Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:58 - ಪರಿಶುದ್ದ ಬೈಬಲ್‌

58 ಈಗ ನೀನು ಮಾಡಿದ ಭಯಂಕರ ಕೃತ್ಯಗಳ ಸಲುವಾಗಿ ಶಿಕ್ಷೆ ಅನುಭವಿಸಲೇಬೇಕು.” ಇದು ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ಈಗ ನಿನ್ನ ದುರ್ನಡತೆಯ ಮತ್ತು ದುರಾಚಾರಗಳ ಫಲವನ್ನು ನೀನು ಅನುಭವಿಸಬೇಕಾಗಿ ಬಂತು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

58 ಈಗ ನಿನ್ನ ದುರ್ನಡತೆಯ ಮತ್ತು ದುರಾಚಾರಗಳ ಫಲವನ್ನು ಅವಳಂತೆ ಅನುಭವಿಸಬೇಕಾಗಿ ಬಂತು.” ಇದು ಸರ್ವೇಶ್ವರನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

58 ಈಗ ನಿನ್ನ ದುರ್ನಡತೆಯ ಮತ್ತು ದುರಾಚಾರಗಳ ಫಲವನ್ನು ನೀನು ಅನುಭವಿಸಬೇಕಾಗಿ ಬಂತು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

58 ನೀನು ನಿನ್ನ ದುಷ್ಕರ್ಮಗಳ ಮತ್ತು ನಿನ್ನ ಅಸಹ್ಯಗಳ ಫಲವನ್ನು ಅನುಭವಿಸಬೇಕಾಗಿ ಬಂತು, ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:58
5 ತಿಳಿವುಗಳ ಹೋಲಿಕೆ  

ನಿನ್ನ ನಾಚಿಕೆಕರವಾದ ಕಾರ್ಯಗಳಿಗಾಗಿ ಅವರು ನಿನ್ನನ್ನು ಶಿಕ್ಷಿಸುವರು. ನೀನು ಅಸಹ್ಯವಾದ ವಿಗ್ರಹಗಳನ್ನು ಪೂಜೆಮಾಡಿದ್ದಕ್ಕೆ ಶಿಕ್ಷಿಸಲ್ಪಡುವಿ. ಆಗ ನಾನೇ ಒಡೆಯನೂ ಯೆಹೋವನೂ ಎಂದು ನೀನು ತಿಳಿಯುವಿ.”


ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಪಾಪ ಮಾಡಿದರು. ಈಗ ಅವರು ಸತ್ತುಹೋಗಿದ್ದಾರೆ. ಆದರೆ ಅವರ ಪಾಪಗಳ ನಿಮಿತ್ತ ನಾವು ಈಗ ಸಂಕಟಪಡುತ್ತಿದ್ದೇವೆ.


ಅದಕ್ಕೆ ಕಾಯಿನನು ಯೆಹೋವನಿಗೆ, “ಈ ಶಿಕ್ಷೆಯನ್ನು ನಾನು ಸಹಿಸಲಾರೆ!


ಈ ಮಾತುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು. “ನೀನು ಮಾಡಿರುವದನ್ನು ನಾನೂ ನಿನಗೆ ಮಾಡುವೆನು. ನೀನು ನಿನ್ನ ಮದುವೆ ಒಡಂಬಡಿಕೆಯನ್ನು ಮುರಿದುಬಿಟ್ಟೆ. ನಮ್ಮ ಒಡಂಬಡಿಕೆಗೆ ನೀನು ಮಹತ್ವ ಕೊಡಲಿಲ್ಲ.


ಇವೆಲ್ಲಾ ಯಾಕೆ ಸಂಭವಿಸಬೇಕು? ಯಾಕೆಂದರೆ ನೀನು ಎಳೆಯವಳಾಗಿದ್ದಾಗ ಏನು ಸಂಭವಿಸಿತೆಂದು ಮರೆತುಬಿಟ್ಟಿರುವೆ. ನೀನು ಕೆಟ್ಟಕೆಲಸಗಳನ್ನು ಮಾಡಿ ನಾನು ಕೋಪಿಸಿಕೊಳ್ಳುವಂತೆ ಮಾಡಿರುವೆ. ಆದ್ದರಿಂದ ಆ ಕೆಟ್ಟಕಾರ್ಯ ಮಾಡಿದ್ದಕ್ಕಾಗಿ ನಿನ್ನನ್ನು ಶಿಕ್ಷಿಸಬೇಕಾಗಿ ಬಂತು. ನೀನು ಅದಕ್ಕಿಂತಲೂ ಭಯಂಕರಕೃತ್ಯ ನಡಿಸಲು ಯೋಜನೆ ಹಾಕಿಕೊಂಡಿರುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು