು ಎಷ್ಟು ದ್ವೇಷಿಸುತ್ತಾರೆಂದರೆ, ಅವರು ಒಂದು ಜನಾಂಗವಾಗಿ ಮುಂದುವರಿಯುವುದು ಅವರಿಗೆ ಇಷ್ಟವೇ ಇಲ್ಲ.”


ಅರಸನಾದ ಆಹಾಜನು ಸತ್ತ ವರ್ಷದಲ್ಲಿ ಈ ದುಃಖದ ಸಂದೇಶವು ಕೊಡಲ್ಪಟ್ಟಿತು:


ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ನಿಮ್ಮಂಥವನೆಂದು ನೀವು ಆಲೋಚಿಸಿಕೊಂಡಿರಿ. ಈಗಲಾದರೋ ನಾನು ಮೌನವಾಗಿರುವುದಿಲ್ಲ! ಎಲ್ಲವನ್ನು ನಿಮಗೆ ವಿವರಿಸಿ ನಿಮ್ಮ ಮುಂದೆಯೇ ನಿಮ್ಮನ್ನು ಟೀಕಿಸುವೆನು!


ಆಗ ಬಿಳಾಮನು ಹೀಗೆ ಹೇಳಿದನು: “ಮೋವಾಬ್ಯರ ಅರಸನಾದ ಬಾಲಾಕನು ನನ್ನನ್ನು ಅರಾಮಿನ ಪೂರ್ವ ದಿಕ್ಕಿನ ಬೆಟ್ಟಗಳಿಂದ ನನ್ನನ್ನು ಕರೆಸಿದನು. ‘ನೀನು ಬಂದು ನನಗೋಸ್ಕರ ಯಾಕೋಬ್ಯರನ್ನು ಶಪಿಸು; ಇಸ್ರೇಲರ ವಿರುದ್ಧ ಮಾತನಾಡು’ ಎಂದು ಬಾಲಾಕನು ಹೇಳಿದನು.


ದೇವರು ಹೇಳಿದ್ದೇನೆಂದರೆ, “ಜೆರುಸಲೇಮೇ, ನಾನು ನಿನ್ನನ್ನು ನಾಶಮಾಡುವೆನು. ನೀನು ಕಲ್ಲುಗಳ ರಾಶಿಯಾಗಿ ಹೋಗುವಿ. ನಿನ್ನ ಸುತ್ತಲೂ ಇರುವ ಜನಾಂಗಗಳು ನಿನ್ನನ್ನು ಗೇಲಿ ಮಾಡುತ್ತವೆ. ನಿನ್ನನ್ನು ದಾಟಿಹೋಗುವ ಪ್ರತಿಯೊಬ್ಬನೂ ನಿನ್ನನ್ನು ಕಂಡು ಹಾಸ್ಯಮಾಡುವನು.


ನಿನ್ನ ಸುತ್ತಲೂ ಇರುವ ಜನಾಂಗಗಳು ನಿನಗೆ ಅವಮಾನ ಮಾಡಿ ಗೇಲಿ ಮಾಡುತ್ತವೆ. ನೀನು ಅವರಿಗೆ ಎಚ್ಚರಿಕೆಯಾಗಿಯೂ ಭಯೋತ್ಪಾದಕಕಾರಿಯಾಗಿಯೂ ಇರುವಿ. ನಾನು ನನ್ನ ಮಹಾಕೋಪದಿಂದ ನಿನ್ನನ್ನು ದಂಡಿಸಿದಾಗ ಇದು ಸಂಭವಿಸುವುದು. ಯೆಹೋವನಾದ ನಾನೇ ಇದನ್ನು ಹೇಳಿದ್ದೇನೆ.


ಆಗ ನಾನು ನಿನ್ನನ್ನು ಶಿಕ್ಷಿಸಿದೆನು. ನಾನು ನಿನಗೆ ಕೊಟ್ಟ ದೇಶದಿಂದ ಸ್ವಲ್ಪ ಭಾಗವನ್ನು ಕಿತ್ತುಕೊಂಡೆನು. ನಿನ್ನ ಶತ್ರುಗಳಾದ ಫಿಲಿಷ್ಟಿಯರ ಹೆಣ್ಣುಮಕ್ಕಳು ನಿನ್ನೊಂದಿಗೆ ತಮಗೆ ಇಷ್ಟ ಬಂದಂತೆ ವರ್ತಿಸಲುಬಿಟ್ಟೆನು. ನಿನ್ನ ಕೆಟ್ಟಕಾರ್ಯಗಳನ್ನು ನೋಡಿ ಅವರೂ ಅಚ್ಚರಿಗೊಂಡರು.


ದೇವರು ಹೇಳಿದ್ದೇನೆಂದರೆ, “ಹಿಂದೆ, ನೀನು ಜಂಬದಿಂದ ನಿನ್ನ ತಂಗಿ ಸೊದೋಮಳ ವಿಷಯವಾಗಿ ಗೇಲಿ ಮಾಡಿದ್ದೀ. ಹಾಗೆ ನೀನು ತಿರುಗಿ ಮಾಡುವುದಿಲ್ಲ.


“‘ಜೆರುಸಲೇಮಿನ ನಿವಾಸಿಗಳೇ, ನೀವು ಅನೇಕರನ್ನು ಕೊಂದಿದ್ದೀರಿ. ಆದ್ದರಿಂದ ನೀವು ದೋಷಿಗಳು. ನೀವು ಹೊಲಸು ವಿಗ್ರಹಗಳನ್ನು ಮಾಡಿಕೊಂಡಿದ್ದೀರಿ. ಆದ್ದರಿಂದ ನೀವು ಅಶುದ್ಧರು. ನಿಮ್ಮನ್ನು ಶಿಕ್ಷಿಸುವ ಸಮಯ ಈಗ ಬಂದಿದೆ. ನಿಮ್ಮ ಅಂತ್ಯವು ಬಂದಿದೆ. ಆದ್ದರಿಂದಲೇ ಇತರ ಜನಾಂಗಗಳವರು ನಿಮ್ಮನ್ನು ಗೇಲಿಮಾಡುವರು. ಎಲ್ಲಾ ದೇಶಗಳು ನಿಮ್ಮನ್ನು ನೋಡಿ ನಗುವವು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನೀನು ನಿನ್ನ ಅಕ್ಕನ ಲೋಟದಿಂದ ಕುಡಿಯುವೆ. ಆ ಲೋಟವು ಆಳವಾಗಿಯೂ ಅಗಲವಾಗಿಯೂ ಇದ್ದು ಪೂರ್ತಿ ತುಂಬಿದೆ (ಶಿಕ್ಷೆ). ಜನರು ನಿನ್ನನ್ನು ನೋಡಿ ನಗಾಡುವರು. ನಿನ್ನನ್ನು ಕಂಡು ಹಾಸ್ಯ ಮಾಡುವರು.


ನಿನ್ನಲ್ಲಿ ಅನೇಕ ಬೆಲೆಬಾಳುವ ವಸ್ತುಗಳಿದ್ದುದರಿಂದ ಅರಾಮ್ ನಿನ್ನೊಂದಿಗೆ ವ್ಯಾಪಾರ ಮಾಡಿತು. ಅವರು ಇಂದ್ರನೀಲ, ಧೂಮ್ರ ಬಣ್ಣದ ಬಟ್ಟೆ, ಕಸೂತಿ ಕೆಲಸ, ನಯವಾದ ಬಟ್ಟೆ, ಹವಳ, ಕೆಂಪು ಹರಳು ಇತ್ಯಾದಿಗಳನ್ನು ಕೊಟ್ಟು ವಸ್ತುಗಳನ್ನು ನಿನ್ನಿಂದ ಕೊಂಡುಕೊಂಡರು.


ಆ ಸಮಯದಲ್ಲಿ, ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ಗಾಯಗೊಂಡಿರುವ ನಿನ್ನ ಜನರನ್ನು ರಕ್ಷಿಸುವೆನು. ತಮ್ಮ ದೇಶದಿಂದ ದೂರಕ್ಕೆ ಚದರಿಸಲ್ಪಟ್ಟ ಜನರನ್ನು ನಾನು ಹಿಂದಕ್ಕೆ ಕರೆದುಕೊಂಡು ಬರುವೆನು. ನಾನು ಅವರನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ಅವರನ್ನು ಹೊಗಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು