Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:59 - ಪರಿಶುದ್ದ ಬೈಬಲ್‌

59 ಈ ಮಾತುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು. “ನೀನು ಮಾಡಿರುವದನ್ನು ನಾನೂ ನಿನಗೆ ಮಾಡುವೆನು. ನೀನು ನಿನ್ನ ಮದುವೆ ಒಡಂಬಡಿಕೆಯನ್ನು ಮುರಿದುಬಿಟ್ಟೆ. ನಮ್ಮ ಒಡಂಬಡಿಕೆಗೆ ನೀನು ಮಹತ್ವ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿರುವೆ ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

59 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿದೆ. ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

59 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿದಿ, ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

59 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ. ನೀನು ಒಡಂಬಡಿಕೆಯನ್ನು ಮೀರಿ, ನನ್ನ ಆಣೆಯನ್ನು ತಿರಸ್ಕರಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:59
19 ತಿಳಿವುಗಳ ಹೋಲಿಕೆ  

ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಜೀವದಾಣೆ, ನಾನು ಯೆಹೂದದ ರಾಜನನ್ನು ಶಿಕ್ಷಿಸುವೆನು. ಯಾಕೆಂದರೆ ಅವನು ನನ್ನ ಮುಂದೆ ಮಾಡಿದ ಪ್ರಮಾಣಕ್ಕೆ ಗಮನಕೊಡಲಿಲ್ಲ ಮತ್ತು ನಾನು ಸಾಕ್ಷಿಯಾಗಿದ್ದ ಒಪ್ಪಂದವನ್ನು ಅವನು ಮುರಿದುಹಾಕಿದನು.


ದೇಶದ ಜನರು ದೇವರ ಉಪದೇಶಗಳಿಗೆ ವಿರುದ್ಧವಾಗಿ ನಡೆದು ತಮ್ಮ ದೇಶವನ್ನು ಹೊಲಸುಮಾಡಿದರು. ದೇವರ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ಬಹಳ ಕಾಲದ ಹಿಂದೆ ಜನರು ದೇವರೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಆದರೆ ಆ ಜನರು ಆ ಒಡಂಬಡಿಕೆಯನ್ನು ಮುರಿದರು.


ಆದರೆ ನಾನು ಅವರಿಗೆ ಉತ್ತರಕೊಡುವೆನು. ಅವರಿಗೆ ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ಇಸ್ರೇಲರಲ್ಲಿ ಯಾರಾದರೂ ಪ್ರವಾದಿಯ ಬಳಿಗೆ ಬಂದು ನನ್ನ ಸಲಹೆಯನ್ನು ಕೇಳಿದರೆ, ನಾನೇ ಆ ಮನುಷ್ಯನಿಗೆ ಉತ್ತರ ಕೊಡುವೆನು. ಅವನ ಬಳಿಯಲ್ಲಿ ಹೊಲಸು ವಿಗ್ರಹಗಳಿದ್ದರೂ, ಅವನನ್ನು ಪಾಪದಲ್ಲಿ ಬೀಳುವಂತೆ ಮಾಡಿದ ವಸ್ತುಗಳನ್ನು ಅವನು ಇಟ್ಟುಕೊಂಡಿದ್ದರೂ, ಅವನು ಆ ವಿಗ್ರಹಗಳನ್ನು ಇನ್ನೂ ಪೂಜೆ ಮಾಡುತ್ತಿದ್ದರೂ ನಾನು ಅವನೊಂದಿಗೆ ಮಾತನಾಡುವೆನು. ಅವನ ವಿಗ್ರಹಾರಾಧನೆಗೆ ತಕ್ಕ ಉತ್ತರವನ್ನೇ ಕೊಡುವೆನು.


ನಿನಗೆ ನಾನು ಇನ್ನು ಕರುಣೆಯನ್ನು ತೋರಿಸೆನು. ನಿನ್ನ ವಿಷಯದಲ್ಲಿ ನಾನು ದುಃಖಿಸುವದಿಲ್ಲ. ನೀನು ಮಾಡಿದ ಕೆಟ್ಟಕಾರ್ಯಗಳಿಗಾಗಿ ನಿನ್ನನ್ನು ಶಿಕ್ಷಿಸುವೆನು. ನೀನು ಅಂಥಾ ಭಯಂಕರ ಕೃತ್ಯಗಳನ್ನು ಮಾಡಿದ್ದೀ. ಈಗ ನಾನೇ ಯೆಹೋವನೆಂದು ನೀನು ತಿಳಿಯುವಿ.”


ಈ ಒಡಂಬಡಿಕೆ ನಾನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿಕೊಂಡ ಒಡಂಬಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಬಡಿಕೆಯನ್ನು ಮುರಿದರು.” ಇದು ಯೆಹೋವನ ನುಡಿ.


ಆ ಪ್ರಶ್ನೆಗೆ ಈ ಉತ್ತರ: ‘ಯೆಹೂದದ ಜನರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಅನುಸರಣೆಯನ್ನು ಬಿಟ್ಟುಬಿಟ್ಟರು. ಅವರು ಬೇರೆ ದೇವರುಗಳ ಸೇವೆಯನ್ನು ಮಾಡಿ ಪೂಜಿಸಿದರು.’”


ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.


ಆದರೆ ದುಷ್ಟರ ಗತಿಯನ್ನು ಏನು ಹೇಳಲಿ. ದುಷ್ಟರಿಗೆ ಕೆಡುಕು ಸಂಭವಿಸುವದು. ಅವರಿಗೆ ಬಹಳ ಸಂಕಟಗಳು ಬಂದೊದಗುವವು. ಅವರು ಮಾಡಿರುವ ಎಲ್ಲಾ ದುಷ್ಟಕ್ರಿಯೆಗಳಿಗೆ ಶಿಕ್ಷೆ ಕೊಡಲ್ಪಡುವದು.


ಯಾಕೆಂದರೆ ‘ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಬಿಟ್ಟು ತೊಲಗಿದರು. ಅವರನ್ನು ಈಜಿಪ್ಟಿನಿಂದ ಹೊರತರುವಾಗ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಅನುಸರಿಸಲಿಲ್ಲ.


ಅವರು ತಮ್ಮ ಪೂರ್ವಿಕರು ಮಾಡಿದ ಪಾಪಗಳನ್ನೇ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನ ಸಂದೇಶವನ್ನು ಕೇಳಲು ಒಪ್ಪಲಿಲ್ಲ. ಅವರು ಬೇರೆ ದೇವರುಗಳನ್ನು ಅನುಸರಿಸಿ ಪೂಜಿಸಿದರು. ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಯೆಹೂದ ಮತ್ತು ಇಸ್ರೇಲ್ ವಂಶದವರು ಮೀರಿದ್ದಾರೆ.”


“ಇತರ ದೇಶಗಳವರು, ‘ದೇವರು ಈ ದೇಶವನ್ನು ಯಾಕೆ ನಾಶಮಾಡಿದನು? ಆತನು ಯಾಕೆ ಕೋಪಗೊಂಡನು?’ ಎಂದು ವಿಚಾರಿಸುವರು.


ನಿನ್ನ ಅಂತ್ಯವು ಈಗ ಬರುವುದು. ನಿನ್ನ ಮೇಲೆ ನನಗೆ ಎಷ್ಟು ಕೋಪವಿದೆ ಎಂದು ನಾನು ತೋರಿಸುವೆನು. ನಿನ್ನ ದುಷ್ಕೃತ್ಯಗಳಿಗಾಗಿ ನಾನು ನಿನ್ನನ್ನು ಶಿಕ್ಷಿಸುವೆನು. ನಿನ್ನ ಅಸಹ್ಯಕೃತ್ಯಗಳಿಗಾಗಿ ನಾನು ಪ್ರತೀಕಾರ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು